Latest

ಹೈಕೋರ್ಟ್ ಆದೇಶ: ಕ್ರಿಕೆಟಿಗ ಮುಹಮ್ಮದ್ ಶಮಿ ತನ್ನ ವಿಚ್ಛೇದಿತ ಪತ್ನಿ ಮತ್ತು ಮಗಳಿಗೆ ತಿಂಗಳಿಗೆ 4 ಲಕ್ಷ ರೂಪಾಯಿ ಪಾವತಿಸಬೇಕು.!

ಕೋಲ್ಕತ್ತಾ, ಜುಲೈ 2: ಭಾರತೀಯ ವೇಗದ ಬೌಲರ್ ಮುಹಮ್ಮದ್ ಶಮಿಗೆ ತನ್ನ ವಿಚ್ಛೇದಿತ ಪತ್ನಿ ಹಸೀನ್ ಜಹಾನ್ ಮತ್ತು ಮಗಳಿಗೆ ಮಾಸಿಕ 4 ಲಕ್ಷ ರೂಪಾಯಿ ಜೀವನೋಪಾಯ ಪಾವತಿಸಲು ಕೋಲ್ಕತ್ತಾ ಹೈಕೋರ್ಟ್ ಆದೇಶಿಸಿದೆ.

ನ್ಯಾಯಮೂರ್ತಿ ಅಜಯ್ ಕುಮಾರ್ ಮುಖರ್ಜಿ ಅವರ ಅಧ್ಯಕ್ಷತೆಯ ಏಕಸದಸ್ಯ ಪೀಠವು ಈ ಆದೇಶ ನೀಡಿದ್ದು, ಶಮಿ ತಿಂಗಳಿಗೆ ಹಸೀನ್ ಜಹಾನ್‌ಗೆ 1.5 ಲಕ್ಷ ರೂ. ಹಾಗೂ ಮಗಳು ಐರಾ ಶಮಿಗೆ 2.5 ಲಕ್ಷ ರೂ. ಪಾವತಿಸಬೇಕು ಎಂದು ಸೂಚಿಸಿದೆ.

ಈ ಮೊದಲು 2023ರಲ್ಲಿ, ಜಿಲ್ಲಾ ಸೆಷನ್ಸ್ ನ್ಯಾಯಾಲಯವು ಶಮಿಗೆ ಹಸೀನ್ ಜಹಾನ್‌ಗೆ 50,000 ರೂ. ಮತ್ತು ಮಗಳಿಗೆ 80,000 ರೂ. ಪಾವತಿಸುವಂತೆ ನಿರ್ದೇಶಿಸಿತ್ತು. ಆದರೆ, ಈ ಮೊತ್ತ ತೀರಾ ಕಡಿಮೆ ಎಂದು ಹಸೀನ್ ಜಹಾನ್ ಹೈಕೋರ್ಟ್ ಮೆಟ್ಟಿಲೇರಿದ್ದರು. ತಮ್ಮ ಮತ್ತು ಮಗಳ ಉಜ್ಜೀವನಕ್ಕಾಗಿ ಒಟ್ಟು 10 ಲಕ್ಷ ರೂಪಾಯಿಗಳ ಮಾಸಿಕ ಪಾವತಿಗೆ ಅವರು ವಿನಂತಿಸಿದ್ದರು.

ಹಸೀನ್ ಜಹಾನ್ ಕಳೆದ ಕೆಲವು ವರ್ಷಗಳಲ್ಲಿ ಶಮಿಯ ವಿರುದ್ಧ ಹಲವಾರು ಆರೋಪಗಳನ್ನು ಹೊರ ಹಾಕಿದ್ದರು. 2018ರಲ್ಲಿ ಅವರು ಶಮಿಯ ವಿರುದ್ಧ ದೈಹಿಕ ಮತ್ತು ಮಾನಸಿಕ ಹಿಂಸೆ, ವರದಕ್ಷಿಣೆ ಕಿರುಕುಳ, ಹಾಗೂ ಮ್ಯಾಚ್ ಫಿಕ್ಸಿಂಗ್ ಆರೋಪಗಳನ್ನು ಮಾಡಿದ್ದಾರೆ. ಪಾಕಿಸ್ತಾನದ ಮಹಿಳೆಯೊಂದರ ಜೊತೆ ಹಣದ ವ್ಯವಹಾರವಿತ್ತು ಎಂದು ಕೂಡಾ ಅವರು ಆರೋಪಿಸಿದ್ದರು. ಈ ಕಾರಣದಿಂದ ಶಮಿ ಕೆಲಕಾಲ ಬಿಸಿಸಿಐ ಗುತ್ತಿಗೆಯಿಂದವೂ ಹೊರಗಾದರು. ಆದರೆ ನಂತರ ಅವರನ್ನು ಮ್ಯಾಚ್ ಫಿಕ್ಸಿಂಗ್ ಆರೋಪಗಳಿಂದ ಮುಕ್ತಗೊಳಿಸಲಾಯಿತು.

ಹಸೀನ್ ಜಹಾನ್ ವಿವಾಹಕ್ಕೂ ಮುನ್ನ ಮಾದಕಳಾಗಿ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಚಿಯರ್‌ಲೀಡರ್ ಆಗಿ ಕೆಲಸ ಮಾಡಿದ್ದರು. 2014ರಲ್ಲಿ ಶಮಿ-ಹಸೀನ್ ವಿವಾಹವಾದ ಬಳಿಕ, 2015ರಲ್ಲಿ ಅವರಿಗೆ ಮಗಳು ಜನಿಸಿದ್ದಳು.

ಈ ತೀರ್ಪು ಹೊರಬಿದ್ದಿರುವ ಹಿನ್ನೆಲೆಯಲ್ಲಿ, ಶಮಿ ಹತ್ತಿರದ ಮೂಲಗಳಿಂದ ಯಾವುದೇ ಪ್ರತಿಕ್ರಿಯೆ ಇನ್ನೂ ಲಭ್ಯವಾಗಿಲ್ಲ.

nazeer ahamad

Recent Posts

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

20 hours ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

1 day ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

2 days ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

2 days ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

2 days ago