ಟರ್ಕಿಯಲ್ಲಿ ನಡೆದ ವಿಚಿತ್ರ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಯುವಕ-ಯುವತಿಯ ವಿವಾಹವನ್ನು ಕುಟುಂಬಸ್ಥರು ಅದ್ಧೂರಿಯಾಗಿ ನೆರವೇರಿಸಿದ್ದರು. ನಿಶ್ಚಿತಾರ್ಥದಿಂದ ಮದುವೆ ಸಮಾರಂಭದವರೆಗೂ ವಧು ಭಾರೀ ಮೇಕಪ್‌ನಲ್ಲಿ ಎಲ್ಲರ ಗಮನ ಸೆಳೆದಿದ್ದಳು. ಆಕೆಯ ಸೌಂದರ್ಯವನ್ನು ನೋಡಿ ವರ ಸೇರಿದಂತೆ ಬಂಧುಮಿತ್ರರೂ ಮೆಚ್ಚುಗೆ ವ್ಯಕ್ತಪಡಿಸಿದ್ದರು.
ಆದರೆ ಮದುವೆಯ ಎಲ್ಲಾ ವಿಧಿವಿಧಾನಗಳು ಮುಗಿದ ಬಳಿಕ ನಡೆದ ಘಟನೆ ಎಲ್ಲರನ್ನೂ ಅಚ್ಚರಿಗೊಳಿಸಿದೆ. ಮೊದಲ ರಾತ್ರಿ ಕೋಣೆಗೆ ತೆರಳಿದ ವಧು ತನ್ನ ಮುಖದಲ್ಲಿದ್ದ ಸಂಪೂರ್ಣ ಮೇಕಪ್ ತೆಗೆದುಹಾಕಿದ್ದಾಳೆ. ನಂತರ ಕೋಣೆಗೆ ಬಂದ ವರ, ಮೇಕಪ್ ಇಲ್ಲದ ಪತ್ನಿಯ ನೈಜ ರೂಪವನ್ನು ನೋಡಿ ದಿಗ್ಭ್ರಮೆಗೊಂಡಿದ್ದಾನೆ ಎನ್ನಲಾಗಿದೆ.
ಮದುವೆಗೆ ಮುನ್ನ ತನ್ನ ನಿಜವಾದ ಮುಖವನ್ನು ಮರೆಮಾಚಿ, ಕೇವಲ ಮೇಕಪ್ ಮತ್ತು ಕಾಸ್ಮೆಟಿಕ್ ಉಪಾಯಗಳಿಂದ ತನ್ನನ್ನು ನಂಬಿಸಲಾಗಿದೆ ಎಂದು ಆರೋಪಿಸಿರುವ ವರ, ತಾನು ಮೋಸ ಹೋಗಿದ್ದೇನೆ ಎಂದು ಹೇಳಿದ್ದಾನೆ. “ಆಕೆಯ ನೈಜ ರೂಪ ಮೊದಲೇ ಗೊತ್ತಿದ್ದರೆ ಈ ಮದುವೆಗೆ ಒಪ್ಪುತ್ತಿರಲಿಲ್ಲ” ಎಂದು ಹೇಳಿ, ಮದುವೆಯಾದ ಮೊದಲ ದಿನವೇ ವಿಚ್ಛೇದನಕ್ಕಾಗಿ ಕೋರ್ಟ್ ಮೆಟ್ಟಿಲೇರಿದ್ದಾನೆ ಎಂಬ ಸುದ್ದಿ ಹರಿದಾಡುತ್ತಿದೆ.
ಈ ವಿಚಿತ್ರ ಪ್ರಕರಣ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ನೆಟ್ಟಿಗರ ನಡುವೆ ಭಾರೀ ಚರ್ಚೆಗೆ ಕಾರಣವಾಗಿದೆ. ಕೆಲವರು ಕೇವಲ ಬಾಹ್ಯ ಸೌಂದರ್ಯ ನೋಡಿ ಮದುವೆಯಾಗುವ ಮನೋಭಾವವೇ ಇಂತಹ ಪರಿಸ್ಥಿತಿಗೆ ಕಾರಣ ಎಂದು ಅಭಿಪ್ರಾಯಪಟ್ಟರೆ, ಇನ್ನೂ ಕೆಲವರು ಮೇಕಪ್ ಆಧರಿಸಿ ಜೀವನ ಸಂಗಾತಿಯನ್ನು ತೀರ್ಮಾನಿಸುವುದು ಸರಿಯಲ್ಲ ಎಂದು ಟೀಕಿಸಿದ್ದಾರೆ.
ಒಟ್ಟಾರೆ, “ಮೇಕಪ್ ವಿಚ್ಛೇದನ” ಕಥೆ ಇದೀಗ ನೆಟ್ಟಿಗರ ಹಾಟ್ ಟಾಪಿಕ್ ಆಗಿದೆ.
ಬಾಗಲಕೋಟೆ: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆಯೇ ಎಂಬ…
ನವದೆಹಲಿ: ಪಾಸ್‌ಪೋರ್ಟ್ ಅರ್ಜಿ ಶುಲ್ಕವನ್ನು ಹೆಚ್ಚಿಸುವುದರ ಜೊತೆಗೆ ಮಕ್ಕಳ ಪಾಸ್‌ಪೋರ್ಟ್‌ನ ಮಾನ್ಯತಾ ಅವಧಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗಳನ್ನು…
ತಾಯಿ-ತಂದೆಯಿಲ್ಲದ ವೇದಳನ್ನು ಕಳೆದುಕೊಂಡ ಅಜ್ಜಿ-ತಾತನ ಆಕ್ರಂದನ ಗೌರಿಬಿದನೂರು: ನಗರದಲ್ಲಿ ಅಪಘಾತಗಳ ಸರಣಿ ಮುಂದುವರಿದಿರುವ ನಡುವೆಯೇ ಮತ್ತೊಂದು ಮನಕಲಕುವ ರಸ್ತೆ ದುರಂತ…
ಕಳೆದ ವರ್ಷದ 265 ರೂ. ಬೆಲೆಯ ಶೂಗಳು ಇನ್ನೂ ಬಾಳಿಕೆ; ಪ್ರಸಕ್ತ ಸಾಲಿನಲ್ಲಿ ವಿತರಿಸಿದ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ…
ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ…
ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ…