ಚಿಕ್ಕಬಳ್ಳಾಪುರ: ಒಂದೇ ಗ್ರಾಮದ ಆದರೆ ಭಿನ್ನ ಧರ್ಮದ ಯುವಕ-ಯುವತಿ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದು, ರಕ್ಷಣೆ ಕೋರಿ ಪೊಲೀಸರ ಮೊರೆ ಹೋಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಮೈಲಪನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ನಾಗಾರ್ಜುನ ಮತ್ತು ಫಸಿಯಾ ಕಳೆದ ಎರಡು ವರ್ಷಗಳಿಂದ ಪ್ರೀತಿಯಲ್ಲಿದ್ದರು. ಆದರೆ, ಈ ಸಂಬಂಧವನ್ನು ಯುವತಿಯ ಪೋಷಕರು ಒಪ್ಪಿಕೊಳ್ಳದೇ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ, ಇಬ್ಬರೂ ಮನೆಯನ್ನೇ ತೊರೆದು ಮದುವೆಯಾಗಿದ್ದಾರೆ.
ಪೋಷಕರ ಆಕ್ಷೇಪನೆ ಹಾಗೂ ಹಿಂಸೆ ಭಯದಿಂದ ನವವಿವಾಹಿತ ದಂಪತಿ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ಆಗಮಿಸಿ, ರಕ್ಷಣೆ ನೀಡುವಂತೆ ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ, ಇಬ್ಬರ ಕುಟುಂಬದ ಸದಸ್ಯರನ್ನು ಕರೆಸಿ ಯುವತಿಯ ಅಭಿಪ್ರಾಯ ತಿಳಿದುಕೊಳ್ಳಲಾಗಿದೆ. ವಿಚಾರಣೆ ವೇಳೆ, ತಾನು ಸ್ವಇಚ್ಛೆಯಿಂದ ಮದುವೆಯಾಗಿದ್ದು, ನಾಗಾರ್ಜುನ ಜೊತೆಗೆ ಜೀವನ ನಡೆಸಲು ಬಯಸುತ್ತೇನೆ ಎಂದು ಫಸಿಯಾ ಸ್ಪಷ್ಟಪಡಿಸಿದ್ದಾಳೆ.
ಯುವತಿಯ ಹೇಳಿಕೆ ಆಧಾರದ ಮೇಲೆ, ಪೊಲೀಸರು ದಂಪತಿಗೆ ರಕ್ಷಣೆ ಒದಗಿಸಿ ಕಳುಹಿಸಿದ್ದಾರೆ. ಅಲ್ಲದೇ, ಪೊಲೀಸ್ ಠಾಣೆ ಬಳಿ ಜಮಾಯಿಸಿದ್ದ ಜನತೆಗೆ ಎಚ್ಚರಿಕೆ ನೀಡಿದ್ದು, ಹಂಗಾಮಿ ಉದ್ವೇಗ ನಿಯಂತ್ರಿಸಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…
ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…
ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…
ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…
ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…
ಕಲಬುರಗಿ: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಅವರ…