Categories: CinemaLatest

ಸೌಮ್ಯ ಮದುವೆ ವೇದಿಕೆಯಲ್ಲೇ ಗಾಸಿಪ್‌ಗೆ ಬ್ರೇಕ್; ‘ನಾವು ಕೇವಲ ಆತ್ಮೀಯ ಸ್ನೇಹಿತರು’ ಎಂದ ಅಶ್ವತಿ ನಾಯರ್

ಕನ್ನಡ ಕಿರುತೆರೆಯ ಜನಪ್ರಿಯ ನಟಿ ವಿ.ಎಸ್. ಸೌಮ್ಯ ಅವರು ತಮ್ಮ ದೀರ್ಘಕಾಲದ ಸ್ನೇಹಿತ ಹಾಗೂ ಫಿಟ್ನೆಸ್ ಟ್ರೈನರ್ ಗೌತಮ್ ಅವರೊಂದಿಗೆ ಸರಳವಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಕುಟುಂಬಸ್ಥರು, ಆಪ್ತರು ಹಾಗೂ ಸ್ನೇಹಿತರ ಸಮ್ಮುಖದಲ್ಲಿ ನಡೆದ ಈ ವಿವಾಹ ಸಮಾರಂಭವು ಸಂತಸಕ್ಕೆ ಕಾರಣವಾಗಿದ್ದರೆ, ಇದೇ ವೇಳೆ ಸಾಮಾಜಿಕ ಜಾಲತಾಣಗಳಲ್ಲಿ ಹಲವು ವರ್ಷಗಳಿಂದ ಹರಿದಾಡುತ್ತಿದ್ದ ವದಂತಿಗಳಿಗೆ ಕೂಡ ತೆರೆ ಎಳೆದಿದೆ.

ಮದುವೆ ಸಮಾರಂಭದಲ್ಲಿ ಭಾಗವಹಿಸಿದ್ದ ನಟಿ ಅಶ್ವತಿ ನಾಯರ್ ಮಾಧ್ಯಮಗಳೊಂದಿಗೆ ಮಾತನಾಡಿ, ತಮ್ಮ ಮತ್ತು ಸೌಮ್ಯ ನಡುವಿನ ಸಂಬಂಧದ ಬಗ್ಗೆ ಹರಡುತ್ತಿದ್ದ ‘ಲೆಸ್ಬಿಯನ್’ ಎಂಬ ಗಾಸಿಪ್‌ಗಳಿಗೆ ಸ್ಪಷ್ಟ ಉತ್ತರ ನೀಡಿದ್ದಾರೆ. “ಬಹಳ ದಿನಗಳಿಂದ ನಮ್ಮ ಬಗ್ಗೆ ಆ ರೀತಿಯ ಕಾಮೆಂಟ್‌ಗಳು ಬರುತ್ತಿದ್ದವು. ಆರಂಭದಲ್ಲಿ ಅದನ್ನು ನಾವು ಗಂಭೀರವಾಗಿ ತೆಗೆದುಕೊಂಡಿರಲಿಲ್ಲ. ಆದರೆ ಈಗಲಾದರೂ ಆ ರೀತಿಯ ಸುಳ್ಳು ಸುದ್ದಿಗಳನ್ನು ಹರಡುವುದನ್ನು ನಿಲ್ಲಿಸಿ. ಸೌಮ್ಯ ನನಗೆ ಅಕ್ಕನಂತವರು. ನಾವು ಕೇವಲ ಆತ್ಮೀಯ ಸ್ನೇಹಿತರು. ನಮಗೆ ನಮ್ಮದೇ ಆದ ವೈಯಕ್ತಿಕ ಜೀವನವಿದೆ,” ಎಂದು ಅಶ್ವತಿ ಹೇಳಿದ್ದಾರೆ.

ತಮ್ಮ ಸ್ನೇಹದ ಬಗ್ಗೆ ಭಾವುಕರಾಗಿ ಮಾತನಾಡಿದ ಅವರು, “ಸೌಮ್ಯ ಯಾವಾಗಲೂ ನನ್ನ ಜೀವನದಲ್ಲಿ ವಿಶೇಷ ಸ್ಥಾನ ಹೊಂದಿರುತ್ತಾರೆ. ಈಗ ಅವರ ಪತಿ ಗೌತಮ್ ಕೂಡ ನನ್ನ ಆತ್ಮೀಯ ಸ್ನೇಹಿತರಾಗಿದ್ದಾರೆ. ಅವರಿಬ್ಬರೂ ಸದಾ ಸಂತೋಷವಾಗಿರಲಿ ಎಂಬುದೇ ನನ್ನ ಹಾರೈಕೆ,” ಎಂದು ಶುಭ ಹಾರೈಸಿದರು.

ನಟಿ ಸೌಮ್ಯ ಅವರು ಕಿರುತೆರೆಯಲ್ಲಿ ‘ಲೇಡೀಸ್ ರೂಮ್’ ಹಾಗೂ ‘ಟೀಚರಮ್ಮ’ ಧಾರಾವಾಹಿಗಳ ಮೂಲಕ ಜನಪ್ರಿಯತೆ ಗಳಿಸಿದ್ದಾರೆ. ನಟನಾ ಕ್ಷೇತ್ರಕ್ಕೆ ಬರುವ ಮೊದಲು ಅವರು ಪೋಲ್ ವಾಲ್ಟ್ ಸ್ಪರ್ಧೆಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಕಂಚಿನ ಪದಕ ಗೆದ್ದ ಕ್ರೀಡಾಪಟುವಾಗಿಯೂ ಗುರುತಿಸಿಕೊಂಡಿದ್ದರು. ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಅವರ ಪ್ರತಿಭೆಯನ್ನು ಗಮನಿಸಿದ ನಿರ್ದೇಶಕರು ನಟನೆಯ ಅವಕಾಶ ನೀಡಿದ್ದರು.

