Latest

5 & 8 ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಅನುಮತಿ.

ರಾಜ್ಯದ ಶಾಲೆಗಳಲ್ಲಿ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವ ವಿವಾದಕ್ಕೆ ಅಂತ್ಯ ಹಾಡಲು ಹೈಕೋರ್ಟ್ ನಿರ್ಧರಿಸಿದ್ದು, 5 ಮತ್ತು 8 ನೇ ತರಗತಿ ಪಬ್ಲಿಕ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಬುಧವಾರ ಅನುಮತಿ ನೀಡಿದೆ. ಮಾರ್ಚ್ 27 ರಿಂದ ರಾಜ್ಯದಲ್ಲಿ ಬೋರ್ಡ್‌ ಪರೀಕ್ಷೆ ನಡೆಸಲಾಗುತ್ತದೆ. ಬೋರ್ಡ್ ಎಕ್ಸಾಂ ನಡೆಸಲು ಶಿಕ್ಷಣ ಕಾಯ್ದೆಯಡಿ ನಿರ್ಬಂಧವಿಲ್ಲ ಎಂದು ಪರೀಕ್ಷೆಗಳನ್ನು ನಡೆಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿರುವ ವಿಭಾಗೀಯ ನ್ಯಾಯಪೀಠ ಕೆಲವು ಷರತ್ತುಗಳನ್ನು ಹಾಕಿ, ಅದರಂತೆ ಪರೀಕ್ಷೆ ನಡೆಸಲು ಸೂಚಿಸಿದೆ. ಜೊತೆಗೆ ಈ ಹಿಂದೆ ಸರ್ಕಾರದ ಆದೇಶಕ್ಕೆ ತಡೆ ನೀಡಿದ್ದ ಏಕಸದಸ್ಯ ಪೀಠ ನೀಡಿದ್ದ ಆದೇಶಕ್ಕೆ ತಡೆ ನೀಡಿದೆ. ಬೋರ್ಡ್‌ ಪರೀಕ್ಷೆ ನಡೆಸುವ ಸುತ್ತೋಲೆ ರದ್ದುಪಡಿಸಿದ್ದ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು. ನ್ಯಾಯಮೂರ್ತಿ ಜಿ‌. ನರೇಂದರ್ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ಅರ್ಜಿ ವಿಚಾರಣೆ ನಡೆಸಿತು. ಬುಧವಾರವೂ ವಿಚಾರಣೆ ಮುಂದುವರಿದ ಬಳಿಕ ನ್ಯಾಯಾಲಯ ಪರೀಕ್ಷೆಗೆ ಅನುಮತಿ ನೀಡಿದೆ.
ಬೋರ್ಡ್ ಪರೀಕ್ಷೆ ನಡೆಸಲು ಹಲವು ಷರತ್ತುಗಳು: * ಮಾರ್ಚ್ 27 ರಿಂದ ಎರಡು ತರಗತಿಗಳಿಗೆ ಪರೀಕ್ಷೆ ನಡೆಸಬೇಕು * ಕೂಡಲೇ ಬೋರ್ಡ್ ಪರೀಕ್ಷಾ ವೇಳಾಪಟ್ಟಿಯನ್ನು ಸಿದ್ಧಪಡಿಸಿ * ಪಠ್ಯಕ್ರಮದಲ್ಲಿ ಉಲ್ಲೇಖಿಸಿರುವುದನ್ನು ಬಿಟ್ಟು ಬೇರೆ ಪ್ರಶ್ನೆಗಳನ್ನು ಕೇಳಬಾರದು * ಪರೀಕ್ಷೆಯಲ್ಲಿ ಯಾವ ವಿದ್ಯಾರ್ಥಿಯನ್ನು ಅನುತ್ತೀರ್ಣಗೊಳಿಸುವಂತಿಲ್ಲ * ಪರೀಕ್ಷೆಯ ಫಲಿತಾಂಶವನ್ನು ಸಾರ್ವಜನಿಕವಾಗಿ ಪ್ರಕಟಿಸುವಂತಿಲ್ಲ.
ಪ್ರಕರಣದ ಹಿನ್ನೆಲೆ: ರಾಜ್ಯ ಪಠ್ಯಕ್ರಮದ ಶಾಲೆಗಳಲ್ಲಿ 5 ಮತ್ತು 8ನೇ ತರಗತಿಯ ವಿದ್ಯಾರ್ಥಿಗಳಿಗೆ ಶಾಲಾ ಮಟ್ಟದ ಮೌಲ್ಯಮಾಪನಕ್ಕೆ ಬದಲಾಗಿ ರಾಜ್ಯ ಮಟ್ಟದ ಬೋರ್ಡ್ ಪರೀಕ್ಷೆ ನಡೆಸಲು ತೀರ್ಮಾನಿಸಿ ರಾಜ್ಯ ಸರ್ಕಾರವು 2022ರ ಡಿಸೆಂಬರ್ 12, 13 ಮತ್ತು 2023ರ ಜನವರಿ 4 ರಂದು ಸುತ್ತೋಲೆ ಹೊರಡಿಸಿತ್ತು. ಇದನ್ನು ವಿರೋಧಿಸಿ ಪೋಷಕರ ಸಂಘಟನೆ ಹೈಕೋರ್ಟ್ ಮೊರೆ ಹೋಗಿತ್ತು. ಪೋಷಕರ ಮನವಿಗೆ ಸಮ್ಮತಿಸಿದ್ದ ನ್ಯಾಯಾಲಯ ಸರ್ಕಾರದ ಆದೇಶಕ್ಕೆ ತಡೆ ನೀಡಿತ್ತು. ಇದನ್ನು ಪ್ರಶ್ನಿಸಿ ಸರ್ಕಾರ ಮೇಲ್ಮನವಿ ಸಲ್ಲಿಸಿದ್ದು, ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡುವಂತೆ ಮನವಿ ಮಾಡಿತ್ತು. ಈ ಸಂಬಂಧ ಮಂಗಳವಾರ ವಿಚಾರಣೆ ನಡೆಸಿದ ಹೈಕೋರ್ಟ್ ಸುತ್ತೋಲೆ ರದ್ದುಪಡಿಸಿದ ಆದೇಶಕ್ಕೆ ತಡೆ ನೀಡಲು ನಿರಾಕರಿಸಿ ವಿಚಾರಣೆ ಬುಧವಾರಕ್ಕೆ ಮುಂದೂಡಿತ್ತು. ಪ್ರಶ್ನೆ ಪತ್ರಿಕೆಯಲ್ಲಿ ಪಠ್ಯಕ್ರಮದಿಂದ ಹೊರತಾದ ಪ್ರಶ್ನೆಗಳಿರುವುದಿಲ್ಲ ಎಂಬ ಬಗ್ಗೆ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಪ್ರಮಾಣ ಪತ್ರ ಸಲ್ಲಿಸಲು ಸೂಚನೆ ನೀಡಿತ್ತು. ಬುಧವರಾ ಹೈಕೋರ್ಟ್ ವಿಭಾಗೀಯ ಪೀಠ ವಿಚಾರಣೆ ನಡೆಸಿ ಬೋರ್ಡ್ ಪರೀಕ್ಷೆ ನಡೆಸಲು ಷರತ್ತು ವಿಧಿಸಿ ಅನುಮತಿ ನೀಡಿದೆ.

ಭ್ರಷ್ಟರ ಬೇಟೆ

Recent Posts

ಯುವತಿ ಅತ್ಯಾಚಾರ, ಕೊಲೆ ಪ್ರಕರಣ: ಕರ್ತವ್ಯಲೋಪ ಆರೋಪದಲ್ಲಿ 4 ಪೊಲೀಸ್ ಪೇದೆಗಳು ಅಮಾನತು

ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…

1 day ago

KSRTC ಬಸ್‌ನಲ್ಲಿ ಯುವತಿಗೆ ಕಿರುಕುಳ ಆರೋಪ: ಚಪ್ಪಲಿಯಿಂದ ಯುವಕನಿಗೆ ಧರ್ಮದೇಟು, ಕ್ಷಮೆಯಾಚನೆ

ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್‌ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್‌ನಲ್ಲಿ…

1 day ago

MBBS ಓದಲು ರಷ್ಯಾಗೆ ಹೋದ ಯುವಕನಿಗೆ ಪ್ರೊಫೆಸರ್ ಜೊತೆ ಪ್ರೀತಿ; ಮದುವೆ ಬಳಿಕ ಕ್ಲಿನಿಕ್ ಆರಂಭಿಸಿ ಲಕ್ಷಾಂತರ ಸಂಪಾದನೆ!

ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…

1 day ago

ಶಾಲಾ ಬಾಲಕಿಯರನ್ನು ಪ್ರೇಮದ ಬಲೆಗೆ ಬೀಳಿಸಿ ಹಣ ಸಂಪಾದನೆ ಆರೋಪ: ದೆಹಲಿಯಲ್ಲಿ 24 ವರ್ಷದ ಯುವಕ ಬಂಧನ

ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್‌ನಲ್ಲಿ ಪತ್ತೆಯಾದ…

1 day ago

ಕಿತ್ತೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: ಆಭರಣ ಕಳ್ಳತನ ಪ್ರಕರಣ ಭೇದಿಸಿ 5 ಅಂತರರಾಜ್ಯ ಕಳ್ಳರ ಬಂಧನ

ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…

1 day ago

ಬೆಳಗಾವಿಯಲ್ಲಿ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯಿದೆ ಅನುಷ್ಠಾನದ ಮೌಲ್ಯಮಾಪನ: ಸಂತ್ರಸ್ತರೊಂದಿಗೆ ಗುಂಪು ಚರ್ಚೆ

ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…

1 day ago