ಬೆಂಗಳೂರು: ಕೊತ್ತನೂರು ಠಾಣೆ ಪೊಲೀಸರು ಮಾದಕ ವಸ್ತುಗಳ ಮಾರಾಟದಲ್ಲಿ ತೊಡಗಿದ್ದ ಘಾನ ದೇಶದ ಪ್ರಜೆಯೊಬ್ಬನನ್ನು ಬಂಧಿಸಿ, 52 ಲಕ್ಷಕ್ಕೂ ಹೆಚ್ಚು ಮೌಲ್ಯದ ಎಂಡಿಎಂಎ ವಶಕ್ಕೆ ಪಡೆದುಕೊಂಡಿದ್ದಾರೆ.
ಬಂಧಿತನನ್ನು ಘಾನ ದೇಶದ ಒವುಸು ಕಾಲಿನ್ಸ್ (35) ಎಂದು ಗುರುತಿಸಲಾಗಿದೆ. ಈತ ವೈದ್ಯಕೀಯ ವೀಸಾ ಪಡೆದು ಭಾರತಕ್ಕೆ ಆಗಮಿಸಿದ್ದರೂ, ನಿಜಕ್ಕೂ ಮಾದಕ ದ್ರವ್ಯ ವ್ಯಾಪಾರದಲ್ಲಿ ತೊಡಗಿದ್ದ ಎನ್ನಲಾಗಿದೆ. ಇತ್ತೀಚಿಗೆ ಪೂರ್ವಾಂಕರ ಡಬಲ್ ರಸ್ತೆಯ ಬಳಿ ಕಾರಿನಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಸಂದರ್ಭದಲ್ಲಿ ಪೊಲೀಸರ ದಾಳಿಗೆ ಸಿಕ್ಕಿಬಿದ್ದಿದ್ದಾನೆ.
ಪೊಲೀಸರು ನೀಡಿದ ಮಾಹಿತಿಯಂತೆ, ಕಾಲಿನ್ಸ್ ಈ ಹಿಂದೆ ಠಾಣೆ ವ್ಯಾಪ್ತಿಯಲ್ಲಿ ಮಾದಕ ವಸ್ತು ಸಂಬಂಧಿತ ಪ್ರಕರಣದಲ್ಲಿ ಬಂಧಿತನಾಗಿದ್ದ. ನಂತರ ಭಾರತದಿಂದ ಗಡೀಪಾರು ಮಾಡಲಾಗಿತ್ತು. ಆದರೆ ನಂತರ ಮತ್ತೆ ಭಾರತಕ್ಕೆ ನುಗ್ಗಿದ ಈತ, ಮತ್ತೊಬ್ಬ ವಿದೇಶಿಯಿಂದ ಕಡಿಮೆ ದರದಲ್ಲಿ ಮಾದಕ ವಸ್ತುಗಳನ್ನು ಖರೀದಿ ಮಾಡುತ್ತಿದ್ದು, ಬೃಹತ್ ಲಾಭಕ್ಕಾಗಿ ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಿದ್ದ.
ಬಂಧಿತನಿಂದ ಒಟ್ಟು 416 ಗ್ರಾಂ ಎಂಡಿಎಂಎ, ಒಂದು ಕಾರು, ಒಂದು ದ್ವಿಚಕ್ರ ವಾಹನ ಮತ್ತು ತೂಕದ ಯಂತ್ರಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಶಪಡಿಸಿಕೊಳ್ಳಲಾದ ಮಾದಕ ವಸ್ತುಗಳ ಮೌಲ್ಯ ಸುಮಾರು 52.15 ಲಕ್ಷ ರೂಪಾಯಿ ಎಷ್ಟು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ಮುಂದುವರಿದಿದ್ದು, ಆರೋಪಿ ಹಿಂದಿನ ಹಿನ್ನೆಲೆ ಮತ್ತು ಸಂಪರ್ಕಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ.
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…
ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…