ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ ಮೀನಾಮೇಷ ಎಣಿಸುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ.
ತೆರುವುಗೊಳಿಸಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳ ಕಾರ್ಯಾಲಯದಿಂದ ಪತ್ರ ಬರೆದಿದ್ದರೂ ತಾಲೂಕು ಆಡಳಿತ ಮೌನಕ್ಕೆ ಶರಣಾಗಿರುವುದು ಭಾರಿ ಅನುಮಾನಗಳಿಗೆ ಎಡೆ ಮಾಡಿಕೊಟ್ಟಂತಾಗಿದೆ.ಅನಧಿಕೃತವಾಗಿ ಒತ್ತುವರಿ ಮಾಡಿಕೊಂಡಿರುವುದಾಗಿ ಭೂಮಾಪಕರ ವರದಿ ನೀಡಿ ಎರಡು ವರ್ಷ ಕಳೆದಿದ್ದರೂ ಯಾವುದೇ ಕ್ರಮ ಕೈಗೊಳ್ಳದಿರುವುದು ಶಂಕೆಗೆ ಕಾರಣವಾಗಿದೆ.
ನಂಜನಗೂಡು ತಾಲೂಕು ಕಸಬಾ ಹೋಬಳಿ ವಳಗೆರೆ ಗ್ರಾಮ ಸರ್ವೆ ನಂ.193 ರಲ್ಲಿ ಎರಡು ಎಕ್ರೆ ಸರ್ಕಾರಿ ಖರಾಬು ಗೋಮಾಳ ಜಮೀನಿದ್ದು ಇದನ್ನುಮಂಡ್ಯ ಮೂಲದ ಖಾಸಗಿ ವ್ಯಕ್ತಿಯೊಬ್ಬರು ಅಕ್ರಮವಾಗಿ ಅತಿಕ್ರಮಣ ಮಾಡಿ ಹೈಟೆಕ್ ಪೌಲ್ಟ್ರಿ ಫಾರಂ,ಮೂರು ವಾಸದ ಮನೆ ಒಂದು ವಾಟರ್ ಟ್ಯಾಂಕ್ ನಿರ್ಮಿಸಿಕೊಂಡಿದ್ದಾರೆ.
ಅಲ್ಲದೆ ಅಕ್ರಮ ಒತ್ತುವರಿ ಮಾಡಿದ ವ್ಯಕ್ತಿಗಳು ಸ್ಥಳೀಯ ರೈತರಿಗೆ ತೊಂದರೆ ಕೊಡುತ್ತಿದ್ದಾರೆ. ಸರಕಾರಿ ಒತ್ತುವರಿ ತೆರುವುಗೊಳಿಸುವಂತೆ ತಾಲೂಕು ಆಡಳಿತಕ್ಕೆ 2023 ರಲ್ಲೇ ದೂರು ಬಂದಿದೆ.ಇದರಂತೆ ಭೂಮಾಪಕರು ಅಳತೆ ಮಾಡಿದಾಗ ಒತ್ತುವರಿ ಆಗಿರುವುದಾಗಿ ಅಧಿಕೃತವಾಗಿ ವರದಿ ನೀಡಿದ್ದಾರೆ.
ಈ ಬಗ್ಗೆ ದಲಿತ ಸಂಘರರ್ಷ ಸಮಿತಿ ಸಹ ದೂರು ನೀಡಿದೆ.ಭೂಮಾಪಕರು ವರದಿ ನೀಡಿ ಎರಡೂವರೆ ವರ್ಷ ಕಳೆದಿದೆ
ಹಾಗೂ ತೆರುವುಗೊಳಿಸುವಂತೆ ಜಿಲ್ಲಾಧಿಕಾರಿಗಳ ಕಾರ್ಯಾಲಯದಿಂದ ಉಪವಿಭಾಗಾಧಿಕಾರಿಗಳಿಗೂ ಪತ್ರ ರವಾನೆ ಆಗಿದೆ.ಇಷ್ಟೆಲ್ಲಾ ಬೆಳವಣಿಗೆ ಆದ್ರೂ ತಮ್ಮ ಆಸ್ತಿಯನ್ನ ರಕ್ಷಿಸಿಕೊಳ್ಳಲು ನಂಜನಗೂಡು ತಾಲೂಕು ಆಡಳಿತ ಆಸಕ್ತಿ ತೋರಿಸುತ್ತಿಲ್ಲ.
ಯಾವುದೇ ಕ್ರಮವೂ ಕೈಗೊಂಡಿಲ್ಲ.ಕೋಟ್ಯಾಂತರ ಬೆಲೆ ಬಾಳುವ ಆಸ್ತಿಯನ್ನ ಖಾಸಗಿ ವ್ಯಕ್ತಿ ಅನುಭವಿಸುತ್ತಿದ್ದರೂ ಜಾಣಕುರುಡರಂತೆ ವರ್ತಿಸುತ್ತಿರುವ ತಾಲೂಕು ಆಡಳಿತಕ್ಕೆ ಜಿಲ್ಲಾಡಳಿತ ಚುರುಕು ಮುಟ್ಟಿಸಿ ತಮ್ಮ. ಆಸ್ತಿಯನ್ನ ರಕ್ಷಿಸಿಕೊಳ್ಳಬೇಕಿದೆ.

Leave a Reply

Your email address will not be published. Required fields are marked *

Related News

error: Content is protected !!