Categories: Latest

ಪತ್ನಿಯ ಮೇಲಿನ ಬಲವಂತದ ಸಂಭೋಗ ಆರೋಪ: ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಿರಾಕರಣೆ

ಪ್ರತ್ಯೇಕವಾಗಿ ವಾಸಿಸುತ್ತಿದ್ದ ಪತ್ನಿಯೊಂದಿಗೆ ಬಲವಂತದ ಸಂಭೋಗ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಪತಿಯೊಬ್ಬರ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣವನ್ನು ರದ್ದುಪಡಿಸಲು ಹೈಕೋರ್ಟ್ ಸ್ಪಷ್ಟವಾಗಿ ನಿರಾಕರಿಸಿದೆ.

ತಮಿಳುನಾಡಿನ ದಕ್ಷಿಣ ಮಧುರೈ ಜಿಲ್ಲೆಯ 37 ವರ್ಷದ ವ್ಯಕ್ತಿಯೊಬ್ಬರು, ತಮ್ಮ ಪತ್ನಿ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ದಾಖಲಿಸಿರುವ ದೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 6ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಯನ್ನು ರದ್ದುಪಡಿಸುವಂತೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿ ತಿರಸ್ಕರಿಸಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ‘ಪತ್ನಿ ತನ್ನ ಖಾಸಗಿ ಭಾಗದಲ್ಲಿ ನೋವು ಉಂಟಾಗಿದೆ ಎಂದು ಆಸ್ಪತ್ರೆಗೆ ತೆರಳಿ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆದಿದ್ದಾಗಿ ದೂರಿನಲ್ಲಿ ಹೇಳಿದ್ದಾರೆ. ಆದರೆ ವಾಸ್ತವದಲ್ಲಿ ಅವರು ಹೊರರೋಗಿ ವಿಭಾಗದಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಜೊತೆಗೆ ವಿಧಿವಿಜ್ಞಾನ ಪ್ರಯೋಗಾಲಯದ ವರದಿಯಲ್ಲೂ ಸಂಭೋಗ ನಡೆದಿಲ್ಲ ಎಂದು ಉಲ್ಲೇಖಿಸಲಾಗಿದೆ. ಇದರಿಂದಾಗಿ ಇದು ಸುಳ್ಳು ಪ್ರಕರಣ’ ಎಂದು ವಾದಿಸಿದರು.

ಇದಕ್ಕೆ ಪ್ರತಿಯಾಗಿ, ದೂರುದಾರರಾದ ಪತ್ನಿ ಸ್ವತಃ ವಾದ ಮಂಡಿಸಿ, ‘ಘಟನೆ ನಡೆದ ದಿನ ಬೆಳಗ್ಗೆ 4.40ರ ಸುಮಾರಿಗೆ ಆಸ್ಪತ್ರೆಗೆ ಹೋದಾಗ ಹೊರರೋಗಿ ವಿಭಾಗ ತೆರೆದಿರಲಿಲ್ಲ. ಸ್ತ್ರೀರೋಗ ತಜ್ಞೆಯೂ ಲಭ್ಯ ಇರಲಿಲ್ಲ. ಆದ್ದರಿಂದ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆದಿದ್ದೇನೆ. ದಾಖಲೆಗಳಲ್ಲಿ ಮಾತ್ರ ಹೊರರೋಗಿ ವಿಭಾಗ ಎಂದು ನಮೂದಿಸಲಾಗಿದೆ’ ಎಂದು ಸ್ಪಷ್ಟನೆ ನೀಡಿದರು.

ಅದೇ ವೇಳೆ, ‘ಘಟನೆ ನಡೆದ ಸಂದರ್ಭದಲ್ಲಿ ಪತಿ ಸ್ಥಳದಲ್ಲಿದ್ದುದನ್ನು ಪೊಲೀಸರು ಸಂಗ್ರಹಿಸಿದ ಕಾಲ್ ಡೀಟೆಲ್ಸ್ ರೆಕಾರ್ಡ್ (CDR) ಮೂಲಕ ದೃಢಪಡಿಸಿದ್ದಾರೆ’ ಎಂದೂ ತಿಳಿಸಿದರು.

ಇದನ್ನು ವಿರೋಧಿಸಿದ ಅರ್ಜಿದಾರರ ಪರ ವಕೀಲರು, ‘ಪತ್ನಿಯೇ ಮಾತುಕತೆಗೆ ಪತಿಯನ್ನು ಮನೆಗೆ ಕರೆಸಿಕೊಂಡಿದ್ದು, ಆ ವೇಳೆ ಯಾವುದೇ ಸಂಭೋಗ ನಡೆದಿಲ್ಲ’ ಎಂದು ವಾದಿಸಿದರು.

ಎರಡೂ ಪಕ್ಷಗಳ ವಾದಗಳನ್ನು ಆಲಿಸಿದ ನ್ಯಾಯಪೀಠ, ‘ಅತ್ಯಾಚಾರ ಆರೋಪದಂತಹ ಗಂಭೀರ ಪ್ರಕರಣವನ್ನು ಈ ಹಂತದಲ್ಲಿ ರದ್ದುಪಡಿಸಲು ಸಾಧ್ಯವಿಲ್ಲ. ಸಂಭೋಗ ನಡೆದಿದೆ ಅಥವಾ ಆರೋಪ ಸುಳ್ಳು ಎಂಬುದನ್ನು ವಿಚಾರಣಾ ನ್ಯಾಯಾಲಯವೇ ಸಾಕ್ಷ್ಯಾಧಾರಗಳ ಆಧಾರದ ಮೇಲೆ ನಿರ್ಧರಿಸಬೇಕು’ ಎಂದು ಹೇಳಿತು.

ಇದಲ್ಲದೆ, ‘ಅರ್ಜಿದಾರರು ದೋಷಾರೋಪಗಳನ್ನು ಕೈಬಿಡಲು ವಿಚಾರಣಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸುವ ಸ್ವಾತಂತ್ರ್ಯ ಹೊಂದಿದ್ದಾರೆ’ ಎಂದು ತಿಳಿಸಿ, ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿತು.

ಪ್ರಕರಣದ ಹಿನ್ನೆಲೆ:
ಪತ್ನಿಯ ಪ್ರಕಾರ, ‘2019ರಿಂದ ನಾವು ಪ್ರತ್ಯೇಕವಾಗಿ ವಾಸಿಸುತ್ತಿದ್ದೇವೆ. 2021ರ ಅಂತ್ಯದ ವೇಳೆ ಅತ್ಯಾಚಾರದ ಘಟನೆ ನಡೆದಿದೆ’. ಮತ್ತೊಂದೆಡೆ, ಪತಿ ‘2016ರಲ್ಲಿ ಪತ್ನಿಯೇ ಮನೆ ಬಿಟ್ಟು ಹೋಗಿದ್ದಾಳೆ’ ಎಂದು ಹೇಳುತ್ತಿದ್ದಾರೆ. ಇದಲ್ಲದೆ, ಪತ್ನಿ ಕ್ರೌರ್ಯದ ಆರೋಪ ಮತ್ತು ಜೀವನಾಂಶದ ಪ್ರಕರಣಗಳನ್ನೂ ಮುಂದುವರಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

12 minutes ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

15 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

19 hours ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

2 days ago