ಉತ್ತರ ಪ್ರದೇಶದ ಮಥುರಾದಲ್ಲಿ 17 ವರ್ಷದ ಬಾಲಕಿಯೊಬ್ಬಳು ಸ್ಥಳೀಯವಾಗಿ ‘ಬಾಬಾ’ ಎಂದು ಕರೆಯಲ್ಪಡುವ ವ್ಯಕ್ತಿಯ ವಿರುದ್ಧ ಅತ್ಯಾಚಾರದ ಗಂಭೀರ ಆರೋಪ ಮಾಡಿರುವ ಘಟನೆ ಭಾರೀ ಸಂಚಲನ ಮೂಡಿಸಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರ ಆಕ್ರೋಶಕ್ಕೂ ಕಾರಣವಾಗಿದೆ.
ವಿಡಿಯೋದಲ್ಲಿ ಬಾಲಕಿ ನಡು ರಸ್ತೆಯಲ್ಲೇ ಅಳುತ್ತಾ, ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಹೇಳುತ್ತಾ ದಾರಿಹೋಕರಿಂದ ಸಹಾಯ ಕೇಳುತ್ತಿರುವ ದೃಶ್ಯಗಳು ಕಂಡು ಬರುತ್ತವೆ. ಒಡಿಶಾ ಮೂಲದ ಆರೋಪಿತ ‘ಬಾಬಾ’ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಬಾಲಕಿ ಆರೋಪಿಸಿದ್ದಾಳೆ.
ಸ್ಥಳೀಯರ ಪ್ರಕಾರ, ಬಾಲಕಿ ತನ್ನ ಅನುಭವವನ್ನು ಅಳುತ್ತಲೇ ವಿವರಿಸುತ್ತಿದ್ದಾಗ, ಅಲ್ಲಿದ್ದ ಜನರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ, ಬಾಲಕಿಯನ್ನು ರಕ್ಷಿಸಿ ವೈದ್ಯಕೀಯ ಪರೀಕ್ಷೆಗೆ ಕಳುಹಿಸಿದ್ದಾರೆ.
ಈ ಪ್ರಕರಣದ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಪರಾರಿಯಾಗಿರುವ ಆರೋಪಿಯನ್ನು ಬಂಧಿಸಲು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಜೊತೆಗೆ, ಘಟನೆ ನಡೆದ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆಗೆ ಒಳಪಡಿಸಲಾಗಿದೆ.
ಬಾಲಕಿಯ ಹೇಳಿಕೆಯನ್ನು ದಾಖಲಿಸಿಕೊಂಡಿರುವ ಪೊಲೀಸರು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, “ತಪ್ಪಿತಸ್ಥ ಯಾರು ಆಗಿದ್ದರೂ ಕಾನೂನಿನ ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು,” ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ರಾಜಸ್ಥಾನ: ಜಿಮ್‌ನಲ್ಲಿ ಕಟ್ಟುಮಸ್ತಾದ ದೇಹದಂಡನೆ ಪ್ರದರ್ಶಿಸುವ ವಿಡಿಯೋ ಹಾಗೂ ಫೋಟೋಗಳನ್ನು ತೋರಿಸಿ 82 ವರ್ಷದ ಉದ್ಯಮಿಯೊಬ್ಬರನ್ನು ಹನಿಟ್ರ್ಯಾಪ್ ಬಲೆಗೆ ಬೀಳಿಸಿ…
ಈ ವೇಳೆ ಆಕ್ರೋಶಗೊಂಡ ಗ್ರಾಮಸ್ಥರು ಮನೆಯ ಬಾಗಿಲು ಮುರಿದು ಒಳನುಗ್ಗಿದ್ದಾರೆ. ಎಎಸ್‌ಐ ಅವರನ್ನು ಮಹಿಳೆಯೊಂದಿಗೆ ಆಕ್ಷೇಪಾರ್ಹ ಸ್ಥಿತಿಯಲ್ಲಿ ಕಂಡ ಹಿನ್ನೆಲೆಯಲ್ಲಿ…
ಯಲ್ಲಾಪುರ: ತಾಲೂಕಿನ ಹುಟ್ಕಮನ ಗ್ರಾಮದಲ್ಲಿ ಚಾಕು ತೋರಿಸಿ ಮನೆಯವರನ್ನು ಬೆದರಿಸಿ ಒಂಟಿಮನೆ ದರೋಡೆ ನಡೆಸಿದ್ದ ಪ್ರಕರಣವನ್ನು ಯಲ್ಲಾಪುರ ಪೊಲೀಸರು ಭೇದಿಸುವಲ್ಲಿ…
ಧಾರವಾಡ: ತಾಲೂಕಿನ ಮಾದನಬಾವಿ ಗ್ರಾಮದ ಗೋಶಾಲೆಯಲ್ಲಿ ಗೋವುಗಳ ನಿರ್ವಹಣೆ ಸಮರ್ಪಕವಾಗಿ ನಡೆಯುತ್ತಿಲ್ಲ ಎಂಬ ಆರೋಪ ಕೇಳಿಬಂದಿದ್ದು, ಗೋಶಾಲೆಯ ಅವ್ಯವಸ್ಥೆ ಸರಿಪಡಿಸಿ…
ಮುಂಡಗೋಡ: ಪಟ್ಟಣದ ಬಸ್ ನಿಲ್ದಾಣದ ಎದುರಿನ ರಾಜಲಕ್ಷ್ಮಿ ಜ್ಯುವೆಲ್ಲರ್ಸ್ ಅಂಗಡಿಯಲ್ಲಿ ನಡೆದಿದ್ದ ಬೆಳ್ಳಿ ಆಭರಣ ಕಳವು ಪ್ರಕರಣವನ್ನು ಮುಂಡಗೋಡ ಪೊಲೀಸರು…
ಕುಮಟಾ: ಮೊಬೈಲ್ ಖರೀದಿಸಿ ಫೋನ್‌ಪೇ ಮೂಲಕ ಹಣ ಪಾವತಿಸಿರುವುದಾಗಿ ನಕಲಿ ಸಂದೇಶ ತೋರಿಸಿ ಅಂಗಡಿ ಮಾಲೀಕರಿಗೆ ವಂಚಿಸಿ ಪರಾರಿಯಾಗಿದ್ದ ಆರೋಪಿಯನ್ನು…