ಇದೀಗ ಗೌತಮ್ ಅವರೊಂದಿಗೆ ಹೊಸ ಜೀವನ ಆರಂಭಿಸಿರುವ ಸೌಮ್ಯ ಅವರಿಗೆ ಚಿತ್ರರಂಗದ ಗಣ್ಯರು, ಸ್ನೇಹಿತರು ಹಾಗೂ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರ ಹರಿದುಬರುತ್ತಿದೆ. ಇದೇ ವೇಳೆ ಅಶ್ವತಿ ನಾಯರ್ ಅವರ ಸ್ಪಷ್ಟನೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

ಭ್ರಷ್ಟರ ಬೇಟೆ

Recent Posts

ಬಾಗಲಕೋಟೆಯಲ್ಲಿ ರಾತ್ರಿ 11 ಗಂಟೆಯ ಬಳಿಕ ನಿಯಮ ಉಲ್ಲಂಘಿಸಿ ಮರಳು ಸಾಗಾಟ: ನಂಬರ್ ಪ್ಲೇಟ್ ಇಲ್ಲದ ಟಿಪ್ಪರ್‌ಗಳ ಸಂಚಾರ, ಅಧಿಕಾರಿಗಳು ಮೌನ!?

ಬಾಗಲಕೋಟೆ: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆಯೇ ಎಂಬ…

1 day ago

ಪಾಸ್‌ಪೋರ್ಟ್ ಶುಲ್ಕ ಹೆಚ್ಚಳ: ಮಕ್ಕಳ ಮಾನ್ಯತಾ ಅವಧಿಯಲ್ಲೂ ಬದಲಾವಣೆ, ಹೊಸ ನಿಯಮ ಜಾರಿ

ನವದೆಹಲಿ: ಪಾಸ್‌ಪೋರ್ಟ್ ಅರ್ಜಿ ಶುಲ್ಕವನ್ನು ಹೆಚ್ಚಿಸುವುದರ ಜೊತೆಗೆ ಮಕ್ಕಳ ಪಾಸ್‌ಪೋರ್ಟ್‌ನ ಮಾನ್ಯತಾ ಅವಧಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗಳನ್ನು…

1 day ago

ಗೌರಿಬಿದನೂರಿನಲ್ಲಿ ಅಪಘಾತಕ್ಕೆ ನಾಲ್ಕು ವರ್ಷದ ಬಾಲಕಿ ಬಲಿ

ತಾಯಿ-ತಂದೆಯಿಲ್ಲದ ವೇದಳನ್ನು ಕಳೆದುಕೊಂಡ ಅಜ್ಜಿ-ತಾತನ ಆಕ್ರಂದನ ಗೌರಿಬಿದನೂರು: ನಗರದಲ್ಲಿ ಅಪಘಾತಗಳ ಸರಣಿ ಮುಂದುವರಿದಿರುವ ನಡುವೆಯೇ ಮತ್ತೊಂದು ಮನಕಲಕುವ ರಸ್ತೆ ದುರಂತ…

5 days ago

ಸರ್ಕಾರಿ ಶಾಲಾ ಮಕ್ಕಳಿಗೆ ಅನ್ಯಾಯ: ನೂರು ರೂಪಾಯಿಗೂ ಬೆಲೆಬಾಳದ ಶೂಗಳನ್ನು ವಿತರಿಸಿರುವ ಸರ್ಕಾರ, ಒಂದೇ ತಿಂಗಳಿಗೆ ಹಾಳದ ಶೂಗಳು..!

ಕಳೆದ ವರ್ಷದ 265 ರೂ. ಬೆಲೆಯ ಶೂಗಳು ಇನ್ನೂ ಬಾಳಿಕೆ; ಪ್ರಸಕ್ತ ಸಾಲಿನಲ್ಲಿ ವಿತರಿಸಿದ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ…

5 days ago

50 ಲಕ್ಷ ರೂ. ಲಂಚ ಸ್ವೀಕರಿಸುವಾಗ ಧಾರವಾಡ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ: ಖರಾಬು ಜಮೀನು ದಾಖಲೆ ತಿದ್ದುಪಡಿಗೆ ಬೇಡಿಕೆ..!

ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ…

5 days ago

ಪಂಚಾಯಿತಿ ಕಚೇರಿಯಲ್ಲೇ ಆಸ್ತಿ ವಿವಾದಕ್ಕೆ ರಕ್ತದೊಕುಳಿ: ಅಣ್ಣ–ತಮ್ಮಂದಿರ ಜಗಳದಲ್ಲಿ ತಂದೆ–ಮಗಳು ಕೊಲೆ, ಮತ್ತೊಬ್ಬನಿಗೆ ಗಂಭೀರ ಗಾಯ

ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ…

5 days ago