Categories: CrimeLatest

ತರಬೇತಿ ಐಪಿಎಸ್ ಅಧಿಕಾರಿಣಿ ಖಾಸಗಿ ವಿಡಿಯೋ ಚಿತ್ರಿಸಿ ಕಿರುಕುಳ: ಸಹ ತರಬೇತಿ ಅಧಿಕಾರಿ ವಿರುದ್ಧ ಹೈದರಾಬಾದ್‌ನಲ್ಲಿ FIR ದಾಖಲು

ಹೈದರಾಬಾದ್: ರಾಷ್ಟ್ರೀಯ ಪೊಲೀಸ್ ಅಕಾಡೆಮಿ (NPA)ಯಲ್ಲಿ ತರಬೇತಿ ಪಡೆಯುತ್ತಿರುವ ಭಾರತೀಯ ಪೊಲೀಸ್ ಸೇವೆ (IPS) ಅಧಿಕಾರಿಣಿಗೆ ಲೈಂಗಿಕ ಕಿರುಕುಳ, ಹಲ್ಲೆ, ಬೆದರಿಕೆ ಹಾಗೂ ಡಿಜಿಟಲ್ ಕಿರುಕುಳ ನೀಡಿದ ಆರೋಪದ ಮೇಲೆ ಸಹ ತರಬೇತಿ ಐಪಿಎಸ್ ಅಧಿಕಾರಿ ಉದಯ್ ಕೃಷ್ಣ ರೆಡ್ಡಿ ವಿರುದ್ಧ ಹೈದರಾಬಾದ್‌ನ ಅತ್ತಾಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

30 ವರ್ಷದ ತರಬೇತಿ ಐಪಿಎಸ್ ಅಧಿಕಾರಿಣಿ ನೀಡಿರುವ ದೂರಿನ ಪ್ರಕಾರ, ಜೂನ್ 23ರಿಂದಲೇ ಆರೋಪಿ ಉದಯ್ ಕೃಷ್ಣ ರೆಡ್ಡಿ ನಿರಂತರವಾಗಿ ಕಿರುಕುಳ ನೀಡುತ್ತಿದ್ದರು. ವಾಟ್ಸಾಪ್ ಮೂಲಕ ಅಶ್ಲೀಲ ಸಂದೇಶಗಳನ್ನು ಕಳುಹಿಸುವುದು, ಇತರ ತರಬೇತಿ ಅಧಿಕಾರಿಗಳ ಮುಂದೆ ಅವಹೇಳನಕಾರಿ ಮಾತುಗಳನ್ನಾಡುವುದು ಹಾಗೂ ಅವರ ವೈಯಕ್ತಿಕ ಜೀವನದ ಬಗ್ಗೆ ಸುಳ್ಳು ವದಂತಿಗಳನ್ನು ಹರಡುವ ಮೂಲಕ ಮಾನಸಿಕ ಕಿರುಕುಳ ನೀಡಿದ್ದಾಗಿ ಆರೋಪಿಸಲಾಗಿದೆ.

ಇದಲ್ಲದೆ, ಮತ್ತೊಬ್ಬ ತರಬೇತಿ ಅಧಿಕಾರಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಆಧಾರರಹಿತ ಆರೋಪ ಮಾಡುತ್ತಾ, ಅದನ್ನು ಒಪ್ಪಿಕೊಳ್ಳುವಂತೆ ಪದೇ ಪದೇ ಒತ್ತಡ ಹೇರಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಅವಾಚ್ಯ ಶಬ್ದಗಳಿಂದ ನಿಂದಿಸಿ ಮಾನಸಿಕವಾಗಿ ಕಿರುಕುಳ ನೀಡಿದ್ದಾರೆಯೂ ಅಧಿಕಾರಿಣಿ ಆರೋಪಿಸಿದ್ದಾರೆ.

ಜುಲೈ 8ರಂದು ಆರೋಪಿ ತನ್ನ ಮೊಬೈಲ್ ಫೋನ್ ಅನ್ನು ಅಧಿಕಾರಿಣಿಯ ಕೊಠಡಿಗೆ ತೆಗೆದುಕೊಂಡು ಹೋಗಿ, ಬಲವಂತವಾಗಿ ಪಾಸ್‌ವರ್ಡ್ ಕೇಳಿ ಅವರ ವೈಯಕ್ತಿಕ ಸಂದೇಶಗಳನ್ನು ಪರಿಶೀಲಿಸಿದ್ದಾನೆ ಎಂದು ದೂರಿನಲ್ಲಿ ಹೇಳಲಾಗಿದೆ. ಅಲ್ಲದೆ, ಅಧಿಕಾರಿಣಿಯ ಒಪ್ಪಿಗೆಯಿಲ್ಲದೆ ಖಾಸಗಿ ವಿಡಿಯೊವನ್ನು ರಹಸ್ಯವಾಗಿ ಚಿತ್ರೀಕರಿಸಿ, ಅದನ್ನು ಅವರ ಪತಿಗೆ ಕಳುಹಿಸುವ ಮೂಲಕ ಬ್ಲ್ಯಾಕ್‌ಮೇಲ್ ಹಾಗೂ ಮಾನಹಾನಿ ಮಾಡಲು ಯತ್ನಿಸಿದ್ದಾನೆ ಎಂಬ ಆರೋಪವೂ ಕೇಳಿಬಂದಿದೆ.

ಜುಲೈ 9ರ ರಾತ್ರಿ ಆರೋಪಿ ಅಧಿಕಾರಿಣಿಯನ್ನು ಬಲವಂತವಾಗಿ ತನ್ನ ಕೊಠಡಿಗೆ ಕರೆದೊಯ್ದು, ಕೂದಲು ಹಿಡಿದು ಎಳೆದು, ಕತ್ತು ಹಿಸುಕಲು ಯತ್ನಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಅಲ್ಲದೆ, ಚಾಕು ತೋರಿಸಿ ಬೆದರಿಕೆ ಹಾಕಿ, ಲೈಂಗಿಕ ದೌರ್ಜನ್ಯ ಎಸಗಲು ಹಾಗೂ ಖಾಸಗಿ ಅಂಗಗಳನ್ನು ಮುಟ್ಟಲು ಪ್ರಯತ್ನಿಸಿದ್ದಾನೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಜುಲೈ 10ರಂದು ಮತ್ತೆ ಹಲ್ಲೆ ನಡೆಸಿದ್ದಾನೆ ಎಂಬ ಆರೋಪವೂ ದಾಖಲಾಗಿದೆ.

ದೂರಿನ ಆಧಾರದ ಮೇಲೆ ಅತ್ತಾಪುರ ಪೊಲೀಸರು ಹಲ್ಲೆ, ಕ್ರಿಮಿನಲ್ ಬೆದರಿಕೆ, ಮಹಿಳೆಯರ ವಿರುದ್ಧದ ಅಪರಾಧಗಳಿಗೆ ಸಂಬಂಧಿಸಿದ ವಿವಿಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್‌ಗಳು ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆ-2008ರ ಸಂಬಂಧಿತ ವಿಧಿಗಳ ಅಡಿಯಲ್ಲಿ ಎಫ್‌ಐಆರ್ ಸಂಖ್ಯೆ 824/2026 ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಪತಿಯನ್ನೇ ಕೊಲ್ಲಲು ಪತ್ನಿಯ ಸ್ಕೆಚ್‌! ಪ್ರಿಯಕರನ ಮೊಬೈಲ್‌ನಲ್ಲಿ ಸಿಕ್ತು ಶಾಕಿಂಗ್ ಸಾಕ್ಷಿ..!

ಸೂರ್ಯಾಪೇಟೆ: ಅನೈತಿಕ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದಾನೆ ಎಂಬ ಕಾರಣಕ್ಕೆ ಪತಿಯನ್ನೇ ಕೊಲೆ ಮಾಡಲು ಪತ್ನಿ ಹಾಗೂ ಆಕೆಯ ಕುಟುಂಬಸ್ಥರು ಸಂಚು…

1 day ago

ಗಂಡ ನೈಟ್ ಡ್ಯೂಟಿಗೆ ಹೋದಾಗ ಮಕ್ಕಳಿಗೆ ನಿದ್ರೆ ಗುಳಿಗೆ; ಲವ್ವರ್ ಜೊತೆ ಪತ್ನಿಯ ಚಕ್ಕಂದ.. ಮಧ್ಯರಾತ್ರಿ ಮನೆಗೆ ಬಂದ ಗಂಡನಿಗೆ ಕಾದಿತ್ತು ಘೋರ ದುರಂತ!

ಸೋನ್‌ಭದ್ರ: ಗಂಡ ನೈಟ್ ಡ್ಯೂಟಿಗೆ ಹೋದ ಬಳಿಕ ಮಕ್ಕಳಿಗೆ ನಿದ್ರೆ ಮಾತ್ರೆ ನೀಡಿ, ಪ್ರಿಯಕರನನ್ನು ಮನೆಗೆ ಕರೆಸಿಕೊಳ್ಳುತ್ತಿದ್ದ ಪತ್ನಿ, ಕೊನೆಗೆ…

1 day ago

ರೈಲ್ವೆ ಕಾಮಗಾರಿ ಕಾರ್ಮಿಕರಿದ್ದ ಬೊಲೆರೋ ಪಲ್ಟಿ: ಎಂಟು ಮಂದಿಗೆ ಗಂಭೀರ ಗಾಯ

ಗೌರಿಬಿದನೂರು: ರೈಲ್ವೆ ಇಲಾಖೆಯ ಕಾಮಗಾರಿ ಕೆಲಸಕ್ಕೆ ತೆರಳುತ್ತಿದ್ದ ಕೂಲಿ ಕಾರ್ಮಿಕರಿದ್ದ ಬೊಲೆರೋ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ…

1 day ago

ಹುಬ್ಬಳ್ಳಿ–ಧಾರವಾಡದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ: 1,339 ಮಂದಿ ವಿರುದ್ಧ ಪ್ರಕರಣ

ಹುಬ್ಬಳ್ಳಿ–ಧಾರವಾಡ: ಅವಳಿ ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತುಹಾಕಲು ಹುಬ್ಬಳ್ಳಿ–ಧಾರವಾಡ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು, ಕಳೆದ ಮೂರು…

2 days ago

ವಿದ್ಯುತ್ ತಂತಿ ಅಳವಡಿಸಿ ಎರಡು ಜಿಂಕೆಗಳ ಬಲಿ: ಜಮೀನಿನಲ್ಲೇ ಮಾಂಸ ಬೇಯಿಸುತ್ತಿದ್ದ ಆರೋಪಿಗಳು!

ಸಾಗರ: ಜಮೀನಿಗೆ ಅಕ್ರಮವಾಗಿ ವಿದ್ಯುತ್ ತಂತಿ ಅಳವಡಿಸಿ ಎರಡು ಗಂಡು ಜಿಂಕೆಗಳನ್ನು ವಿದ್ಯುತ್ ಸ್ಪರ್ಶದಿಂದ ಸಾಯಿಸಿ, ಅವುಗಳ ಮಾಂಸವನ್ನು ಜಮೀನಿನಲ್ಲೇ…

2 days ago

ಅರ್ಚಕ ವಿಶ್ವೇಶ್ವರ ಭಟ್ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಕುಮಟಾ: ನಗರದ ಪ್ರಸಿದ್ಧ ಕುಂಭೇಶ್ವರ ದೇವಸ್ಥಾನದ ಅರ್ಚಕ ವಿಶ್ವೇಶ್ವರ ಭಟ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರ ಜಿಲ್ಲಾ ಮತ್ತು…

2 days ago