Latest

ಅಟೋದಲ್ಲಿ ಯುವತಿಯರಿಗೆ ಕಿರುಕುಳ: ಸಾರಕ್ಕಿ ಮಾರುಕಟ್ಟೆ ಬಳಿ ಇಬ್ಬರು ಯುವಕರು ಬಂಧನ

ಬೆಂಗಳೂರು: ಆಟೋದಲ್ಲಿ ಪ್ರಯಾಣಿಸುತ್ತಿದ್ದ ಯುವತಿಯರಿಬ್ಬರನ್ನು ಚುಡಾಯಿಸಿ ಕಿರುಕುಳ ನೀಡಿದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಏಪ್ರಿಲ್ 23ರಂದು ನಗರದಲ್ಲಿ ನಡೆದಿದೆ.

ಬಂಧಿತರು ಬನಶಂಕರಿ ನಿವಾಸಿಗಳಾದ ಮುಬಾರಕ್ ಮತ್ತು ಹಫೀಫ್ ಎಂದು ಗುರುತಿಸಲಾಗಿದೆ. ಎಸ್.ಆರ್.ನಗರದ ಸಾರಕ್ಕಿ ಮಾರುಕಟ್ಟೆ ಬಳಿ ಈ ಘಟನೆ ನಡೆದಿದ್ದು, ಬೈಕ್‌ನಲ್ಲಿ ಬಂದ ಇಬ್ಬರು ಕಿಡಿಗೇಡಿಗಳು ಆಟೋ ಅಡ್ಡಗಟ್ಟಿ ಯುವತಿಯರೊಂದಿಗೆ ಅನಾಗರಿಕವಾಗಿ ವರ್ತಿಸಿದ್ದಾರೆ.

ಅವರ ವರ್ತನೆ ಪ್ರಶ್ನಿಸಿದ ಯುವತಿಯರ ತಾಯಿಗೆ ಕೂಡ ಆರೋಪಿಗಳು ಅವಾಚ್ಯ ಶಬ್ದಗಳಿಂದ ನಿಂದಿಸಿ ಭಾರೀ ಅವಮಾನ ಮಾಡಿದ್ದಾರೆ. ನಂತರ, ಪೀಡಿತೆಯ ತಾಯಿ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಿದರು.

ದೂರು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದರು. ಶೀಘ್ರ ಕಾರ್ಯಾಚರಣೆಯಲ್ಲಿ ಮುಬಾರಕ್ ಮತ್ತು ಹಫೀಫ್ ಎಂಬವರನ್ನು ಬಂಧಿಸಲಾಗಿದೆ. ಇಬ್ಬರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ.

nazeer ahamad

Recent Posts

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

1 day ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

2 days ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

2 days ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

2 days ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

3 days ago