Latest

ಮಾನಸಿಕ ಹಿಂಸೆಗೂಳಿದ ಜೀವ: ಚಿಕ್ಕಮಗಳೂರಲ್ಲಿ ಹೆಡ್ ಕಾನ್‌ಸ್ಟೇಬಲ್ ಆತ್ಮಹತ್ಯೆ

ಚಿಕ್ಕಮಗಳೂರು: ನಗರದ ಬಾರ್ ಲೈನ್ ರಸ್ತೆಯಲ್ಲಿರುವ ಕ್ವಾಟ್ರಸ್‌ನಲ್ಲಿ ಸೇವೆನಿರ್ವಹಿಸುತ್ತಿದ್ದ ಹೆಡ್ ಕಾನ್‌ಸ್ಟೇಬಲ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ (ಜುಲೈ 18) ಬೆಳಕಿಗೆ ಬಂದಿದೆ.

ಆತ್ಮಹತ್ಯೆ ಮಾಡಿಕೊಂಡವರು ಚಿಕ್ಕಮಗಳೂರು ಎಸ್ಪಿ ಕಚೇರಿಯಲ್ಲಿ ಕಂಪ್ಯೂಟರ್ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ 45 ವರ್ಷದ ಕಾಂತರಾಜ್. ಅವರು ತರೀಕೆರೆ ತಾಲೂಕಿನ ಸುಣ್ಣದಹಳ್ಳಿ ಗ್ರಾಮದವರು.

ವರ್ಷಗಳ ಹಿಂದೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾಂತರಾಜ್ ತನ್ನ ಬಲಗಾಲು ಕಳೆದುಕೊಂಡಿದ್ದರು. ಬಳಿಕ ಕೃತಕ ಕಾಲು ಜೋಡಿಸಿಕೊಂಡು ನೌಕರಿ ಮುಂದುವರೆಸಿದ್ದರೂ, ಆ ಗಾಯದ ಪರಿಣಾಮವಾಗಿ ಅವರು ನಿರಂತರ ಮಾನಸಿಕ ಖಿನ್ನತೆಗೆ ಒಳಗಾಗಿದ್ದಂತೆ ಕುಟುಂಬ ಮೂಲಗಳಿಂದ ಮಾಹಿತಿ ದೊರೆತಿದೆ.

ಘಟನೆಯ ದಿನವೆಂದರೆ ಶುಕ್ರವಾರ, ಕುಟುಂಬದವರು ಊರಿಗೆ ತೆರಳಿದ್ದ ಸಮಯದಲ್ಲಿ ಅವರು ಕ್ವಾಟ್ರಸ್‌ನಲ್ಲಿ ಏಕಾಂಗಿಯಾಗಿ ಇದ್ದ ವೇಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಾಂತರಾಜ್ ಹಿಂದೆ ಎ.ಎನ್.ಎಫ್ ಮತ್ತು ಕಳಸ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದು, ತಮ್ಮ ಕರ್ತವ್ಯದಲ್ಲಿಯೇ ಯಶಸ್ವಿಯಾಗಿ ಸೇವೆ ಸಲ್ಲಿಸಿದ್ದರು ಎನ್ನಲಾಗಿದೆ.

ಈ ಕುರಿತಾಗಿ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಮಾನಸಿಕ ಆರೋಗ್ಯದ ಕಾಳಜಿ ಅಗತ್ಯ
ಸೇವೆಯಲ್ಲಿ ಇದ್ದ ವೇಳೆ ಗಾಯಗೊಂಡ ಸಿಬ್ಬಂದಿಗಳ ಮಾನಸಿಕ ಸ್ಥಿತಿ ಹಾಗೂ ಪುನರ್ವಸತಿ ಕುರಿತು ಇಲಾಖೆಯ ಗಮನ ಅಗತ್ಯವಿದೆ ಎಂಬ ಪ್ರಶ್ನೆಗಳು ಈ ಘಟನೆಯ ಮೂಲಕ ಮತ್ತೊಮ್ಮೆ ಎದುರಾಗಿ ನಿಂತಿವೆ.

nazeer ahamad

Recent Posts

ಕರ್ನಾಟಕ ಹೈಕೋರ್ಟ್‌ನಲ್ಲಿ 70 ಹುದ್ದೆಗಳು: ಆಸಕ್ತರಿಗೆ ಉದ್ಯೋಗದ ಸುವರ್ಣಾವಕಾಶ

ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…

2 hours ago

ಕೋರ್ಟ್ ಉದ್ಯೋಗದ ಹೆಸರಿನಲ್ಲಿ ಕೋಟಿ ಕೋಟಿ ಮೋಸ: ಬೆಂಗಳೂರಿನಲ್ಲಿ ಫ್ರಾಡ್ ದಂಪತಿ ಬಂಧನ

ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…

2 hours ago

ಗಂಡ ಬಿಟ್ಟ ಮಹಿಳೆಯರೇ ಇವನ ಟಾರ್ಗೆಟ್; 5 ಮಹಿಳೆಯರ ಜೊತೆ ದೈಹಿಕ ಸಂಪರ್ಕ ಬೆಳೆಸಿ ವಂಚನೆ..!

ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…

2 hours ago

ಗಂಡನಿಲ್ಲದ ವೇಳೆ ಬಾಡಿಗೆಗೆ ಇದ್ದ ಯುವಕನ ಜೊತೆ ಸರಸ; ಅಡ್ಡಿಯಾದ ಅತ್ತೆಯನ್ನು ಕೊಂದ ಸೊಸೆ

ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…

2 hours ago

ಗೌರಿಬಿದನೂರಿನಲ್ಲಿ ಭೀಕರ ರಸ್ತೆ ಅಪಘಾತ – ಮಹಿಳೆ ಸಾವು, ಪುತ್ರನಿಗೆ ಗಾಯ

ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…

3 hours ago

ಗೌರಿಬಿದನೂರಿನಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಅಕ್ರಮ ಬಳಕೆ ವಿರುದ್ಧ ದಾಳಿ – 36 ಸಿಲಿಂಡರ್‌ಗಳು ಜಪ್ತಿ

ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…

3 hours ago