Latest

ಚಿನ್ನ ಕಳ್ಳಸಾಗಣೆ ಪ್ರಕರಣ: ರನ್ಯಾ ರಾವ್‌ ಸಂಬಂಧಿತವಾಗಿ ಬಳ್ಳಾರಿಯಲ್ಲಿ ಚಿನ್ನದ ಅಂಗಡಿ ಮಾಲೀಕ ಸಾಹಿಲ್ ಜೈನ್‌ ಬಂಧನ

ಬೆಂಗಳೂರು: ನಟಿ ರನ್ಯಾ ರಾವ್ ವಿರುದ್ಧದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಮತ್ತೊಂದು ಪ್ರಮುಖ ಬಂಧನವಾಗಿದೆ. ಡೈರೆಕ್ಟೊರೇಟ್ ಆಫ್ ರೆವೆನ್ಯೂ ಇಂಟಲಿಜೆನ್ಸ್ (ಡಿಆರ್‌ಐ) ಅಧಿಕಾರಿಗಳು ಬಳ್ಳಾರಿಯಲ್ಲಿ ಚಿನ್ನದ ಅಂಗಡಿ ಮಾಲೀಕ ಸಾಹಿಲ್ ಜೈನ್‌ ಅನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದಾರೆ. ಈ ಹಿಂದೆ ನಟಿ ರನ್ಯಾ ರಾವ್ ಮತ್ತು ಆಕೆಯ ಮಾಜಿ ಪ್ರಿಯಕರ ತರುಣ್ ರಾಜ್‌ನ್ನು ಬಂಧಿಸಲಾಗಿತ್ತು.

ಸಾಹಿಲ್ ಜೈನ್‌ ಚಿನ್ನ ಕರಗಿಸುತ್ತಿದ್ದ ಮಾಹಿತಿ ಬಯಲು

ವಿಚಾರಣೆ ವೇಳೆ ರನ್ಯಾ ರಾವ್‌ ಮತ್ತು ತರುಣ್ ರಾಜ್‌ ನಿರಂತರ ಸಂಪರ್ಕದಲ್ಲಿದ್ದ ಮತ್ತೊಬ್ಬ ವ್ಯಕ್ತಿ ಸಾಹಿಲ್ ಜೈನ್‌ ಎಂಬುದು ಹೊರಬಿದ್ದಿದೆ. ಚಿನ್ನದ ವ್ಯಾಪಾರ ನಡೆಸುತ್ತಿದ್ದ ಈತ, ಕಳ್ಳಸಾಗಣೆ ಮಾಡಲಾಗುತ್ತಿದ್ದ ಚಿನ್ನವನ್ನು ಕರಗಿಸಿ, ಆಪತ್ತಿಗೆ ಬಾರದಂತೆ ಮಾರಾಟ ಮಾಡುತ್ತಿದ್ದ. ಇದಕ್ಕಾಗಿ ಶೇ.10ರಿಂದ 15ರಷ್ಟು ಕಮಿಷನ್ ಪಡೆಯುತ್ತಿದ್ದನೆಂಬ ಮಾಹಿತಿ ಲಭ್ಯವಾಗಿದೆ.

ಡಿಆರ್‌ಐ ಅಧಿಕಾರಿಗಳು ಗುರುವಾರ ಬಳ್ಳಾರಿಯಲ್ಲಿ ಕಾರ್ಯಾಚರಣೆ ನಡೆಸಿ, ಸಾಹಿಲ್ ಜೈನ್‌ನ್ನು ಬಂಧಿಸಿದ್ದಾರೆ. ಇದೀಗ ನಾಲ್ಕು ದಿನಗಳ ಕಾಲ ವಶಕ್ಕೆ ಪಡೆದು, ಆತನ ವಿರುದ್ಧ ಆಳವಾದ ತನಿಖೆ ನಡೆಸಲಾಗುತ್ತಿದೆ.

ಮುಂಬೈಯಿಂದ ಬಳ್ಳಾರಿಯ ತನಕದ ಸಂಪರ್ಕ ಜಾಲ

ಮೂಲತಃ ಬಟ್ಟೆ ವ್ಯಾಪಾರದಿಂದ ತನ್ನ ವೃತ್ತಿ ಆರಂಭಿಸಿದ್ದ ಸಾಹಿಲ್ ಜೈನ್‌ ಕುಟುಂಬ ಹಲವು ವರ್ಷಗಳವರೆಗೆ ಬಳ್ಳಾರಿಯಲ್ಲಿ ವಾಸವಿತ್ತು. ಆದರೆ, ಇತ್ತೀಚೆಗೆ ಅವರು ಬೆಂಗಳೂರಿಗೆ ಸ್ಥಳಾಂತರವಾದರೂ, ಸಾಹಿಲ್ ಮಾತ್ರ ಮುಂಬೈನಲ್ಲಿ ತನ್ನ ಸೋದರ ಮಾವನೊಂದಿಗೆ ವಾಸವಿದ್ದ.

ಈ ಹಿಂದೆ ಸಹ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಮುಂಬೈ ವಿಮಾನ ನಿಲ್ದಾಣದಲ್ಲಿ ಸಾಹಿಲ್ ಜೈನ್‌ನ್ನು ಡಿಆರ್‌ಐ ಅಧಿಕಾರಿಗಳು ಬಂಧಿಸಿದ್ದ ತಿಳಿದು ಬಂದಿದೆ. ಇದೀಗ, ನಟಿ ರನ್ಯಾ ರಾವ್‌ ಜತೆಗಿನ ಅವಿನಾಭಾವ ಸಂಬಂಧ ಮತ್ತು ಚಿನ್ನ ಕಳ್ಳಸಾಗಣೆಯಲ್ಲಿ ಅವನ ಪಾತ್ರದ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಅಧಿಕಾರಿಗಳು ವಿಚಾರಣೆ ಮುಂದುವರಿಸಿದ್ದಾರೆ.

ತನಿಖೆ ಮುಂದುವರಿದಂತೆ ಮತ್ತಷ್ಟು ಬಂಧನ ಸಾಧ್ಯತೆ

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಬಂಧನಗಳು ನಡೆಯುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರನ್ಯಾ ರಾವ್‌, ತರುಣ್ ರಾಜ್ ಹಾಗೂ ಸಾಹಿಲ್ ಜೈನ್‌ ನಡುವಿನ ಹಣಕಾಸು ಲೆನದು-ದೆನದು, ಚಿನ್ನದ ಸಾಗಣೆ ಮಾರ್ಗಗಳು ಮತ್ತು ಈ ಜಾಲದಲ್ಲಿ ಇನ್ನೂ ಎಷ್ಟು ಮಂದಿ ಭಾಗಿಯಾಗಿದ್ದಾರೆ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ.

ಡಿಆರ್‌ಐ ನಡೆಸುತ್ತಿರುವ ಈ ಆಪರೇಷನ್‌ಗೆ ಸಿನಿಮಾ, ಉದ್ಯಮ ಹಾಗೂ ಸ್ಮಗ್ಲಿಂಗ್ ಜಾಲದ ನಡುವಿನ ಸಂಪರ್ಕದ ಕುರಿತ ಬಹುಮುಖ್ಯ ಅಂಶಗಳು ಹೊರಬರುತ್ತಿವೆ.

nazeer ahamad

Recent Posts

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

22 hours ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

1 day ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

2 days ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

2 days ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

3 days ago