ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರೇವ್ ಪಾರ್ಟಿಗಳಿಗೆ ಕಡಿವಾಣ ಹಾಕಲು ಪೊಲೀಸರು ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದರೂ, ಆಯೋಜಕರು ಹೊಸ ಹೊಸ ಮಾರ್ಗಗಳನ್ನು ಕಂಡುಕೊಳ್ಳುತ್ತಿರುವುದು ಮತ್ತೆ ಬೆಳಕಿಗೆ ಬಂದಿದೆ. ನಗರದ ಪ್ರತಿಷ್ಠಿತ ಎಚ್‌ಎಸ್‌ಆರ್ ಲೇಔಟ್‌ನ ಐಪಿಎಸ್ ಲೇಔಟ್‌ನಲ್ಲಿ ನಡೆದಿದ್ದ ಹೈಫೈ ರೇವ್ ಪಾರ್ಟಿಯ ಮೇಲೆ ಪೊಲೀಸರು ದಾಳಿ ನಡೆಸಿ ಅಕ್ರಮ ಚಟುವಟಿಕೆಗಳನ್ನು ಪತ್ತೆಹಚ್ಚಿದ್ದಾರೆ.
ಎಚ್‌ಎಸ್‌ಆರ್ ಲೇಔಟ್ 6ನೇ ಸೆಕ್ಟರ್‌ನಲ್ಲಿರುವ ಸಿ-9 ವಿಲ್ಲಾವನ್ನು ‘ರೇವ್ ಕೀ ಹಾಸ್ಪಿಟಾಲಿಟಿ ಸರ್ವಿಸ್’ ಹೆಸರಿನಲ್ಲಿ ಸುಮಾರು ₹20,000 ಬಾಡಿಗೆ ನೀಡಿ ಬುಕ್ ಮಾಡಲಾಗಿತ್ತು. ‘ಅಮಿಗೋಸ್’ ಆಪ್ ಮೂಲಕ ಯುವಕ-ಯುವತಿಯರಿಗೆ ರಹಸ್ಯವಾಗಿ ಆಹ್ವಾನ ನೀಡಲಾಗಿತ್ತು. ಪಾರ್ಟಿಗೆ ಪ್ರವೇಶಕ್ಕಾಗಿ ಯುವಕರಿಂದ ₹1,099 ಹಾಗೂ ಯುವತಿಯರಿಂದ ₹499 ಶುಲ್ಕ ವಸೂಲಿ ಮಾಡಲಾಗುತ್ತಿತ್ತು ಎನ್ನಲಾಗಿದೆ.
ವಿಲ್ಲಾದೊಳಗೆ ಮದ್ಯದ ವ್ಯವಸ್ಥೆ ಮಾಡಲಾಗಿದ್ದು, ರಾಜ್ಯದಲ್ಲಿ ನಿಷೇಧಿತವಾಗಿರುವ ಹುಕ್ಕಾ ಹಾಗೂ ಇ-ಸಿಗರೇಟ್‌ಗಳನ್ನೂ ಬಳಸಲಾಗುತ್ತಿತ್ತು. ಜೋರಾದ ಸಂಗೀತ, ಡ್ಯಾನ್ಸ್ ಹಾಗೂ ರಾತ್ರಿ ಪೂರ್ತಿ ನಡೆಯುತ್ತಿದ್ದ ಪಾರ್ಟಿಯ ಬಗ್ಗೆ ಮಾಹಿತಿ ಪಡೆದ ಮಹಿಳಾ ಘಟಕದ ಪೊಲೀಸರು ತಕ್ಷಣ ಕಾರ್ಯಾಚರಣೆ ನಡೆಸಿ ವಿಲ್ಲಾ ಮೇಲೆ ದಾಳಿ ಮಾಡಿದ್ದಾರೆ.
ದಾಳಿಯ ವೇಳೆ ಸ್ಥಳದಲ್ಲಿದ್ದ ಕೆಲ ಯುವತಿಯರನ್ನು ಸುರಕ್ಷಿತವಾಗಿ ಹೊರತೆಗೆದಿರುವುದಾಗಿ ತಿಳಿದುಬಂದಿದೆ. ಅಲ್ಲದೆ, ನಿಷೇಧಿತ ವಸ್ತುಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.
ಶಾಂತಿ ಮತ್ತು ಉತ್ತಮ ವಸತಿ ಪ್ರದೇಶವೆಂದು ಗುರುತಿಸಿಕೊಂಡಿರುವ ಐಪಿಎಸ್ ಲೇಔಟ್‌ನಲ್ಲಿ ಇಂತಹ ಅಕ್ರಮ ರೇವ್ ಪಾರ್ಟಿ ನಡೆದಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಈ ಜಾಲದ ಹಿಂದಿರುವ ಪ್ರಮುಖ ಸಂಘಟಕರು ಯಾರು ಹಾಗೂ ಇನ್ನಷ್ಟು ಮಂದಿ ಭಾಗಿಯಾಗಿದ್ದಾರೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬಾಗಲಕೋಟೆ: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆಯೇ ಎಂಬ…
ನವದೆಹಲಿ: ಪಾಸ್‌ಪೋರ್ಟ್ ಅರ್ಜಿ ಶುಲ್ಕವನ್ನು ಹೆಚ್ಚಿಸುವುದರ ಜೊತೆಗೆ ಮಕ್ಕಳ ಪಾಸ್‌ಪೋರ್ಟ್‌ನ ಮಾನ್ಯತಾ ಅವಧಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗಳನ್ನು…
ತಾಯಿ-ತಂದೆಯಿಲ್ಲದ ವೇದಳನ್ನು ಕಳೆದುಕೊಂಡ ಅಜ್ಜಿ-ತಾತನ ಆಕ್ರಂದನ ಗೌರಿಬಿದನೂರು: ನಗರದಲ್ಲಿ ಅಪಘಾತಗಳ ಸರಣಿ ಮುಂದುವರಿದಿರುವ ನಡುವೆಯೇ ಮತ್ತೊಂದು ಮನಕಲಕುವ ರಸ್ತೆ ದುರಂತ…
ಕಳೆದ ವರ್ಷದ 265 ರೂ. ಬೆಲೆಯ ಶೂಗಳು ಇನ್ನೂ ಬಾಳಿಕೆ; ಪ್ರಸಕ್ತ ಸಾಲಿನಲ್ಲಿ ವಿತರಿಸಿದ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ…
ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ…
ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ…