Categories: CrimeLatest

ಪ್ರೀತಿ ಹೆಸರಿನಲ್ಲಿ ಕಿರುಕುಳ: ಯುವತಿ-ಪೋಷಕರಿಂದ ಯುವಕನಿಗೆ ಸಾರ್ವಜನಿಕವಾಗಿ ಚಪ್ಪಲಿ ಸೇವೆ..!

ಹುಬ್ಬಳ್ಳಿ: ಪ್ರೀತಿ ಹೆಸರಿನಲ್ಲಿ ಯುವತಿಗೆ ನಿರಂತರ ಕಿರುಕುಳ ನೀಡುತ್ತಿದ್ದ ಯುವಕನಿಗೆ, ಯುವತಿ ಮತ್ತು ಆಕೆಯ ಪೋಷಕರು ಸಾರ್ವಜನಿಕರ ಮುಂದೆ ಚಪ್ಪಲಿಯಿಂದ ಹೊಡೆದ ಘಟನೆ ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.

ನಗರದ ಶಿಗ್ಗಾಂವಿ ಪ್ಲಾಟ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ‘ಬಿಗ್ ಬಾಸ್’ ಹೆಸರಿನ ಸಲೂನ್‌ನಲ್ಲಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ಯುವತಿಯನ್ನು ಪ್ರೀತಿಸಬೇಕೆಂದು ಒತ್ತಾಯಿಸುತ್ತಿದ್ದನೆಂದು ತಿಳಿದುಬಂದಿದೆ. ಯುವತಿ ನಿರಾಕರಿಸಿದ್ದರೂ, ಅವಳನ್ನು ಹಿಂಬಾಲಿಸಿ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ.

ಯುವಕನ ವರ್ತನೆ ತಾಳಲಾರದೆ ಯುವತಿ ಈ ವಿಚಾರವನ್ನು ತನ್ನ ಪೋಷಕರಿಗೆ ತಿಳಿಸಿದ್ದಾಳೆ. ಬಳಿಕ ಯುವತಿ ಮತ್ತು ಪೋಷಕರು ನೇರವಾಗಿ ಯುವಕ ಕೆಲಸ ಮಾಡುತ್ತಿದ್ದ ಸಲೂನ್‌ಗೆ ತೆರಳಿ, ಆತನನ್ನು ಪ್ರಶ್ನಿಸಿದ್ದಾರೆ. ಈ ವೇಳೆ ಮಾತಿನ ಚಕಮಕಿ ತೀವ್ರಗೊಂಡು, ಆಕ್ರೋಶಗೊಂಡ ಯುವತಿ ಮತ್ತು ಪೋಷಕರು ಯುವಕನಿಗೆ ಚಪ್ಪಲಿಯಿಂದ ಹೊಡೆದಿದ್ದಾರೆ.

ಸಾರ್ವಜನಿಕರ ಸಮ್ಮುಖದಲ್ಲೇ ನಡೆದ ಈ ಘಟನೆ ಸ್ಥಳೀಯರಲ್ಲಿ ಸಂಚಲನ ಮೂಡಿಸಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ವಿದ್ಯಾನಗರ ಮತ್ತು ಗೋಕುಲ ರಸ್ತೆ ಠಾಣೆಯ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ. ಕಿರುಕುಳ ನೀಡುತ್ತಿದ್ದ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಪ್ರಕರಣ ದಾಖಲಿಸುವ ಪ್ರಕ್ರಿಯೆ ಮುಂದುವರಿದಿದ್ದು, ಮಹಿಳೆಯರ ಸುರಕ್ಷತೆಗೆ ಸಂಬಂಧಿಸಿದಂತೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

1 hour ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

16 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

21 hours ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

2 days ago