Categories: CrimeLatest

ಎದೆಯ ಮೇಲೆ ಬೇರೊಬ್ಬನ ಟ್ಯಾಟೂ ಕಂಡ ಗಂಡನಿಂದ ಕಿರುಕುಳ, ಮನನೊಂದು ನವವಿವಾಹಿತೆ ಆತ್ಮಹತ್ಯೆ..!

ಚಿಕ್ಕಬಳ್ಳಾಪುರ: ಮದುವೆಯ ಮೊದಲ ವರ್ಷದ ವಾರ್ಷಿಕೋತ್ಸವವನ್ನು ಸಂಭ್ರಮದಿಂದ ಆಚರಿಸಿಕೊಳ್ಳಬೇಕಿದ್ದ ನವವಿವಾಹಿತೆಯೊಬ್ಬಳು, ಗಂಡನ ಅನುಮಾನ ಹಾಗೂ ನಿರಂತರ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆಯಲ್ಲಿ ನಡೆದಿದೆ.

ಗೌರಿಬಿದನೂರು ಮೂಲದ ಪ್ರೇಮಾ ಹಾಗೂ ಶಿಡ್ಲಘಟ್ಟದ ಶಿವಕುಮಾರ್ ಸಂಬಂಧಿಕರಾಗಿದ್ದು, ಪ್ರೇಮಾ ಅವರನ್ನು ಶಿವಕುಮಾರ್ ಪ್ರೀತಿಸಿ ಮದುವೆಯಾಗಿದ್ದನು. ಮದುವೆಯಾದ ಮೊದಲ ಮೂರು ತಿಂಗಳು ದಾಂಪತ್ಯ ಜೀವನ ಸುಖಕರವಾಗಿದ್ದರೂ, ಬಳಿಕ ಅಸಹಜ ತಿರುವು ಪಡೆದುಕೊಂಡಿದೆ.

ಈ ದಂಪತಿಯ ಜೀವನದಲ್ಲಿ ಬಿರುಕು ಮೂಡಲು ಕಾರಣವಾದದ್ದು ಪ್ರೇಮಾ ಎದೆಯ ಮೇಲೆ ಇದ್ದ ಹಚ್ಚೆ (Tattoo). ಯುವಕನೊಬ್ಬನ ಹೆಸರಿನ ಹಚ್ಚೆಯನ್ನು ಕಂಡ ಶಿವಕುಮಾರ್, ಅದನ್ನು ಕೇವಲ ಸ್ನೇಹಿತನ ಹೆಸರು ಎಂದು ಪತ್ನಿ ಸ್ಪಷ್ಟನೆ ನೀಡಿದರೂ ನಂಬದೆ, ಅನುಮಾನ ಪಡಲು ಆರಂಭಿಸಿದ್ದ. ಇದೇ ವಿಚಾರ ದಂಪತಿಗಳ ನಡುವೆ ನಿರಂತರ ಜಗಳಕ್ಕೆ ಕಾರಣವಾಯಿತು.

ಕಾಲಕ್ರಮೇಣ ಶಿವಕುಮಾರ್‌ನ ಅನುಮಾನ ತೀವ್ರಗೊಂಡು, ಪತ್ನಿಯ ಮೇಲೆ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡಲು ಶುರು ಮಾಡಿದ್ದಾನೆ ಎನ್ನಲಾಗಿದೆ. ಇದಲ್ಲದೆ, ವರದಕ್ಷಿಣೆ ತರಬೇಕೆಂದು ಒತ್ತಾಯಿಸಿ, ಪ್ರೇಮಾಳನ್ನು ಹಲ್ಲೆ ಮಾಡುತ್ತಿದ್ದ ಎಂಬ ಆರೋಪವೂ ಕೇಳಿಬಂದಿದೆ.

ಮೂರು ತಿಂಗಳ ಹಿಂದೆ ಪ್ರೇಮಾಗೆ ಗರ್ಭಪಾತವಾಗಿದ್ದ ಸಂದರ್ಭದಲ್ಲಿಯೂ ಗಂಡನ ಮನೆಯವರು ಸರಿಯಾದ ಆರೈಕೆ ನೀಡಿಲ್ಲ ಎಂದು ಮೃತಳ ತಾಯಿ ಆರೋಪಿಸಿದ್ದಾರೆ. ಕುಟುಂಬದ ಒಳಜಗಳ, ಕಿರುಕುಳ ಮತ್ತು ಮಾನಸಿಕ ಒತ್ತಡಗಳಿಂದ ನಲುಗಿದ ಪ್ರೇಮಾ, ಕೊನೆಗೆ ಗಂಡನ ಮನೆಯಲ್ಲಿ ನೇಣಿಗೆ ಶರಣಾಗಿದ್ದಾಳೆ.

ಸ್ಥಳಕ್ಕೆ ಭೇಟಿ ನೀಡಿದ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ವರದಕ್ಷಿಣೆ ಕಿರುಕುಳ ಹಾಗೂ ಆತ್ಮಹತ್ಯೆಗೆ ಪ್ರೇರಣೆ ಆರೋಪದಡಿ ಪತಿ ಶಿವಕುಮಾರ್‌ರನ್ನು ಬಂಧಿಸಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಮುಂದುವರಿದಿದೆ.

ಈ ಘಟನೆ ದಾಂಪತ್ಯ ಜೀವನದಲ್ಲಿ ಅನುಮಾನ ಮತ್ತು ಕಿರುಕುಳ ಎಷ್ಟು ಭೀಕರ ಪರಿಣಾಮಗಳನ್ನು ಉಂಟುಮಾಡಬಹುದು ಎಂಬುದಕ್ಕೆ ಮತ್ತೊಂದು ದಾರುಣ ಉದಾಹರಣೆಯಾಗಿದೆ.

ಭ್ರಷ್ಟರ ಬೇಟೆ

Recent Posts

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

3 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

18 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

23 hours ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

2 days ago