ಬೆಂಗಳೂರು: ಯಾತ್ರೆಗೆ ತೆರಳಿದ್ದ ಸಂದರ್ಭವನ್ನು ಉಪಯೋಗಿಸಿಕೊಂಡು, ಮನೆಗೆ ಬೀಗ ಹಾಕಿದ್ದೇ ಸುಲಭ ಅವಕಾಶವಾಯಿತು ಎಂಬಂತೆ ಮನೆಯಲ್ಲಿನ ಚಿನ್ನಾಭರಣಗಳನ್ನು ಕದ್ದಮೇಲಾದ್ದು ಯಾರಿಂದೋ ಅಲ್ಲ… ತನಿಖೆಯಲ್ಲಿ ದೂರುದಾರರ ಮಗಳೇ ಈ ಕೃತ್ಯ ಎಸಗಿರುವುದು ಬಹಿರಂಗವಾಗಿದೆ.
ಈ ಘಟನೆ ಮಾರತಹಳ್ಳಿಯ ಯಮಲೂರಿನಲ್ಲಿ ನಡೆದಿದ್ದು, ಸುಮಾರು 258 ಗ್ರಾಂ ತೂಕದ ಚಿನ್ನಾಭರಣಗಳು ಕಳವಾಗಿವೆ. ಅವುಗಳ ಮೌಲ್ಯ ಸುಮಾರು 21 ಲಕ್ಷ ರೂಪಾಯಿಯಷ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಯಾತ್ರೆಯಿಂದ ಮನೆಗೆ ಹಿಂದಿರುಗಿದ ಕುಟುಂಬದವರು ಬೀಗ ಹಾಗೆ ಇದ್ದರೂ, ಮನೆಯೊಳಗೆ ಪ್ರವೇಶಿಸಿದಾಗ ಬೀರುವಿನಲ್ಲಿ ಇರಿಸಿದ್ದ ಆಭರಣಗಳು ಕಾಣೆಯಾಗಿರುವುದು ಗೊತ್ತಾಯಿತು. ತಕ್ಷಣ ಮಾರತಹಳ್ಳಿ ಪೊಲೀಸರಿಗೆ ದೂರು ನೀಡಲಾಯಿತು.
ಪೊಲೀಸರ ತನಿಖೆ ವೇಳೆ ದೂರುದಾರರು ತಮ್ಮ ಮಗಳು, ತಂಗಿ ಮತ್ತು ತಂಗಿಯ ಮಗನ ಮೇಲೆ ಅನುಮಾನ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಮಗಳನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಿದಾಗ, ಆಕೆ ಕೃತ್ಯವನ್ನೇ ಒಪ್ಪಿಕೊಂಡಿದ್ದಾಳೆ.
ವಿಚಾರಣೆಯಲ್ಲಿ ಆರೋಪಿತೆ 30 ಗ್ರಾಂ ಚಿನ್ನಾಭರಣವನ್ನು ಜ್ಯುವೆಲ್ಲರಿ ಅಂಗಡಿಯೊಂದರಲ್ಲಿ ಅಡಮಾನವಿಟ್ಟು, ಉಳಿದ 228 ಗ್ರಾಂನ್ನು ತನ್ನ ಮನೆಯಲ್ಲಿ ಇಟ್ಟುಕೊಂಡಿರುವುದಾಗಿ ಮಾಹಿತಿ ನೀಡಿದ್ದಾಳೆ. ಈ ಹೇಳಿಕೆಯ ಮೇರೆಗೆ ಪೊಲೀಸರು ಎರಡು ಕಡೆಗಳಿಂದ ಎಲ್ಲಾ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
ಪೊಲೀಸ್ ಇನ್‌ಸ್ಪೆಕ್ಟರ್ ಅನಿಲ್ ಕುಮಾರ್ ನೇತೃತ್ವದ ತಂಡ ಈ ಪ್ರಕರಣವನ್ನು ಬಗೆಹರಿಸಲು ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದು, ಮಗಳಿಗೆ ನೋಟಿಸ್ ಜಾರಿಗೊಳಿಸಿ ತಾತ್ಕಾಲಿಕವಾಗಿ ಬಿಡುಗಡೆ ಮಾಡಲಾಗಿದೆ.
ಈ ಘಟನೆ ಮತ್ತೆ ಮನೆಯೊಳಗಿನ ವ್ಯಕ್ತಿಗಳ ಮೇಲೆಯೂ ಎಚ್ಚರಿಕೆ ವಹಿಸಬೇಕೆಂಬ ಸಂದೇಶವನ್ನು ನೀಡಿದೆ.
ಬಾಗಲಕೋಟೆ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಚೀಫ್ ಇಂಜಿನಿಯರ್ ವಸಂತ ವಾಲಪ್ಪ ನಾಯಕ ಅವರ ಬೆಂಗಳೂರು ಸೇರಿದಂತೆ ಬಾಗಲಕೋಟೆಯಲ್ಲಿರುವ ಮನೆಯ…
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…