ಹಾರೋಹಳ್ಳಿ: ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಕಡಿಮೆ ದರದಲ್ಲಿ ಆಹಾರ ಪೂರೈಸುವ ಉದ್ದೇಶದಿಂದ ಸ್ಥಾಪನೆಯಾಗಿದ್ದ ಇಂದಿರಾ ಕ್ಯಾಂಟೀನ್ ಉದ್ಘಾಟನೆಗೂ ಮುನ್ನವೇ ಕಿಡಿಗೇಡಿಗಳ ಅಕ್ರಮ ಚಟುವಟಿಕೆಗಳಿಗೆ ಸೇರುವ ಸ್ಥಳವಾಗಿ ಮಾರ್ಪಟ್ಟಿದೆ.
ಹಾರೋಹಳ್ಳಿ ಕರ್ನಾಟಕ ಪಬ್ಲಿಕ್ ಶಾಲೆಯ ಆವರಣದಲ್ಲಿ ಸ್ಥಾಪಿತವಾದ ಈ ಕ್ಯಾಂಟೀನ್, ತಾಲ್ಲೂಕು ಕಚೇರಿಯಿಂದ ದೂರದಲ್ಲಿದೆ. ಈ ಕ್ಯಾಂಟೀನ್ ಅನ್ನು ರಾಜ್ಯ ಸರ್ಕಾರ ಜನರ ಅನುಕೂಲಕ್ಕಾಗಿ ಪ್ರಾರಂಭಿಸಬೇಕೆಂದು ಜಾಗವನ್ನು ಆಯ್ಕೆ ಮಾಡಿತ್ತು. ಆದರೆ, ಇತ್ತೀಚೆಗೆ ಕಟ್ಟಡ ಪೂರ್ಣಗೊಂಡು ಐದು ತಿಂಗಳು ಆಗಿದ್ದರೂ, ಇದರ ಮೂಲಭೂತ ಸೌಕರ್ಯಗಳು, ನೀರು ಮತ್ತು ವಿದ್ಯುತ್, ಇನ್ನೂ ಸಂಪರ್ಕವಾಗಿಲ್ಲ. ಇದರಿಂದಾಗಿ, ಈ ಕಟ್ಟಡವನ್ನು ಕಿಡಿಗೇಡಿಗಳು ತಮ್ಮ ಅಕ್ರಮ ಚಟುವಟಿಕೆಗಳಿಗೆ ಉಪಯೋಗಿಸಕೊಳ್ಳುತ್ತಿದ್ದಾರೆ.
ಹಾರೋಹಳ್ಳಿ ಪಟ್ಟಣದಲ್ಲಿ ಪ್ರತಿದಿನವೂ ಸಾವಿರಾರು ಕಾರ್ಮಿಕರು ಮತ್ತು ವಿದ್ಯಾರ್ಥಿಗಳು ತಮ್ಮ ಕೆಲಸ ಮತ್ತು ಶಾಲೆಗಳಿಗೆ ತೆರಳುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ, ಇಂದಿರಾ ಕ್ಯಾಂಟೀನ್ ನಂತಹ ಯೋಜನೆಯ ಅವಶ್ಯಕತೆ ಹೆಚ್ಚಿದ್ದು, ಈ ಕಟ್ಟಡವನ್ನು ಜವಾಬ್ದಾರಿಯುತವಾಗಿ ಬಳಸಬೇಕಾಗಿತ್ತು. ಆದರೆ, ಖಾಲಿ ಕಟ್ಟಡವನ್ನು ಬಂಡವಾಳವಾಗಿ ಬಳಸಿಕೊಂಡು ಕಿಡಿಗೇಡಿಗಳು ಅದನ್ನು ಕುಡಿತ ಹಾಗೂ ಅನಧಿಕೃತ ಚಟುವಟಿಕೆಗಳ ಸ್ಥಳವಾಗಿ ಮಾರ್ಪಟ್ಟಿದ್ದಾರೆ.
ಇನ್ನು, ಈ ಸ್ಥಳ ದ್ವಿಚಕ್ರ ವಾಹನ ಸವಾರರ ಪಾರ್ಕಿಂಗ್ ಕೂಡಾಗಿ ಬಳಸಲಾಗುತ್ತಿದೆ. ಈ ಅಕ್ರಮ ಚಟುವಟಿಕೆಗಳಿಗೆ ತಡೆಯು ಹಾಕಲು ಸ್ಥಳೀಯರು ಪೊಲೀಸರ ಮತ್ತು ಪಟ್ಟಣ ಪಂಚಾಯತ್ ಅಧಿಕಾರಿಗಳಿಂದ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…
ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…
ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…
ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…
ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…
ಕಲಬುರಗಿ: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಅವರ…