Categories: Latest

ಕೋಟ್ಯಂತರ ರೂ. ವೆಚ್ಚದ ಸರ್ಕಾರಿ ನರ್ಸಿಂಗ್ ಶಾಲೆ ಕಟ್ಟಡಕ್ಕೆ ಎರಡು ವರ್ಷಗಳಿಂದ ಬೀಗ! ಸಾರ್ವಜನಿಕರ ಆಕ್ರೋಶ

ಬಳ್ಳಾರಿ: ಸಾರ್ವಜನಿಕರ ತೆರಿಗೆ ಹಣ ಹಾಗೂ ಜಿಲ್ಲಾ ಖನಿಜ ಪ್ರತಿಷ್ಠಾನ ಟ್ರಸ್ಟ್ (District Mineral Foundation – DMF) ನಿಧಿಯಿಂದ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಸರ್ಕಾರಿ ಸುಶ್ರುಷಾ ಶಾಲೆ (Government School of Nursing) ಕಟ್ಟಡವು ಕಳೆದ ಸುಮಾರು ಎರಡು ವರ್ಷಗಳಿಂದ ಬಳಕೆಯಾಗದೆ ಬೀಗ ಹಾಕಿರುವ ಘಟನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಬಳ್ಳಾರಿ ನಗರದ ಡಾ. ರಾಜ್‌ಕುಮಾರ್ ರಸ್ತೆಯಲ್ಲಿರುವ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ, ಇಂದಿರಾ ಕ್ಯಾಂಟೀನ್ ಪಕ್ಕದಲ್ಲೇ ಈ ಬೃಹತ್ ಕಟ್ಟಡ ನಿರ್ಮಾಣಗೊಂಡಿದೆ. ವಿದ್ಯಾರ್ಥಿಗಳ ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ನಿರ್ಮಿಸಲಾದ ಈ ಕಟ್ಟಡ ಇಂದಿಗೂ ಕಾರ್ಯಾರಂಭವಾಗದೇ ಖಾಲಿ ಬಿದ್ದಿರುವುದು ಸಾರ್ವಜನಿಕರಲ್ಲಿ ಅಸಮಾಧಾನ ಮೂಡಿಸಿದೆ.

