Categories: LatestPolitics

ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ತೊಂದರೆ ಆಗಿದೆ: ಅರ್ಹರಿಗೆ ಮಾತ್ರ ಸೌಲಭ್ಯ ನೀಡಲು ಪರಿಷ್ಕರಣೆ – ಡಿಕೆಶಿ

ಬೆಂಗಳೂರು: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಂದ ಸರ್ಕಾರದ ಮೇಲೆ ಆರ್ಥಿಕ ಒತ್ತಡ ಉಂಟಾಗಿರುವುದು ನಿಜ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ ವಾರ್ಷಿಕವಾಗಿ ಸುಮಾರು ₹52 ಸಾವಿರ ಕೋಟಿ ವೆಚ್ಚವಾಗುತ್ತಿದ್ದು, ಸರ್ಕಾರದ ಹಣಕಾಸಿನ ಮೇಲೆ ಅದರ ಪರಿಣಾಮವನ್ನು ಮೌಲ್ಯಮಾಪನ ಮಾಡಬೇಕಿದೆ ಎಂದು ಅವರು ತಿಳಿಸಿದ್ದಾರೆ.

ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, “ಗ್ಯಾರಂಟಿ ಯೋಜನೆಗಳು ಸರ್ಕಾರಕ್ಕೆ ಒಂದಷ್ಟು ತೊಂದರೆ ಕೊಟ್ಟಿವೆ. ಇಲ್ಲ ಎಂದು ನಾನು ಹೇಳುವುದಿಲ್ಲ. ಹಾಗಾಗಿ ಅರ್ಹರಿಗೆ ಮಾತ್ರ ಯೋಜನೆಗಳ ಸೌಲಭ್ಯ ದೊರೆಯುವಂತೆ ಮರುಪರಿಶೀಲನೆ ನಡೆಸಲಾಗುತ್ತಿದೆ” ಎಂದು ಹೇಳಿದ್ದಾರೆ.

ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಯ ಉದ್ದೇಶ ಸೌಲಭ್ಯಗಳನ್ನು ಸಂಪೂರ್ಣವಾಗಿ ನಿಲ್ಲಿಸುವುದಲ್ಲ. ಬದಲಾಗಿ ಅರ್ಹ ಫಲಾನುಭವಿಗಳಿಗೆ ಮಾತ್ರ ಯೋಜನೆಗಳ ಪ್ರಯೋಜನ ತಲುಪಿಸುವುದು ಹಾಗೂ ಸರ್ಕಾರಕ್ಕೆ ಸಾಧ್ಯವಾದಷ್ಟು ಹಣ ಉಳಿತಾಯ ಮಾಡುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಹೊರ ರಾಜ್ಯದವರಿಗೆ ಉಚಿತ ಸೌಲಭ್ಯ ಏಕೆ?

ಗೃಹಜ್ಯೋತಿ ಯೋಜನೆಯ ಪರಿಷ್ಕರಣೆ ಕುರಿತು ಮಾತನಾಡಿದ ಡಿ.ಕೆ. ಶಿವಕುಮಾರ್, ಕರ್ನಾಟಕದಲ್ಲಿ ನೆಲೆಸಿರುವ ಹೊರ ರಾಜ್ಯದವರಿಗೂ ಉಚಿತ ವಿದ್ಯುತ್ ಸೌಲಭ್ಯ ನೀಡಬೇಕೇ ಎಂಬುದನ್ನು ಸರ್ಕಾರ ಪರಿಶೀಲಿಸುತ್ತಿದೆ ಎಂದು ಹೇಳಿದ್ದಾರೆ.

