ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ ಹರಿದಾಡುತ್ತಿದ್ದು, ಪೋಷಕರು ಹಾಗೂ ಸ್ಥಳೀಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವೈರಲ್ ಆಗಿರುವ ದೃಶ್ಯದಲ್ಲಿ, ಶಾಲೆಯ ಮುಖ್ಯೋಪಾಧ್ಯಾಯಿನಿ ಕಲೈವಾಣಿ ತರಗತಿ ಕೊಠಡಿಯಲ್ಲಿ ಮೇಜಿನ ಮೇಲೆ ಮಲಗಿಕೊಂಡು, ವಿದ್ಯಾರ್ಥಿಗಳಿಂದ ತನ್ನ ಕಾಲುಗಳನ್ನು ಒತ್ತಿಸುತ್ತಿರುವುದು ಸ್ಪಷ್ಟವಾಗಿ ಕಾಣಿಸಿದೆ. ವಿದ್ಯಾಭ್ಯಾಸಕ್ಕಾಗಿ ಶ್ರಮಿಸುತ್ತಿರುವ ಬಡ ಮಕ್ಕಳು ಈ ರೀತಿಯಾಗಿ ಶಿಕ್ಷಕರ ಸೇವೆಗೆ ಬಳಸಲ್ಪಟ್ಟಿದ್ದಾರೆ ಎಂಬ ಸಂಗತಿ ಪೋಷಕರಲ್ಲಿ ಕೋಪ ಹುಟ್ಟಿಸಿದೆ.
ಈ ಶಾಲೆಯಲ್ಲಿ ಸದ್ಯಕ್ಕೆ ಕೇವಲ 30 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಅವರಿಗೆ ಪಾಠ ಕಲಿಸುವ ಬದಲು, ತಮ್ಮ ವೈಯಕ್ತಿಕ ಅಗತ್ಯಗಳನ್ನು ಪೂರೈಸಲು ಬಳಸಿಕೊಂಡಿದ್ದಾರೆ ಎಂಬ ಆರೋಪಗಳು ಕಲೈವಾಣಿ ವಿರುದ್ಧ ಕೇಳಿ ಬಂದಿವೆ. “ಶಿಕ್ಷಕರು ಆದರ್ಶವಾಗಬೇಕು, ಇಂತಹ ವರ್ತನೆ ಅಸಹ್ಯ” ಎಂದು ಟೀಕೆಗಳ ಮಳೆ ಸುರಿಯುತ್ತಿದೆ.
ಘಟನೆಯ ಬಗ್ಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ವರದಿ ಕೋರಿರುವುದಾಗಿ ಮೂಲಗಳು ತಿಳಿಸಿವೆ. ಸ್ಥಳೀಯ ಗ್ರಾಮಸ್ಥರು ಕೂಡ ಮುಖ್ಯೋಪಾಧ್ಯಾಯಿನಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುತ್ತಿದ್ದಾರೆ.
ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…
ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…
ಪ್ರೇಯಸಿ ಫೋನ್ ಕರೆ ಸ್ವೀಕರಿಸದೇ, ಆಕೆ ಮೊಬೈಲ್‌ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…
ಚಿತ್ರದುರ್ಗ: ತಾಲ್ಲೂಕಿನ ಚಿಕ್ಕಗೊಂಡನಹಳ್ಳಿ ಗ್ರಾಮದ ಹತ್ತಿರ ನಡೆದ ವಿಶಿಷ್ಟ ಕಳವು ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಸಾಧುಗಳ ವೇಷ ತಾಳಿ ರೈತರ…
ಭೋಪಾಲ್ : ಪ್ರೀತಿಯನ್ನು ನಿರಾಕರಿಸಿದ ಶಿಕ್ಷಕಿಯ ಮೇಲೆ ಹದಿಹರೆಯದ ವಿದ್ಯಾರ್ಥಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಮಧ್ಯಪ್ರದೇಶದ ನರಸಿಂಹಪುರದಲ್ಲಿ…
ರೈಲಿನ ಶೌಚಾಲಯದಲ್ಲಿ ಚಿತ್ರೀಕರಿಸಲ್ಪಟ್ಟಿರುವ ಒಂದು ವಿಡಿಯೊ ಈಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ವಿಡಿಯೊದಲ್ಲಿ ಮೊದಲು ಮಾಸ್ಕ್ ಧರಿಸಿರುವ ವ್ಯಕ್ತಿಯೊಬ್ಬ ಶೌಚಾಲಯದಿಂದ…