ಸ್ಥಳೀಯರ ಪ್ರಕಾರ, ಜಿಲ್ಲೆಯ ಆರೋಗ್ಯ ಸೇವೆ ಮತ್ತು ನರ್ಸಿಂಗ್ ಶಿಕ್ಷಣಕ್ಕೆ ನೆರವಾಗಬೇಕಿದ್ದ ಈ ಕಟ್ಟಡವನ್ನು ತಕ್ಷಣವೇ ಆರಂಭಿಸಿ ವಿದ್ಯಾರ್ಥಿಗಳ ಉಪಯೋಗಕ್ಕೆ ನೀಡಬೇಕಾಗಿತ್ತು. ಆದರೆ ಕಟ್ಟಡ ನಿರ್ಮಾಣ ಪೂರ್ಣಗೊಂಡಿದ್ದರೂ ಇದುವರೆಗೆ ಉದ್ಘಾಟನೆ ಅಥವಾ ಕಾರ್ಯಾರಂಭ ಮಾಡದೇ ಬೀಗ ಹಾಕಿರುವುದು ಆಡಳಿತದ ನಿರ್ಲಕ್ಷ್ಯವನ್ನು ಬಿಂಬಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಇನ್ನೊಂದು ಗಂಭೀರ ವಿಚಾರವೆಂದರೆ, ಕಾಮಗಾರಿಯ ವಿವರಗಳನ್ನು ಒಳಗೊಂಡ ನಾಮಫಲಕವನ್ನು ಸಹ ಅಳವಡಿಸಿಲ್ಲ. ಸಾಮಾನ್ಯವಾಗಿ ಸರ್ಕಾರಿ ಕಾಮಗಾರಿಗಳಲ್ಲಿ ಯೋಜನೆಯ ವೆಚ್ಚ, ಕಾಮಗಾರಿ ಕೈಗೊಂಡ ಇಲಾಖೆ, ಗುತ್ತಿಗೆದಾರರ ಹೆಸರು, ಭೂಮಿಪೂಜೆ ದಿನಾಂಕ ಹಾಗೂ ಕಾಮಗಾರಿ ಪೂರ್ಣಗೊಂಡ ದಿನಾಂಕದ ಮಾಹಿತಿ ಇರುವ ಫಲಕ ಕಡ್ಡಾಯವಾಗಿ ಇರಬೇಕು. ಆದರೆ ಈ ಕಟ್ಟಡದಲ್ಲಿ ಅಂತಹ ಯಾವುದೇ ಮಾಹಿತಿ ಫಲಕ ಕಾಣಿಸದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಬಳ್ಳಾರಿ ಜಿಲ್ಲೆಯಲ್ಲಿ ಸಾರ್ವಜನಿಕ ಹಣದಿಂದ ನಿರ್ಮಾಣವಾಗುವ ಅನೇಕ ಅಭಿವೃದ್ಧಿ ಕಾಮಗಾರಿಗಳು ಇದೇ ರೀತಿಯ ನಿರ್ಲಕ್ಷ್ಯಕ್ಕೆ ಒಳಗಾಗುತ್ತಿವೆ ಎಂಬ ಆರೋಪಗಳು ಕೇಳಿಬರುತ್ತಿವೆ. ಸಾರ್ವಜನಿಕರ ಹಣದಿಂದ ನಿರ್ಮಿಸಿದ ಕಟ್ಟಡಗಳು ವರ್ಷಗಳ ಕಾಲ ಬಳಕೆಯಾಗದೆ ಬಿದ್ದರೆ ಸರ್ಕಾರದ ಉದ್ದೇಶವೇ ವಿಫಲವಾಗುತ್ತದೆ ಎಂದು ನಾಗರಿಕರು ಅಭಿಪ್ರಾಯಪಟ್ಟಿದ್ದಾರೆ.

ಸ್ಥಳೀಯರು ಹಾಗೂ ಸಾರ್ವಜನಿಕರು ಸಂಬಂಧಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಕೂಡಲೇ ಮಧ್ಯಪ್ರವೇಶಿಸಿ ಕಟ್ಟಡವನ್ನು ತೆರೆಯುವ ಮೂಲಕ ಸರ್ಕಾರಿ ಸುಶ್ರುಷಾ ಶಾಲೆಯನ್ನು ಕಾರ್ಯಾರಂಭ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಜೊತೆಗೆ ಕಾಮಗಾರಿಯ ಸಂಪೂರ್ಣ ವಿವರಗಳನ್ನು ಒಳಗೊಂಡ ನಾಮಫಲಕವನ್ನು ಅಳವಡಿಸಿ ಪಾರದರ್ಶಕತೆ ಕಾಪಾಡಬೇಕು ಎಂಬ ಆಗ್ರಹವೂ ವ್ಯಕ್ತವಾಗಿದೆ.

ಸಾರ್ವಜನಿಕರ ತೆರಿಗೆ ಹಣ ಮತ್ತು ಡಿಎಂಎಫ್ ನಿಧಿಯಿಂದ ನಿರ್ಮಾಣವಾಗಿರುವ ಈ ಕಟ್ಟಡ ಶೀಘ್ರದಲ್ಲೇ ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ ಬಳಕೆಗೆ ಬರಬೇಕೆಂಬುದು ಜಿಲ್ಲೆಯ ಜನರ ಪ್ರಮುಖ ಬೇಡಿಕೆಯಾಗಿದೆ.

ವರದಿ: ಹನುಮಂತ

ಭ್ರಷ್ಟರ ಬೇಟೆ

Recent Posts

ಪತಿಯನ್ನೇ ಕೊಲ್ಲಲು ಪತ್ನಿಯ ಸ್ಕೆಚ್‌! ಪ್ರಿಯಕರನ ಮೊಬೈಲ್‌ನಲ್ಲಿ ಸಿಕ್ತು ಶಾಕಿಂಗ್ ಸಾಕ್ಷಿ..!

ಸೂರ್ಯಾಪೇಟೆ: ಅನೈತಿಕ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದಾನೆ ಎಂಬ ಕಾರಣಕ್ಕೆ ಪತಿಯನ್ನೇ ಕೊಲೆ ಮಾಡಲು ಪತ್ನಿ ಹಾಗೂ ಆಕೆಯ ಕುಟುಂಬಸ್ಥರು ಸಂಚು…

14 hours ago

ಗಂಡ ನೈಟ್ ಡ್ಯೂಟಿಗೆ ಹೋದಾಗ ಮಕ್ಕಳಿಗೆ ನಿದ್ರೆ ಗುಳಿಗೆ; ಲವ್ವರ್ ಜೊತೆ ಪತ್ನಿಯ ಚಕ್ಕಂದ.. ಮಧ್ಯರಾತ್ರಿ ಮನೆಗೆ ಬಂದ ಗಂಡನಿಗೆ ಕಾದಿತ್ತು ಘೋರ ದುರಂತ!

ಸೋನ್‌ಭದ್ರ: ಗಂಡ ನೈಟ್ ಡ್ಯೂಟಿಗೆ ಹೋದ ಬಳಿಕ ಮಕ್ಕಳಿಗೆ ನಿದ್ರೆ ಮಾತ್ರೆ ನೀಡಿ, ಪ್ರಿಯಕರನನ್ನು ಮನೆಗೆ ಕರೆಸಿಕೊಳ್ಳುತ್ತಿದ್ದ ಪತ್ನಿ, ಕೊನೆಗೆ…

14 hours ago

ರೈಲ್ವೆ ಕಾಮಗಾರಿ ಕಾರ್ಮಿಕರಿದ್ದ ಬೊಲೆರೋ ಪಲ್ಟಿ: ಎಂಟು ಮಂದಿಗೆ ಗಂಭೀರ ಗಾಯ

ಗೌರಿಬಿದನೂರು: ರೈಲ್ವೆ ಇಲಾಖೆಯ ಕಾಮಗಾರಿ ಕೆಲಸಕ್ಕೆ ತೆರಳುತ್ತಿದ್ದ ಕೂಲಿ ಕಾರ್ಮಿಕರಿದ್ದ ಬೊಲೆರೋ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ…

14 hours ago

ಹುಬ್ಬಳ್ಳಿ–ಧಾರವಾಡದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ: 1,339 ಮಂದಿ ವಿರುದ್ಧ ಪ್ರಕರಣ

ಹುಬ್ಬಳ್ಳಿ–ಧಾರವಾಡ: ಅವಳಿ ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತುಹಾಕಲು ಹುಬ್ಬಳ್ಳಿ–ಧಾರವಾಡ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು, ಕಳೆದ ಮೂರು…

2 days ago

ವಿದ್ಯುತ್ ತಂತಿ ಅಳವಡಿಸಿ ಎರಡು ಜಿಂಕೆಗಳ ಬಲಿ: ಜಮೀನಿನಲ್ಲೇ ಮಾಂಸ ಬೇಯಿಸುತ್ತಿದ್ದ ಆರೋಪಿಗಳು!

ಸಾಗರ: ಜಮೀನಿಗೆ ಅಕ್ರಮವಾಗಿ ವಿದ್ಯುತ್ ತಂತಿ ಅಳವಡಿಸಿ ಎರಡು ಗಂಡು ಜಿಂಕೆಗಳನ್ನು ವಿದ್ಯುತ್ ಸ್ಪರ್ಶದಿಂದ ಸಾಯಿಸಿ, ಅವುಗಳ ಮಾಂಸವನ್ನು ಜಮೀನಿನಲ್ಲೇ…

2 days ago

ಅರ್ಚಕ ವಿಶ್ವೇಶ್ವರ ಭಟ್ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಕುಮಟಾ: ನಗರದ ಪ್ರಸಿದ್ಧ ಕುಂಭೇಶ್ವರ ದೇವಸ್ಥಾನದ ಅರ್ಚಕ ವಿಶ್ವೇಶ್ವರ ಭಟ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರ ಜಿಲ್ಲಾ ಮತ್ತು…

2 days ago