ಭಟ್ಕಳ: ಸಾರ್ವಜನಿಕರ ಆರೋಗ್ಯ ರಕ್ಷಣೆಯನ್ನು ಪ್ರಮುಖವಾಗಿ ಪರಿಗಣಿಸಿರುವ ಜಿಲ್ಲಾ ಆರೋಗ್ಯ ಇಲಾಖೆ, ಭಟ್ಕಳ ಪಟ್ಟಣದಲ್ಲಿ ನಕಲಿ ಕ್ಲಿನಿಕ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ. ಸೋಮವಾರ ಟಿಎಚ್‌ಒ ಡಾ. ಸನಾ ಅವರ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ನಿಯಮಬಾಹಿರವಾಗಿ ಕಾರ್ಯನಿರ್ವಹಿಸುತ್ತಿದ್ದ ಮೂರು ಕ್ಲಿನಿಕ್‌ಗಳನ್ನು ಸೀಲ್ ಮಾಡಲಾಗಿದೆ.
ಜಿಲ್ಲಾ ಆರೋಗ್ಯ ಇಲಾಖೆಯ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ನೋಡಲ್ ಅಧಿಕಾರಿ, ಆಯುಷ್ ಅಧಿಕಾರಿ, ನಗರ ಠಾಣೆ ಪೊಲೀಸರು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಭಾಗವಹಿಸಿದ್ದರು. ತಂಡವು ಭಟ್ಕಳ ಪಟ್ಟಣದ ನಾಲ್ಕು ಕ್ಲಿನಿಕ್‌ಗಳು ಹಾಗೂ ಶಿರಾಲಿಯ ಒಂದು ಕ್ಲಿನಿಕ್‌ನಲ್ಲಿ ಪರಿಶೀಲನೆ ನಡೆಸಿತು.
ಪರಿಶೀಲನೆ ವೇಳೆ ವೈದ್ಯರು ಹೊಂದಿರುವ ಎಂ.ಬಿ.ಬಿ.ಎಸ್., ಬಿ.ಎ.ಎಂ.ಎಸ್., ಬಿ.ಎಚ್.ಎಂ.ಎಸ್. ಹಾಗೂ ಯುನಾನಿ ಪದವಿಗಳ ಪ್ರಮಾಣಪತ್ರಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಲಾಯಿತು. ಈ ವೇಳೆ ಅಗತ್ಯ ಮಾನ್ಯತೆ ಇಲ್ಲದೆ ಕಾರ್ಯನಿರ್ವಹಿಸುತ್ತಿದ್ದ ಮೂರು ಕ್ಲಿನಿಕ್‌ಗಳನ್ನು ತಕ್ಷಣ ಸೀಲ್ ಮಾಡಲಾಗಿದೆ.
ಮದಿನಾ ಕಾಲನಿಯಲ್ಲಿರುವ ಒಂದು ಕ್ಲಿನಿಕ್ ಮಾಲೀಕರು ಸ್ವಯಂಪ್ರೇರಿತವಾಗಿ ಕ್ಲಿನಿಕ್ ಮುಚ್ಚಿದ್ದು, ಅವರ ಬಾಗಿಲಿಗೆ ಆರೋಗ್ಯ ಇಲಾಖೆ ನೋಟಿಸ್ ಅಂಟಿಸಿದೆ.
ಈ ಕುರಿತು ವರದಿಯನ್ನು ಜಿಲ್ಲಾ ಆರೋಗ್ಯ ಇಲಾಖೆಗೆ ರವಾನಿಸಲಾಗಿದ್ದು, ಸಮಗ್ರ ತನಿಖೆಯ ಬಳಿಕ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಟಿಎಚ್‌ಒ ಡಾ. ಸನಾ ತಿಳಿಸಿದ್ದಾರೆ.
ಮುಂದಿನ ದಿನಗಳಲ್ಲಿ ಪಟ್ಟಣ ಹಾಗೂ ತಾಲೂಕಿನ ವಿವಿಧ ಭಾಗಗಳಲ್ಲಿ ಇಂತಹ ದಾಳಿ ಮತ್ತು ಪರಿಶೀಲನೆ ಮುಂದುವರಿಯಲಿದ್ದು, ಸಾರ್ವಜನಿಕರು ಅನಧಿಕೃತ ವೈದ್ಯರಿಂದ ಚಿಕಿತ್ಸೆ ಪಡೆಯಬಾರದು ಎಂದು ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ. ಸರ್ಕಾರದಿಂದ ಮಾನ್ಯತೆ ಪಡೆದ ನೋಂದಾಯಿತ ವೈದ್ಯರನ್ನು ಮಾತ್ರ ಸಂಪರ್ಕಿಸುವಂತೆ ಮನವಿ ಮಾಡಲಾಗಿದೆ.
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…
ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…
ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…
ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…