“ಹೊರ ರಾಜ್ಯದಿಂದ ಬಂದು ಕರ್ನಾಟಕದಲ್ಲಿ ನೆಲೆಸಿರುವವರಿಗೆ ನಾವು ಉಚಿತ ಯೋಜನೆ ನೀಡಬೇಕೇ? ನಮ್ಮ ರಾಜ್ಯದ ಮತದಾರರಿಗೆ ಮಾತ್ರ ಗ್ಯಾರಂಟಿ ಸೌಲಭ್ಯ ನೀಡುವ ಕುರಿತು ಅರ್ಜಿ ಪರಿಷ್ಕರಣೆ ನಡೆಯುತ್ತಿದೆ” ಎಂದು ಅವರು ತಿಳಿಸಿದ್ದಾರೆ.

ಶಕ್ತಿ ಯೋಜನೆಯ ಉಚಿತ ಬಸ್ ಪ್ರಯಾಣದಲ್ಲಿಯೂ ಇದೇ ರೀತಿಯ ಬದಲಾವಣೆ ತರಲು ಚಿಂತನೆ ನಡೆದಿದೆ. ಉದ್ಯೋಗ, ಶಿಕ್ಷಣ ಸೇರಿದಂತೆ ವಿವಿಧ ಕಾರಣಗಳಿಂದ ಕರ್ನಾಟಕಕ್ಕೆ ಬರುವ ಹೊರ ರಾಜ್ಯದವರು ರಾಜ್ಯದ ಗಡಿ ಪ್ರವೇಶಿಸಿದ ಬಳಿಕ ಶಕ್ತಿ ಯೋಜನೆಯಡಿ ಉಚಿತ ಪ್ರಯಾಣದ ಸೌಲಭ್ಯ ಪಡೆಯುತ್ತಿದ್ದಾರೆ. ಇದನ್ನು ನಿಯಂತ್ರಿಸಲು ಕರ್ನಾಟಕದ ಮತದಾರರಿಗೆ ಮಾತ್ರ ಉಚಿತ ಪ್ರಯಾಣಕ್ಕೆ ಸ್ಮಾರ್ಟ್‌ಕಾರ್ಡ್ ನೀಡುವ ಕುರಿತು ಪರಿಶೀಲನೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಸ್ಮಾರ್ಟ್‌ಕಾರ್ಡ್ ವ್ಯವಸ್ಥೆ ಜಾರಿಗೆ ಸುಮಾರು ₹100 ಕೋಟಿ ವೆಚ್ಚವಾದರೂ, ಅರ್ಹರಲ್ಲದವರಿಗೆ ಸೌಲಭ್ಯ ನೀಡುವುದನ್ನು ತಡೆಯುವುದರಿಂದ ಸರ್ಕಾರಕ್ಕೆ ಉಳಿತಾಯವಾಗಲಿದೆ. ಎಷ್ಟು ಹಣ ಉಳಿಯುತ್ತದೆಯೋ ಅಷ್ಟೂ ಸರ್ಕಾರಕ್ಕೆ ಅನುಕೂಲ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

2028ರಲ್ಲೂ ಅಧಿಕಾರಕ್ಕೆ ಬರುವ ವಿಶ್ವಾಸ

ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಪಕ್ಷದ ಹೈಕಮಾಂಡ್ ಬೆಂಬಲವಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಡಿ.ಕೆ. ಶಿವಕುಮಾರ್, ಪಕ್ಷದ ವರಿಷ್ಠರಿಗೆ ತಮ್ಮ ಮೇಲೆ ಸಂಪೂರ್ಣ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ಉತ್ತಮ ಆಡಳಿತ ನೀಡುವ ನಿರೀಕ್ಷೆಯನ್ನು ಹೈಕಮಾಂಡ್ ಹೊಂದಿದ್ದು, ಅದನ್ನು ತಾನು ಈಡೇರಿಸುವುದಾಗಿ ಹೇಳಿದ ಅವರು, 2028ರಲ್ಲಿ ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರುವ ವಿಶ್ವಾಸವನ್ನು ಪಕ್ಷದ ವರಿಷ್ಠರು ತಮ್ಮ ಮೇಲೆ ಇಟ್ಟಿದ್ದಾರೆ. ಆ ವಿಶ್ವಾಸವನ್ನು ಉಳಿಸಿಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.

‘ಸಿದ್ದರಾಮಯ್ಯ ನನ್ನ ಜೊತೆ ನಿಲ್ಲುತ್ತಾರೆ’

ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಬಲವಿದೆಯೇ ಎಂಬ ಪ್ರಶ್ನೆಗೂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

“ಸಿದ್ದರಾಮಯ್ಯ ಅವರು ನನ್ನ ಜೊತೆ ನಿಲ್ಲುತ್ತಾರೆ. ಏಕೆಂದರೆ ನಾನು ಅವರ ಜೊತೆ ಬಂಡೆಯಂತೆ ನಿಂತಿದ್ದೇನೆ. ನನ್ನ ಜೀವನದಲ್ಲಿ ಯಾರಿಗೂ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡಿಲ್ಲ” ಎಂದು ಹೇಳಿದ್ದಾರೆ.

ಈ ಹಿಂದೆ ಬಂಗಾರಪ್ಪ, ಎಸ್.ಎಂ. ಕೃಷ್ಣ ಅವರೊಂದಿಗೆ ಕೆಲಸ ಮಾಡಿದ್ದೇನೆ. ಸಿದ್ದರಾಮಯ್ಯ ಅವರೊಂದಿಗೂ ಇದ್ದೇನೆ. ಎಚ್.ಡಿ. ಕುಮಾರಸ್ವಾಮಿ ಅವರೊಂದಿಗೂ ನಿಂತಿದ್ದೆ. ಆದರೆ ಅವರು ಇದನ್ನು ಒಪ್ಪದಿರಬಹುದು ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಭ್ರಷ್ಟರ ಬೇಟೆ

Recent Posts

ಲೈಂಗಿಕ ಕಿರುಕುಳಕ್ಕೆ ಬೇಸತ್ತು ಸ್ನೇಹಿತನ ಜೊತೆ ಸೇರಿ ವ್ಯಕ್ತಿಯ ಕೊಲೆ: ಮಹಿಳೆ ಸೇರಿ ಇಬ್ಬರು ಅರೆಸ್ಟ್

ಅಥಣಿ: ನಿರಂತರವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದ ವ್ಯಕ್ತಿಯೊಬ್ಬನನ್ನು ಮಹಿಳೆಯೊಬ್ಬಳು ತನ್ನ ಶಾಲಾ ದಿನಗಳ ಸ್ನೇಹಿತನ ನೆರವಿನಿಂದ ಹತ್ಯೆ ಮಾಡಿರುವ ಘಟನೆ…

1 hour ago

ಗ್ರಾಮ ಪಂಚಾಯಿತಿ ನಿರ್ಲಕ್ಷ್ಯ; ಬೇಸತ್ತು ಚರಂಡಿ ಸ್ವಚ್ಛಗೊಳಿಸಿದ ಮಹಿಳೆ.

ಕೊಟ್ಟೂರು:- ತಾಲ್ಲೂಕಿನ ಕೆ. ಅಯ್ಯನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹರಾಳು ಗ್ರಾಮದ ದುಮ್ಮಾಡಿ ಕೆಂಚಮ್ಮ ಎಂಬ ಮಹಿಳೆಯೋರ್ವರು ತಮ್ಮ…

15 hours ago

ಬಸವನ ಬಾಗೇವಾಡಿಯಲ್ಲಿ ಅಕ್ರಮ LPG ರೀಫಿಲ್ಲಿಂಗ್ ಆರೋಪ: ಅಧಿಕಾರಿಗಳ ಮೌನಕ್ಕೆ ಸಾರ್ವಜನಿಕರ ಆಕ್ರೋಶ

ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ನಗರದಲ್ಲಿ ಗೃಹಬಳಕೆಯ LPG ಸಿಲಿಂಡರ್‌ಗಳಿಂದ ಆಟೋಗಳಿಗೆ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡಲಾಗುತ್ತಿದೆ ಎಂಬ ಆರೋಪ…

21 hours ago

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

2 days ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

3 days ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

3 days ago