ಬಸವನಬಾಗೇವಾಡಿ: ಹೆಸ್ಕಾಂನ ಕಾರ್ಯನಿರ್ವಾಹಕ ಎಂಜಿನಿಯರ್ (ಇಇ) ಸಿದ್ರಾಮ ಬಿರಾದಾರ ಅವರು ಗುತ್ತಿಗೆದಾರನಿಂದ ₹10 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಸಿಕ್ಕಿಬಿದ್ದಿದ್ದಾರೆ.
ಗುತ್ತಿಗೆದಾರ ಸಂತೋಷ ಕುಮಾರ ಹುಲಸೂರು ಅವರು ಕೈಗೊಂಡಿದ್ದ ಐದು ಕಾಮಗಾರಿಗಳ ₹2 ಲಕ್ಷ ಮೊತ್ತದ ಬಿಲ್ ಪಾವತಿಗೆ ಸಿದ್ರಾಮ ಬಿರಾದಾರ ಅವರು ₹15 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರೆಂದು ಆರೋಪಿಸಲಾಗಿದೆ. ಈ ಪೈಕಿ ಈಗಾಗಲೇ ₹5 ಸಾವಿರವನ್ನು ಪಡೆದಿದ್ದ ಅವರು, ಉಳಿದ ₹10 ಸಾವಿರವನ್ನು ತಮ್ಮ ಕಚೇರಿಯಲ್ಲೇ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ರೆಡ್‌ಹ್ಯಾಂಡ್ ಆಗಿ ಬಂಧಿಸಿದ್ದಾರೆ.
ಬೆಂಗಳೂರು ಲೋಕಾಯುಕ್ತ ಡಿವೈಎಸ್ಪಿ ಪುಟ್ಟ ಓಬಳರೆಡ್ಡಿ ಹಾಗೂ ವಸಂತ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಯಿತು. ಲೋಕಾಯುಕ್ತ ಪೊಲೀಸ್ ಇನ್‌ಸ್ಪೆಕ್ಟರ್ ರಾಮಪ್ಪ ಸಾವಳಗಿ, ಎಸ್. ಬಿ. ಪಾಟೀಲ, ರಾಜಶೇಖರಯ್ಯ ಸೇರಿದಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಪ್ರಕರಣ ದಾಖಲಿಸಿಕೊಂಡಿರುವ ಲೋಕಾಯುಕ್ತ ಪೊಲೀಸರು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.
ಬೆಂಗಳೂರು: ಹುಳಿಮಾವು ಸಮೀಪದ ಬಸವನಪುರದಲ್ಲಿ ಲೀಲಾ-ಮಂಜ-ಸಂತು ನಡುವಿನ ತ್ರಿಕೋನ ಪ್ರೇಮಕಥೆ ಮತ್ತೆ ಸದ್ದು ಮಾಡಿದೆ. ಪತ್ನಿ ಲೀಲಾ ದೂರವಾಗಿದ್ದಾಳೆ ಎಂಬ…
ಮೀರತ್: ರಕ್ಷಣೆ ನೀಡಬೇಕಾದ ಪೊಲೀಸನೇ ಯುವತಿಯೊಬ್ಬಳಿಗೆ ವಂಚನೆ ಎಸಗಿದ ಆರೋಪ ಉತ್ತರ ಪ್ರದೇಶದ ಮೀರತ್‌ನಲ್ಲಿ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ…
ಬೆಂಗಳೂರು: ಪ್ರೀತಿಯ ಹೆಸರಿನಲ್ಲಿ ಯುವತಿಗೆ ನಿರಂತರ ಕಿರುಕುಳ ನೀಡಿ, ಖಾಸಗಿ ಫೋಟೋ-ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ ಆರೋಪ…
ಸೀತಾಪುರ: ಪೊಲೀಸ್ ಠಾಣೆಗಳಿಗೆ ಪ್ರತಿದಿನ ಹಲವು ರೀತಿಯ ದೂರುಗಳು ಬರುತ್ತವೆ. ಆದರೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಮಹಮೂದಾಬಾದ್ ಕೊತ್ವಾಲಿ…
ತಮಿಳುನಾಡಿನ ಚೆನ್ನೈನಲ್ಲಿ ಮಹಿಳೆಯೊಬ್ಬರನ್ನು ಭೀಕರವಾಗಿ ಹತ್ಯೆಗೈದು, ಆಕೆಯ ದೇಹದ ಭಾಗಗಳನ್ನು ಬಳಸಿ ಬಿರಿಯಾನಿ ತಯಾರಿಸಿರುವ ಆರೋಪ ಕೇಳಿಬಂದಿದ್ದು, ಇಡೀ ಪ್ರಕರಣವೇ…
ಚನ್ನರಾಯಪಟ್ಟಣ: ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಅಂಬಿಕ ನಗರದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಕುಟುಂಬಸ್ಥರು…