Latest

ಮುಂಬೈನಲ್ಲಿ ಹೃದಯವಿದ್ರಾವಕ ಘಟನೆ: ಕ್ಯಾನ್ಸರ್ ಪೀಡಿತ ಅಜ್ಜಿಯನ್ನು ಕಸದ ರಾಶಿಗೆ ಎಸೆದು ಹೋದ ಮೊಮ್ಮಗ..!

ಮುಂಬೈನಲ್ಲಿ ಮಾನವೀಯತೆ ಕಳೆಯುತ್ತಿರುವ ಕ್ರೂರ ಘಟನೆ ಬೆಳಕಿಗೆ ಬಂದಿದೆ. ಚರ್ಮದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ 60 ವರ್ಷದ ಹಿರಿಯ ನಾಗರಿಕೆಯನ್ನು ತನ್ನದೇ ಮೊಮ್ಮಗನೆಂದು ಶಂಕಿಸಲಾದ ವ್ಯಕ್ತಿ ಕಸದ ರಾಶಿಗೆ ಎಸೆದುಹೋಗಿದ್ದಾನೆ.

ಶನಿವಾರ ಮುಂಬೈ ನಗರದ ಆರೆ ಕಾಲೋನಿಯ ರಸ್ತೆಯ ಪಕ್ಕದ ಕಸದ ರಾಶಿಯ ಬಳಿ ದುರಸ್ಥಿತಿಯಲ್ಲಿದ್ದ ಮಹಿಳೆಯನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಯಶೋದಾ ಗಾಯಕ್‌ವಾಡ್ ಎಂದು ಗುರುತಿಸಲ್ಪಟ್ಟ ಈ ಮಹಿಳೆ ಶರೀರದ ಸ್ಥಿತಿ ಅತ್ಯಂತ ನಾಜೂಕಾಗಿದ್ದು, ಅವರು ಬಹುತೇಕ ಮಾತನಾಡಲಾಗದಷ್ಟು ದುರ್ಬಲರಾಗಿದ್ದಾರಂತೆ.

ಪೊಲೀಸರ ಪ್ರಾಥಮಿಕ ವಿಚಾರಣೆ ವೇಳೆ, ಯಶೋದಾ ತಮ್ಮ ಮೊಮ್ಮಗನೇ ತಮ್ಮನ್ನು ರಸ್ತೆಯ ಪಕ್ಕದ ಕಸದ ರಾಶಿಗೆ ಎಸೆದುಹೋಗಿದ್ದಾನೆ ಎಂದು ತಿಳಿಸಿದ್ದಾಳೆ. ತಕ್ಷಣವೇ ವೈದ್ಯಕೀಯ ಸಹಾಯದ ಅವಶ್ಯಕತೆ ಇದ್ದರೂ, ಹಲವಾರು ಆಸ್ಪತ್ರೆಗಳು ಆಕೆಯ ಸ್ಥಿತಿ ಗಮನಿಸಿ ದಾಖಲಾತಿಗೆ ನಿರಾಕರಿಸಿವೆ. ಕೊನೆಗೆ ಕೂಪರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಯಶೋದಾ ಗಾಯಕ್‌ವಾಡ್ ಅವರಿಂದ ಮಲಾಡ್ ಹಾಗೂ ಕಾಂದಿವಲಿ ಪ್ರದೇಶಗಳಿಗೆ ಸಂಬಂಧಿಸಿದ ಎರಡು ವಿಳಾಸಗಳನ್ನು ಪೊಲೀಸರು ಪಡೆದುಕೊಂಡಿದ್ದಾರೆ. ಇದೀಗ ಪೊಲೀಸರು ಆ ವಿಳಾಸದ ಮೂಲಕ ಕುಟುಂಬಸ್ಥರನ್ನು ಪತ್ತೆಹಚ್ಚಲು ಕ್ರಮ ಕೈಗೊಂಡಿದ್ದು, ಯಶೋದಾ ಅವರ ಚಿತ್ರವನ್ನು ವಿವಿಧ ಪೊಲೀಸ್ ಠಾಣೆಗಳಿಗೆ ಹಂಚಿ, ಸಂಬಂಧಿಕರ ಜಾಡು ಹುಡುಕುತ್ತಿದ್ದಾರೆ.

ಈ ಮಧ್ಯೆ, ಹಿರಿಯ ನಾಗರಿಕರ ಮೇಲಿನ ಈ ರೀತಿಯ ಅಮಾನವೀಯ ವರ್ತನೆಗೆ ಸಾರ್ವಜನಿಕ ಆಕ್ರೋಶ ವ್ಯಕ್ತವಾಗಿದೆ. ಘಟನೆ ಸಂಬಂಧ ಹೆಚ್ಚಿನ ತನಿಖೆ ಮುಂದುವರಿದಿದ್ದು, ಆರೋಪಿಗೆ ಶೀಘ್ರದಲ್ಲೇ ಕಾನೂನಿನ ಕಡಿವಾಣ ಬೀಳುವ ಸಾಧ್ಯತೆ ಇದೆ.

nazeer ahamad

Recent Posts

ಕರ್ನಾಟಕ ಹೈಕೋರ್ಟ್‌ನಲ್ಲಿ 70 ಹುದ್ದೆಗಳು: ಆಸಕ್ತರಿಗೆ ಉದ್ಯೋಗದ ಸುವರ್ಣಾವಕಾಶ

ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…

4 hours ago

ಕೋರ್ಟ್ ಉದ್ಯೋಗದ ಹೆಸರಿನಲ್ಲಿ ಕೋಟಿ ಕೋಟಿ ಮೋಸ: ಬೆಂಗಳೂರಿನಲ್ಲಿ ಫ್ರಾಡ್ ದಂಪತಿ ಬಂಧನ

ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…

4 hours ago

ಗಂಡ ಬಿಟ್ಟ ಮಹಿಳೆಯರೇ ಇವನ ಟಾರ್ಗೆಟ್; 5 ಮಹಿಳೆಯರ ಜೊತೆ ದೈಹಿಕ ಸಂಪರ್ಕ ಬೆಳೆಸಿ ವಂಚನೆ..!

ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…

4 hours ago

ಗಂಡನಿಲ್ಲದ ವೇಳೆ ಬಾಡಿಗೆಗೆ ಇದ್ದ ಯುವಕನ ಜೊತೆ ಸರಸ; ಅಡ್ಡಿಯಾದ ಅತ್ತೆಯನ್ನು ಕೊಂದ ಸೊಸೆ

ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…

5 hours ago

ಗೌರಿಬಿದನೂರಿನಲ್ಲಿ ಭೀಕರ ರಸ್ತೆ ಅಪಘಾತ – ಮಹಿಳೆ ಸಾವು, ಪುತ್ರನಿಗೆ ಗಾಯ

ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…

5 hours ago

ಗೌರಿಬಿದನೂರಿನಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಅಕ್ರಮ ಬಳಕೆ ವಿರುದ್ಧ ದಾಳಿ – 36 ಸಿಲಿಂಡರ್‌ಗಳು ಜಪ್ತಿ

ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…

6 hours ago