ಹರಿಯಾಣದ ಫರಿದಾಬಾದ್ ಜಿಲ್ಲೆಯಲ್ಲಿ ಒಂದು ಭೀಕರ ಘಟನೆಯು ಬೆಳಕಿಗೆ ಬಂದಿದೆ. ಬುಧವಾರ, ಫರಿದಾಬಾದ್‌ನ ಆಗ್ರಾ ಕಾಲುವೆಯ ಬಳಿ ಪಲ್ಟನ್ ಪಲ್ಲಾ ರಸ್ತೆಯ ಸಮೀಪ, ಟ್ರಾವೆಲ್ ಬ್ಯಾಗ್‌ನಲ್ಲಿ ತಲೆಯಿಲ್ಲದ ಮಹಿಳೆಯ ಶವ ಪತ್ತೆಯಾಗಿದೆ. ಸ್ಥಳೀಯರು ಮಧ್ಯಾಹ್ನ ಈ ಬ್ಯಾಗ್‌ನ, ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದರು.
ಘಟನಾಸ್ಥಳಕ್ಕೆ ದೌಡಾಯಿಸಿದ ಫರಿದಾಬಾದ್ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು, ಈ ಪ್ರಕರಣವನ್ನು ಉದ್ದೇಶಪೂರ್ವಕ ಕೊಲೆ ಮತ್ತು ಸಾಕ್ಷ್ಯ ನಾಶಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 103(1) ಮತ್ತು 238(b) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು, ತನಿಖೆಯನ್ನು ತೀವ್ರಗೊಳಿಸಲಾಗಿದೆ.
ಕಸದ ರಾಶಿಯಲ್ಲಿ ಪತ್ತೆಯಾದ ಶವ
ಮಹಿಳೆಯ ಶವವು ಕಾಲುವೆಯ ಪಕ್ಕದ ಪೊದೆಗಳ ನಡುವೆ ಕಸದ ರಾಶಿಯಲ್ಲಿದ್ದು, ಆಕೆಯ ಕಾಲುಗಳನ್ನು ತೆಳುವಾದ ಹಗ್ಗದಿಂದ ಕಟ್ಟಲಾಗಿತ್ತು. ಪೊಲೀಸರು ಸ್ಥಳದಲ್ಲಿ ಪರಿಶೀಲನೆ ನಡೆಸಿದಾಗ ಶವವು ಕೂಳೆಯಾಗಿ ಹುಳುಗಳಿಂದ ಕೂಡಿತ್ತು ಎಂಬುದಾಗಿ ಎಫ್‌ಐಆರ್‌ನಲ್ಲಿ ದಾಖಲಿಸಲಾಗಿದೆ. ಪೊಲೀಸರು, ಸಾರ್ವಜನಿಕರಲ್ಲಿ ಆತಂಕ ಹುಟ್ಟಿಸಿದೆ.
ತೀವ್ರ ತನಿಖೆ ಆರಂಭ
ಈ ಪ್ರಕರಣದ ತನಿಖೆಯ ನೇತೃತ್ವ ವಹಿಸಿರುವ ಸಹಾಯಕ ಸಬ್-ಇನ್ಸ್‌ಪೆಕ್ಟರ್ ಧರಂಪಾಲ್ ಕೌಶಿಕ್, ಸಂತ್ರಸ್ತೆಯ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿಸಿದ್ದಾರೆ. “ನಾವು ಸುತ್ತಮುತ್ತಲಿನ ಪ್ರದೇಶದ ನಿವಾಸಿಗಳನ್ನು ವಿಚಾರಣೆ ಮಾಡುತ್ತಿದ್ದೇವೆ ಮತ್ತು ಸಂತ್ರಸ್ತೆಯ ಗುರುತು ಪತ್ತೆ ಮಾಡುವಲ್ಲಿ ಹೆಚ್ಚಿನ ಗಮನ ಹರಿಸಿದ್ದೇವೆ” ಎಂದು ಅವರು ತಿಳಿಸಿದ್ದಾರೆ. ಅಲ್ಲದೆ, ಸಂತ್ರಸ್ತೆಯ ಗುರುತು ಹಾಗೂ ಈ ಕೊಲೆಯ ಹಿಂದಿನ ಕಾರಣವನ್ನು ಪತ್ತೆಹಚ್ಚಲು ಸಿಸಿಟಿವಿ ದೃಶ್ಯಾವಳಿ ಮತ್ತು ಬೇರೆ ಸಾಕ್ಷ್ಯಗಳನ್ನು ಸಂಗ್ರಹಿಸಲಾಗುತ್ತಿದೆ.
ಘಟನೆಯು ಸ್ಥಳೀಯರಲ್ಲಿ ಭಯ ಹಾಗೂ ಕುತೂಹಲವನ್ನು ಹುಟ್ಟಿಸಿದೆ. ಪೊಲೀಸರು ಯಾವುದೇ ಸುಳಿವು ಪತ್ತೆಯಾಗುತ್ತದೆಯೇ ಎಂಬುದನ್ನು ಗಮನಿಸುತ್ತಿದ್ದು, ಈ ಭಯಾನಕ ಕೊಲೆಯ ಹಿಂದೆ ಇರುವ ಕಾರಣದ ಬಗ್ಗೆ ಇನ್ನಷ್ಟು ಮಾಹಿತಿ ಬಹಿರಂಗವಾಗುವ ನಿರೀಕ್ಷೆಯಿದೆ.
ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…
ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…
ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…
ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…
ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…
ಪ್ರೇಯಸಿ ಫೋನ್ ಕರೆ ಸ್ವೀಕರಿಸದೇ, ಆಕೆ ಮೊಬೈಲ್‌ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…