ಮನೆ ಮನೆಗೆ ಬಟ್ಟೆ ಮಾರುವುದಾಗಿ ಹೇಳಿಕೊಂಡು ಆರೋಪಿಗಳು ಕಾಣಿಯೂರಿಗೆ ಬಂದಿದ್ದಾರೆ. ಅಲ್ಲಿಂದ ಹಲವು ಮನೆಗಳಿಗೆ ಅವರು ತೆರಳಿದ್ದು, ಬಳಿಕ ದೋಳ್ಪಾಡಿ ಗ್ರಾಮಕ್ಕೂ ಬಂದಿದ್ದರು. ಅಲ್ಲಿ ಅವರು ಬಟ್ಟೆ ಮಾರುವ ನೆಪದಲ್ಲಿ ಮನೆಯೊಂದಕ್ಕೆ ತೆರಳಿದ್ದು, ಒಬ್ಬಂಟಿ ಮಹಿಳೆ ಇರುವುದನ್ನು ಗಮನಿಸಿದ್ದಾರೆ. ಅದಾದ ಬಳಿಕ ಓರ್ವ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ.
ಈ ವೇಳೆ ಮಹಿಳೆ ಜೋರಾಗಿ ಕಿರುಚಾಡಿದ್ದು ಕೂಡಲೇ ಆರೋಪಿಗಳು ತಾವು ಬಂದಿದ್ದ ಕಾರಿನಲ್ಲಿ ಪರಾರಿಯಾಗಲು ಯತ್ನಿಸಿದ್ದಾರೆ. ಮಹಿಳೆ ಕಿರುಚಿದ ಸದ್ದು ಕೇಳಿದ ಸ್ಥಳೀಯರು ಆರೋಪಿಗಳನ್ನು ಬೆನ್ನಟ್ಟಿದ್ದಾರೆ. ಆದರೆ, ಆರೋಪಿಗಳು ಕಾರನ್ನು ವೇಗವಾಗಿ ಚಲಾಯಿಸಿಕೊಂಡು ಅಲ್ಲಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ವೇಳೆ ಕಾರು ಪಲ್ಟಿಯಾಗಿ ಅವಘಡ ಸಂಭವಿಸಿದೆ.
ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದಾರೆ.
ಪೊಳಲಿಯ ಅಡ್ಡೂರು ನಿವಾಸಿಗಳಾದ ರಫೀಕ್ ಹಾಗೂ ರಮಿಯಾಸುದ್ದಿನ್ ಅಪಘಾತದಲ್ಲಿ ಗಾಯಗೊಂಡವರು. ಇವರ ವಿರುದ್ಧ ಅತ್ಯಾಚಾರಕ್ಕೆ ಯತ್ನಿಸಿದ ಬಗ್ಗೆ ಮಹಿಳೆ ದೂರು ನೀಡಿದ್ದು, ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಾಯಗೊಂಡಿರುವ ಆರೋಪಿಗಳನ್ನು ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Related News

error: Content is protected !!