Categories: Latest

ಜಾತ್ಯಾತೀತ ಸೌಹಾರ್ದತೆಗೆ ಸಾಕ್ಷಿಯಾದ ಹರಾಳು ಅಡ್ಡಪಲ್ಲಕ್ಕಿ ಮಹೋತ್ಸವ; ಧರ್ಮಸಭೆಯಲ್ಲಿ ಉಜ್ಜಯಿನಿ ಶ್ರೀ ಜಗದ್ಗುರುಗಳಿಂದ ಆಶೀರ್ವಚನ.

ಕೊಟ್ಟೂರು:- ತಾಲ್ಲೂಕಿನ ಹರಾಳು ಗ್ರಾಮದಲ್ಲಿ ದಿನಾಂಕ 02-04-2026 ಗುರುವಾರದಂದು ಆಗಮಿಸಿದ ಶ್ರೀ ಉಜ್ಜಯಿನಿ ಜಗದ್ಗುರುಗಳನ್ನು ಅಡ್ಡಪಲ್ಲಕ್ಕಿಯಲ್ಲಿ ಕುಳ್ಳಿರಿಸಿ, ಸಮ್ಮಳ ವಾದ್ಯ, ಡೊಳ್ಳು ಕುಣಿತ, ಮತ್ತು ಕನ್ಯಾಮಣಿಯರು ಹಾಗೂ ಸುಮಂಗಲೆಯರಿಂದ ಕಳಸ, ಕುಂಭಮೇಳದೊಂದಿಗೆ ಊರಿನ ಪ್ರಮುಖ ಬೀದಿಗಳಲ್ಲಿ ಭವ್ಯ ಮೆರವಣಿಗೆಯ ಮೂಲಕ ಅದ್ದೂರಿಯಾಗಿ ಗ್ರಾಮಸ್ಥರು ಸ್ವಾಗತಿಸಿದರು.

ಆನಂತರ ವೇದಿಕೆ ಕಾರ್ಯಕ್ರಮಗಳನ್ನು ಜ್ಯೋತಿ ಬೆಳಗುವುದರೊಂದಿಗೆ ಧರ್ಮಸಭೆಗೆ ಅಧಿಕೃತ ಚಾಲನೆ ನೀಡಿದರು. ಉದ್ಘಾಟನಾ ನುಡಿಯನ್ನು ಮಾನ್ಯ ಶಾಸಕರಾದ ಶ್ರೀ ಕೆ. ನೇಮಿರಾಜನಾಯ್ಕ್ ಅವರು ಅನ್ನದಾತ ರೈತರನ್ನು ನೆನೆದರು ಹಾಗೂ ಗ್ರಾಮಸ್ಥರು ದುಷ್ಚಟಗಳಿಂದ ದೂರವಿರಲು ಸಂಕಲ್ಪ ಮಾಡಿದರು. ಶಾಸಕರ ಅನುದಾನದಡಿಯಲ್ಲಿ ಸುಮಾರು 60 ಲಕ್ಷ ರೂಪಾಯಿಗಳನ್ನು ಗ್ರಾಮದ ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ನೀಡುವ ಭರವಸೆ ಕೊಟ್ಟರು.
ಪ್ರಾಸ್ತಾವಿಕ ನುಡಿಗಳನ್ನಾಡಿದ ಎಸ್‌. ಗುರುಮೂರ್ತಿ ಹರಾಳು ಅವರು ಕರಿಗಲ್ಲುಗಳು ಗ್ರಾಮದ ಸೈನಿಕರಿದ್ದಂತೆ; ಎಲ್ಲರಿಗೂ ಒಳ್ಳೆಯದಾಗಲಿ ಎಂದು ಹಾರೈಸಿದರು ಹಾಗೂ ಗ್ರಾಮದ ಸರಕಾರಿ ನೌಕರರ ತನು, ಮನ, ಧನ ಸೇವೆಯನ್ನು ಸ್ಮರಿಸಿದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಎಂ.ಎಂ.ಜೆ. ಹರ್ಷವರ್ಧನ್ ಹಾಗೂ ಪಿ.ಎಚ್. ದೊಡ್ಡರಾಮಣ್ಣ ಅವರು ಮಾತನಾಡಿದರು.
ಗ್ರಾಮದ ಸರಕಾರಿ ಶಾಲೆಯ ವಿದ್ಯಾರ್ಥಿನಿಯರಿಂದ ಭರತ ನಾಟ್ಯ ನೃತ್ಯ ಎಲ್ಲರ ಗಮನ ಸೆಳೆಯಿತು.

ಪ್ರಮುಖ ಘಟ್ಟವಾದ ಉಜ್ಜಯಿನಿ ಶ್ರೀಗಳಿಂದ ಆಶೀರ್ವಚನ ಕಾರ್ಯಕ್ರಮದಲ್ಲಿ ದೇಶದ ಬೆನ್ನೆಲುಬಾಗಿ ನಿಂತಿರುವ ರೈತರ ಬದುಕು ಕಲ್ಯಾಣವಾಗಲಿ, ಜೊತೆಗೆ ಯಾವ ವಿಜ್ಞಾನ, ತಂತ್ರಜ್ಞಾನವೂ ಒಂದು ಬೀಜವನ್ನು ಹಿಡಿ ಕಾಳಾಗಿ ಮಾಡಲು ಸಾಧ್ಯವಿಲ್ಲ; ಅದೇನಿದ್ದರೂ ರೈತರಿಂದ ಮಾತ್ರ ಸಾಧ್ಯವೆಂದು ಅಭಿಪ್ರಾಯ ಪಟ್ಟರು. ಗೋಹತ್ಯೆಯನ್ನು ನಿಷೇಧಿಸಬೇಕೆಂದು ಆಗ್ರಹಿಸಿದರು. ದೇವಸ್ಥಾನದ ಕಳಸಗಳು ನೆಟ್ ವರ್ಕ್ ಟವರ್ ಗಳಿದ್ದಂತೆ; ಭಗವಂತನ ಕೃಪೆಗೆ ಭಕ್ತರು ಪಾತ್ರರಾಗುವಲ್ಲಿ ಸಂಬಂಧ ಸೇತುವೆಯನ್ನು ಕಲ್ಪಿಸುತ್ತವೆ. ಉಜ್ಜಯಿನಿ ಪೀಠವು ಮಳೆ ಪೀಠವಾಗಿ ಪ್ರಸಿದ್ಧ ಪಡೆದಿದ್ದು, ಜಗದ್ಗುರುಗಳು ಅಂತಿಮವಾಗಿ ಗ್ರಾಮದಲ್ಲೇ ವಾಸ್ತವ್ಯ ಹೂಡುವುದರೊಂದಿಗೆ ಆಶೀರ್ವಚನ ಕಾರ್ಯಕ್ರಮವನ್ನು ಪೂರ್ಣಗೊಳಿಸಿದರು.

ವರದಿ:- ಮಣಿಕಂಠ. ಬಿ

ಭ್ರಷ್ಟರ ಬೇಟೆ

Recent Posts

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

17 minutes ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

15 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

19 hours ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

2 days ago