Categories: CrimeLatest

ಗೆಳತಿಯ ಲವ್ ಮ್ಯಾರೇಜ್ ಎಡವಟ್ಟು: ಮಾಡದ ತಪ್ಪಿಗೆ ಯುವಕ ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

ಚಂದನ್ ಎಂಬ ಯುವಕ ಈ ದುರಂತಕ್ಕೆ ಬಲಿಯಾದವರು. ಕೂಲಿ ಕೆಲಸ ಮಾಡಿಕೊಂಡು ಕುಟುಂಬಕ್ಕೆ ಆಸರೆಯಾಗಿದ್ದ ಚಂದನ್, ಅದೇ ಗ್ರಾಮದ ಯುವತಿಯೊಬ್ಬಳೊಂದಿಗೆ ಸ್ನೇಹ ಹೊಂದಿದ್ದನು. ಆದರೆ ಆ ಯುವತಿ ಬೇರೊಬ್ಬ ಯುವಕನನ್ನು ಪ್ರೀತಿಸುತ್ತಿದ್ದು, ಮನೆಯವರ ವಿರೋಧದ ನಡುವೆ ಪ್ರಿಯಕರನೊಂದಿಗೆ ಮನೆ ಬಿಟ್ಟು ಹೋಗಿದ್ದಳು ಎನ್ನಲಾಗಿದೆ.

ಮಗಳು ಕಾಣೆಯಾಗುತ್ತಿದ್ದಂತೆ ಯುವತಿಯ ತಂದೆ ಚಂದನ್ ಮೇಲೆಯೇ ಅನುಮಾನ ವ್ಯಕ್ತಪಡಿಸಿ, “ಮಗಳನ್ನು ನೀನೇ ಬಚ್ಚಿಟ್ಟಿದ್ದೀಯ” ಎಂದು ನಿರಂತರವಾಗಿ ಬೆದರಿಕೆ ಹಾಕುತ್ತಿದ್ದರೆಂದು ಆರೋಪಿಸಲಾಗಿದೆ. “ನನಗೆ ಏನೂ ಗೊತ್ತಿಲ್ಲ” ಎಂದು ಚಂದನ್ ಹೇಳಿದರೂ, ಆತನ ಮಾತು ನಂಬಲಾಗಲಿಲ್ಲ ಎನ್ನಲಾಗಿದೆ.

ಈ ಸಂಬಂಧ ದೂರು ದಾಖಲಾಗುತ್ತಿದ್ದಂತೆ ಬೀರೂರು ಪೊಲೀಸ್ ಠಾಣೆ ಪೊಲೀಸರು ಚಂದನ್ ಅವರನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದು, ಹಲ್ಲೆ ನಡೆಸಲಾಗಿದೆ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ.

ಇತ್ತ ಮನೆ ಬಿಟ್ಟು ಹೋಗಿದ್ದ ಯುವತಿ ತನ್ನ ತಂದೆಗೆ ಪತ್ರ ಬರೆದು, “ಚಂದನ್ ನನಗೆ ಅಣ್ಣನಂತೆ. ಆತನಿಗೆ ಯಾವುದೇ ಸಂಬಂಧ ಇಲ್ಲ. ಅವನಿಗೆ ಕಿರುಕುಳ ಕೊಡಬೇಡಿ” ಎಂದು ಸ್ಪಷ್ಟಪಡಿಸಿದ್ದಾಳೆ ಎನ್ನಲಾಗಿದೆ. ಆದರೂ ಕಿರುಕುಳ ಮುಂದುವರಿದಿತ್ತು ಎಂದು ಕುಟುಂಬಸ್ಥರು ದೂರಿದ್ದಾರೆ.

ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ ಚಂದನ್, ತನ್ನ ಪೋಷಕರಿಗೆ ವಾಟ್ಸಾಪ್ ಮೂಲಕ ಆಡಿಯೋ ಹಾಗೂ ಸಂದೇಶ ಕಳುಹಿಸಿ, ಬಳಿಕ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಹಾಗೂ ಸ್ನೇಹಿತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಬೀರೂರು ಠಾಣೆ ಮುಂದೆ ಪ್ರತಿಭಟನೆ ನಡೆಸಿ, ಕಿರುಕುಳ ನೀಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಮಗನನ್ನು ಕಳೆದುಕೊಂಡ ಕುಟುಂಬದ ಆಕ್ರಂದನ ಗ್ರಾಮಸ್ಥರ ಮನಕಲಕಿದ್ದು, ಪ್ರಕರಣಕ್ಕೆ ನ್ಯಾಯ ಸಿಗಬೇಕು ಎಂಬ ಒತ್ತಾಯ ಹೆಚ್ಚಾಗಿದೆ.

ಭ್ರಷ್ಟರ ಬೇಟೆ

Recent Posts

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

1 minute ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

5 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

20 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

1 day ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago