Latest

ಚಿನ್ನಕ್ಕಾಗಿ ಅಜ್ಜ-ಅಜ್ಜಿಯ ಕೊಲೆ; ಚಿನ್ನಾಭರಣ ಮಾರಲು ಹೋದಾಗ ಸಿಕ್ಕಿಬಿದ್ದ ಆರೋಪಿ!

ಮಂಗಳೂರಿನಲ್ಲಿ ಅನುಮಾನಾಸ್ಪದ ವ್ಯಕ್ತಿಯೊಬ್ಬ ನಗರದ ಸ್ಟ್ರೀಟ್‌ನಲ್ಲಿರುವ ಚಿನ್ನದ ಅಂಗಡಿಯೊಂದಕ್ಕೆ ಚಿನ್ನಾಭರಣಗಳನ್ನು ಮಾರಾಟ ಮಾಡಲು ಆಗಮಿಸಿದ್ದ.
ಈ ವೇಳೆ ಆತನ ಮೇಲೆ ಅನುಮಾನಗೊಂಡು ಮಂಗಳೂರು ಉತ್ತರ ಠಾಣೆ ಪೊಲೀಸರು ಸೋಮವಾರ ಬಂಧಿಸಿದ್ದರು. ಬಳಿಕ ಆತನನ್ನ ವಿಚಾರಿಸಿದಾಗ ಇತ ‘ತ್ರಿಶೂರ್‌ನ ವೈಲತ್ತೂರ್ ನಿವಾಸಿ ಅಹ್ಮದ್ ಅಕ್ಮಲ್ (27) ಎಂಬುದು ಬೆಳಕಿಗೆ ಬಂದಿದೆ. ಬಳಿಕ ಮತ್ತಷ್ಟು ವಿಚಾರಣೆಗೊಳಪಡಿಸಿದಾಗ ಇತ ಜುಲೈ 23 ರಂದು ಕೇರಳದ ತ್ರಿಶೂರ್‌ನಲ್ಲಿ ವಾಸವಾಗಿದ್ದ ಅಜ್ಜ ಮತ್ತು ಅಜ್ಜಿಯನ್ನು ಕೊಲೆ ಮಾಡಿ ಚಿನ್ನಾಭರಣಗಳನ್ನು ದೋಚಿಕೊಂಡು ಬಂದಿದ್ದಾಗಿ ಬಾಯ್ಬಿಟಿದ್ದಾನೆ. ಸಧ್ಯ ಈ ಪ್ರಕರಣವನ್ನ ಬೈಂದೂರು ಇನ್ಸ್ ಪೆಕ್ಟರ್ ರಾಘವೇಂದ್ರ ನೇತೃತ್ವದ ತಂಡ ಪತ್ತೆ ಮಾಡಿದೆ.
ಇನ್ನು ಆರೋಪಿ ಅಹ್ಮದ್ ಅಕ್ಮಲ್ ಮಂಗಳೂರಿನಲ್ಲಿ ವ್ಯಾಸಂಗ ಮಾಡಿದ್ದ. ಹಾಗಾಗಿ ಇಲ್ಲಿನ ಬಗ್ಗೆ ಆತನಿಗೆ ಗೊತ್ತಿದ್ದರಿಂದ ಅಜ್ಜ ಅಜ್ಜಿಯನ್ನ ಕೊಲೆ ಮಾಡಿ ಚಿನ್ನಾಭರಣ ದೋಚಿಕೊಂಡು ಮಂಗಳೂರಿಗೆ ಬಂದಿದ್ದ. ಇನ್ನು ಆತನನ್ನ ಪೊಲೀಸರು ಪರಿಶೀಲಿಸಿದಾಗ ಒಂದು ಚಾಕು, ಸ್ಕ್ರೂಡ್ರೈವರ್, ಮಂಗಳೂರು ವಿಶ್ವವಿದ್ಯಾನಿಲಯದ ಮಾರ್ಕ್ಸ್ ಕಾರ್ಡ್, ಪಾಸ್‌ಪೋರ್ಟ್, ಆಧಾರ್, ಸೌತ್ ಇಂಡಿಯಾ ಬ್ಯಾಂಕ್ ಕಾರ್ಡ್, ಆಕ್ಸಿಸ್ ಬ್ಯಾಂಕ್ ವೀಸಾ ಕಾರ್ಡ್ ಮತ್ತು ಪ್ಯಾನ್ ಕಾರ್ಡ್ ಹೊಂದಿರುವ ಪರ್ಸ್. ಒಂದು ಮುತ್ತಿನ ಸರ, ಮೂರು ಜೋಡಿ ಕಿವಿಯೋಲೆಗಳು, ಒಂದು ಸಣ್ಣ ಚಿನ್ನದ ಸರದ ಜೊತೆ ಬೆರಳಿನ ಉಂಗುರಗಳು ಮತ್ತು ಎರಡು ಚಿನ್ನದ ಬಳೆಗಳು ಇದ್ದು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಭ್ರಷ್ಟರ ಬೇಟೆ

Recent Posts

ಬಾಗಲಕೋಟೆಯಲ್ಲಿ ರಾತ್ರಿ 11 ಗಂಟೆಯ ಬಳಿಕ ನಿಯಮ ಉಲ್ಲಂಘಿಸಿ ಮರಳು ಸಾಗಾಟ: ನಂಬರ್ ಪ್ಲೇಟ್ ಇಲ್ಲದ ಟಿಪ್ಪರ್‌ಗಳ ಸಂಚಾರ, ಅಧಿಕಾರಿಗಳು ಮೌನ!?

ಬಾಗಲಕೋಟೆ: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆಯೇ ಎಂಬ…

1 day ago

ಪಾಸ್‌ಪೋರ್ಟ್ ಶುಲ್ಕ ಹೆಚ್ಚಳ: ಮಕ್ಕಳ ಮಾನ್ಯತಾ ಅವಧಿಯಲ್ಲೂ ಬದಲಾವಣೆ, ಹೊಸ ನಿಯಮ ಜಾರಿ

ನವದೆಹಲಿ: ಪಾಸ್‌ಪೋರ್ಟ್ ಅರ್ಜಿ ಶುಲ್ಕವನ್ನು ಹೆಚ್ಚಿಸುವುದರ ಜೊತೆಗೆ ಮಕ್ಕಳ ಪಾಸ್‌ಪೋರ್ಟ್‌ನ ಮಾನ್ಯತಾ ಅವಧಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗಳನ್ನು…

1 day ago

ಗೌರಿಬಿದನೂರಿನಲ್ಲಿ ಅಪಘಾತಕ್ಕೆ ನಾಲ್ಕು ವರ್ಷದ ಬಾಲಕಿ ಬಲಿ

ತಾಯಿ-ತಂದೆಯಿಲ್ಲದ ವೇದಳನ್ನು ಕಳೆದುಕೊಂಡ ಅಜ್ಜಿ-ತಾತನ ಆಕ್ರಂದನ ಗೌರಿಬಿದನೂರು: ನಗರದಲ್ಲಿ ಅಪಘಾತಗಳ ಸರಣಿ ಮುಂದುವರಿದಿರುವ ನಡುವೆಯೇ ಮತ್ತೊಂದು ಮನಕಲಕುವ ರಸ್ತೆ ದುರಂತ…

5 days ago

ಸರ್ಕಾರಿ ಶಾಲಾ ಮಕ್ಕಳಿಗೆ ಅನ್ಯಾಯ: ನೂರು ರೂಪಾಯಿಗೂ ಬೆಲೆಬಾಳದ ಶೂಗಳನ್ನು ವಿತರಿಸಿರುವ ಸರ್ಕಾರ, ಒಂದೇ ತಿಂಗಳಿಗೆ ಹಾಳದ ಶೂಗಳು..!

ಕಳೆದ ವರ್ಷದ 265 ರೂ. ಬೆಲೆಯ ಶೂಗಳು ಇನ್ನೂ ಬಾಳಿಕೆ; ಪ್ರಸಕ್ತ ಸಾಲಿನಲ್ಲಿ ವಿತರಿಸಿದ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ…

5 days ago

50 ಲಕ್ಷ ರೂ. ಲಂಚ ಸ್ವೀಕರಿಸುವಾಗ ಧಾರವಾಡ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ: ಖರಾಬು ಜಮೀನು ದಾಖಲೆ ತಿದ್ದುಪಡಿಗೆ ಬೇಡಿಕೆ..!

ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ…

5 days ago

ಪಂಚಾಯಿತಿ ಕಚೇರಿಯಲ್ಲೇ ಆಸ್ತಿ ವಿವಾದಕ್ಕೆ ರಕ್ತದೊಕುಳಿ: ಅಣ್ಣ–ತಮ್ಮಂದಿರ ಜಗಳದಲ್ಲಿ ತಂದೆ–ಮಗಳು ಕೊಲೆ, ಮತ್ತೊಬ್ಬನಿಗೆ ಗಂಭೀರ ಗಾಯ

ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ…

5 days ago