Latest

10000 ರೂಪಾಯಿ ಕೊಡಿ ನಿಮಗೇನು ತೊಂದ್ರೆ ಆಗಲ್ಲ : ಲಂಚಕ್ಕೆ ಬೇಡಿಕೆ ಇಡುತ್ತಿರುವ ತೆರಿಗೆ ಅಧಿಕಾರಿಗಳು.!

ಬೆಂಗಳೂರು, ಜುಲೈ 19: ಯುಪಿಐ ವಹಿವಾಟು ಮಾಡುತ್ತಿರುವ ಸಣ್ಣ ವ್ಯಾಪಾರಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ಶೋಕಾಸ್ ನೋಟಿಸ್ ಜಾರಿ ಮಾಡಿರುವುದು ದೊಡ್ಡ ಚರ್ಚೆಗೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಹಲವು ವ್ಯಾಪಾರಿಗಳು ಯುಪಿಐ ಸೇವೆ ನಿಲ್ಲಿಸಿರುವಂತ ತೀವ್ರ ಪರಿಣಾಮಗಳು ಎದುರಾಗಿವೆ. ಇದೀಗ ಈ ನೋಟಿಸ್ ಪ್ರಕರಣ ಮತ್ತೊಂದು ಬೆಳವಣಿಗೆ ಕಂಡಿದ್ದು, ನೋಟಿಸ್ ನೀಡಿದ ಕೆಲ ಅಧಿಕಾರಿಗಳ ವಿರುದ್ಧ ಲಂಚದ ಆರೋಪಗಳು ಕೇಳಿಬಂದಿವೆ.

ಬೆಂಗಳೂರಿನ ವಿಜಯನಗರ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ 40 ಲಕ್ಷ ರೂಪಾಯಿಗೂ ಹೆಚ್ಚು ವಹಿವಾಟು ನಡೆಸಿದ ವ್ಯಾಪಾರಸ್ಥರಿಗೆ ಜಿಎಸ್ಟಿ ನೋಂದಣಿ ಹಾಗೂ ತೆರಿಗೆ ಪಾವತಿಸಬೇಕೆಂದು ಸೂಚಿಸಿ ನೋಟಿಸ್ ನೀಡಲಾಗಿದೆ. ಇದರಿಂದ ಹಲವು ಸಣ್ಣ ವ್ಯಾಪಾರಿಗಳು ಯುಪಿಐ ಮೂಲಕ ವ್ಯವಹಾರ ಮಾಡುವುದರಲ್ಲಿ ಹಿಂದೇಟು ಹಾಕಿದ್ದಾರೆ. ಈ ಸಂದರ್ಭದಲ್ಲಿ ಕೆಲವು ಅಧಿಕಾರಿಗಳು ತಮ್ಮ ಅಧಿಕಾರ ದುರುಪಯೋಗಪಡಿಸಿಕೊಂಡು ‘ಶೋಕಾಸ್ ನೋಟಿಸ್ ರದ್ದುಮಾಡಲು 10,000 ರೂಪಾಯಿ ಕೊಡಿ, ನಿಮಗೇನು ತೊಂದರೆ ಆಗಲ್ಲ’ ಎಂದು ಲಂಚಕ್ಕೆ ಬೇಡಿಕೆ ಇಡುತ್ತಿರುವ ಘಟನೆಗಳು ಬೆಳಕಿಗೆ ಬಂದಿವೆ.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋಗಳಲ್ಲಿ, ವಿಜಯನಗರದ ವಾಣಿಜ್ಯ ತೆರಿಗೆ ಇಲಾಖೆಯ ಕೆಲ ಅಧಿಕಾರಿಗಳು ನೋಟಿಸ್ ಪಡೆದ ವ್ಯಾಪಾರಿಗಳಿಂದ ನಗದು ಪಡೆಯುತ್ತಿರುವ ದೃಶ್ಯಗಳು ಪತ್ತೆಯಾಗಿವೆ. ಇದರಿಂದ ವ್ಯಾಪಾರಿಗಳು ಭಯಭೀತರಾಗಿದ್ದು, ಸರಕಾರದಿಂದ ಸ್ಪಷ್ಟನೆ ಮತ್ತು ನ್ಯಾಯ ನಿರೀಕ್ಷಿಸುತ್ತಿದ್ದಾರೆ.

ಈ ಬೆಳವಣಿಗೆಯ ಹಿನ್ನೆಲೆಯಲ್ಲಿ ಸಣ್ಣ ವ್ಯಾಪಾರಿಗಳು ಸರ್ಕಾರಿ ವ್ಯವಸ್ಥೆಯ ಮೇಲಿನ ನಂಬಿಕೆಯನ್ನು ಕಳೆದುಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ. ಲಂಚದ ಆರೋಪಗಳ ಕುರಿತು ತನಿಖೆ ನಡೆಸುವಂತೆ ವ್ಯಾಪಾರಿ ಸಂಘಟನೆಗಳು ಆಗ್ರಹಿಸುತ್ತಿದ್ದು, ಈ ಕುರಿತಂತೆ ಸಚಿವಾಲಯ ತ್ವರಿತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿವೆ.

nazeer ahamad

Recent Posts

ಕರ್ನಾಟಕ ಹೈಕೋರ್ಟ್‌ನಲ್ಲಿ 70 ಹುದ್ದೆಗಳು: ಆಸಕ್ತರಿಗೆ ಉದ್ಯೋಗದ ಸುವರ್ಣಾವಕಾಶ

ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…

3 hours ago

ಕೋರ್ಟ್ ಉದ್ಯೋಗದ ಹೆಸರಿನಲ್ಲಿ ಕೋಟಿ ಕೋಟಿ ಮೋಸ: ಬೆಂಗಳೂರಿನಲ್ಲಿ ಫ್ರಾಡ್ ದಂಪತಿ ಬಂಧನ

ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…

3 hours ago

ಗಂಡ ಬಿಟ್ಟ ಮಹಿಳೆಯರೇ ಇವನ ಟಾರ್ಗೆಟ್; 5 ಮಹಿಳೆಯರ ಜೊತೆ ದೈಹಿಕ ಸಂಪರ್ಕ ಬೆಳೆಸಿ ವಂಚನೆ..!

ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…

3 hours ago

ಗಂಡನಿಲ್ಲದ ವೇಳೆ ಬಾಡಿಗೆಗೆ ಇದ್ದ ಯುವಕನ ಜೊತೆ ಸರಸ; ಅಡ್ಡಿಯಾದ ಅತ್ತೆಯನ್ನು ಕೊಂದ ಸೊಸೆ

ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…

3 hours ago

ಗೌರಿಬಿದನೂರಿನಲ್ಲಿ ಭೀಕರ ರಸ್ತೆ ಅಪಘಾತ – ಮಹಿಳೆ ಸಾವು, ಪುತ್ರನಿಗೆ ಗಾಯ

ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…

4 hours ago

ಗೌರಿಬಿದನೂರಿನಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಅಕ್ರಮ ಬಳಕೆ ವಿರುದ್ಧ ದಾಳಿ – 36 ಸಿಲಿಂಡರ್‌ಗಳು ಜಪ್ತಿ

ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…

4 hours ago