ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಅತಿಥಿ ಉಪನ್ಯಾಸಕರಿಗೆ ಕರ್ನಾಟಕ ಸರ್ಕಾರ ಮಹತ್ವದ ಸೌಲಭ್ಯ ಘೋಷಿಸಿದೆ. 2026–27ನೇ ಶೈಕ್ಷಣಿಕ ಸಾಲಿನಿಂದ ಮಹಿಳಾ ಅತಿಥಿ ಉಪನ್ಯಾಸಕರಿಗೆ 90 ದಿನಗಳ ವೇತನ ಸಹಿತ ಮಾತೃತ್ವ ರಜೆ ನೀಡಲು ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶ ಹೊರಡಿಸಲಾಗಿದೆ.
ಈ ಸಂಬಂಧ ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರ ಕಚೇರಿಯು ಪರಿಚಲನಾದೇಶ ಸಂಖ್ಯೆ: ಕಾ ಶಿ ಇ/39 ಅ ಉ ಆ/2026-27/ನೇವಿ-1, ದಿನಾಂಕ: 13.07.2026ರ ಮೂಲಕ ಸರ್ಕಾರದ ಆದೇಶ ಸಂಖ್ಯೆ: ಇಡಿ 166 ಡಿ ಸಿ ಇ 2026(ಇ), ದಿನಾಂಕ: 25.06.2026 ಅನ್ನು ಮುಂದಿನ ಅಗತ್ಯ ಕ್ರಮಕ್ಕಾಗಿ ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳಿಗೆ ರವಾನಿಸಿದೆ.
ಸರ್ಕಾರದ ಈ ಆದೇಶದ ಅನ್ವಯ, ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅರ್ಹ ಮಹಿಳಾ ಅತಿಥಿ ಉಪನ್ಯಾಸಕರು 2026–27ನೇ ಶೈಕ್ಷಣಿಕ ಸಾಲಿನಿಂದ 90 ದಿನಗಳ ವೇತನ ಸಹಿತ ಮಾತೃತ್ವ ರಜೆಯ ಸೌಲಭ್ಯ ಪಡೆಯಲಿದ್ದಾರೆ.
ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಮಹಿಳೆಯರಿಗೆ ಮಾತೃತ್ವದ ಅವಧಿಯಲ್ಲಿ ಆರ್ಥಿಕ ನೆರವು ಮತ್ತು ಉದ್ಯೋಗ ಸಂಬಂಧಿತ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಸರ್ಕಾರದ ಈ ಕ್ರಮ ಮಹತ್ವದ್ದಾಗಿದೆ. ಮಾತೃತ್ವದ ಸಂದರ್ಭದಲ್ಲಿ ಆದಾಯದ ಆತಂಕವಿಲ್ಲದೆ ರಜೆ ಪಡೆಯಲು ಈ ನಿರ್ಧಾರ ನೆರವಾಗಲಿದೆ.
ರಾಜ್ಯ ಸರ್ಕಾರದ ಈ ತೀರ್ಮಾನವನ್ನು ಮಹಿಳಾ ಅತಿಥಿ ಉಪನ್ಯಾಸಕರು ಹಾಗೂ ಶಿಕ್ಷಣ ವಲಯದವರು ಸ್ವಾಗತಿಸಿದ್ದಾರೆ. ಮಹಿಳಾ ಉದ್ಯೋಗಿಗಳ ಕಲ್ಯಾಣ ಮತ್ತು ಸಬಲೀಕರಣದ ದೃಷ್ಟಿಯಿಂದ ಇದು ಮಹತ್ವದ ನಿರ್ಧಾರವಾಗಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
ಬೆಂಗಳೂರು: ಸಾರ್ವಜನಿಕ ಸಾರಿಗೆ ಬಸ್‌ನಲ್ಲಿ ಬಾಕಿ ಚಿಲ್ಲರೆ ಹಣ ಕೇಳಿದ ಪ್ರಯಾಣಿಕನೊಂದಿಗೆ ನಿರ್ವಾಹಕ (ಕಂಡಕ್ಟರ್) ಜಗಳವಾಡಿ ಅಸಭ್ಯವಾಗಿ ವರ್ತಿಸಿದ್ದಾರೆ ಎನ್ನಲಾದ…
ಚಿಕ್ಕಬಳ್ಳಾಪುರ: ನ್ಯಾಯಾಲಯದಲ್ಲಿ ತನ್ನ ಪರವಾಗಿ ಅನುಕೂಲಕರ ತೀರ್ಪು ಬರಬೇಕೆಂಬ ಉದ್ದೇಶದಿಂದ ಮಹಿಳಾ ನ್ಯಾಯಾಧೀಶರ ಕುರ್ಚಿಗೆ ಮಾಟ-ಮಂತ್ರ ಮಾಡಿರುವ ಆರೋಪದ ಘಟನೆ…
ಬೆಂಗಳೂರು: ರಾಜಧಾನಿಯ ರಿಯಲ್ ಎಸ್ಟೇಟ್ ವಂಚನೆ ಪ್ರಕರಣಗಳಲ್ಲಿ ಅತ್ಯಂತ ಸಂಚಲನ ಮೂಡಿಸಿರುವ ಪ್ರಕರಣವೊಂದನ್ನು ಕೆಂಗೇರಿ ಪೊಲೀಸರು ಭೇದಿಸಿದ್ದಾರೆ. ಶ್ರೀ ಆದಿಚುಂಚನಗಿರಿ…
ಹರಿಹರ: ನಗರದ ಪೇಟೆ ಆಂಜನೇಯ ಸ್ವಾಮಿ ದೇವಸ್ಥಾನದ ಸಮೀಪ ನಡೆಯುತ್ತಿರುವ ಚರಂಡಿ ನಿರ್ಮಾಣ ಕಾಮಗಾರಿಯನ್ನು ಹರಿಹರ ವಿಧಾನಸಭಾ ಕ್ಷೇತ್ರದ ಶಾಸಕ…
ಬೆಂಗಳೂರು: ಪತ್ನಿ ಹಾಗೂ ಮಾವನ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ ಎಂಬ ಗಂಭೀರ ಆರೋಪ ಪಿಎಸ್‌ಐ ಭೈರಪ್ಪ ವಿರುದ್ಧ ಕೇಳಿಬಂದಿದೆ.…
ರಾಜ್ಯಾದ್ಯಂತ ಗಮನ ಸೆಳೆದಿರುವ ಹರಿಹರ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ.…