ಚಿಕ್ಕಬಳ್ಳಾಪುರ ತಾಲೂಕಿನ ಆರೋಬಂಡೆ ಗ್ರಾಮದ ಹೊರವಲಯದ ಪ್ರದೇಶದಲ್ಲಿ ಅರೆ ಬೆತ್ತಲೆ ಸ್ಥಿತಿಯಲ್ಲಿ ಮಹಿಳೆಯ ಶವ ದೊರೆತಿದೆ. ಮೃತ ಮಹಿಳೆಗೆ ಅಂದಾಜು 30 ವಯಸ್ಸಿರಬಹುದು ಎನ್ನಲಾಗಿದೆ.
ಮಹಿಳೆಯ ಮೇಲೆ ಅತ್ಯಾಚಾರಗೈದು ಕೊಲೆ ಮಾಡಿ ಬಿಸಾಡಿ ಹೋಗಿರುವ ಬಗ್ಗೆ ಅನುಮಾನವಿದೆ. ಮಂಗಳವಾರ ಬೆಳಗ್ಗೆ ಗ್ರಾಮದ ಹೊರವಲಯದಲ್ಲಿ ಸ್ಥಳೀಯರು ಶವ ನೋಡಿ ಭಯಭೀತರಾಗಿದ್ದು ತಕ್ಷಣ ಪೊಲೀಸರಿಗೆ ಮಾಹಿತಿ ಮುಟ್ಟಿಸಿದ್ದರು. ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ತನಿಖೆ ಕೈಗೊಂಡಿದ್ದಾರೆ.

Related News

error: Content is protected !!