Categories: CrimeLatestWorld

ಪತಿಯ ಅನೈತಿಕ ಸಂಬಂಧ ಬಯಲಾದ ಬೆನ್ನಲ್ಲೇ ಐತಿಹಾಸಿಕ ತೀರ್ಪು; ಮಾಜಿ ಪತ್ನಿಗೆ ₹6,245 ಕೋಟಿ ಜೀವನಾಂಶ!

ಸಿಯೋಲ್ (ದಕ್ಷಿಣ ಕೊರಿಯಾ): ದಕ್ಷಿಣ ಕೊರಿಯಾದಲ್ಲಿ ನಡೆದಿರುವ ಬಹುಕೋಟಿ ಮೌಲ್ಯದ ವಿಚ್ಛೇದನ ಪ್ರಕರಣವೊಂದು ಜಾಗತಿಕ ಮಟ್ಟದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಪತಿಯ ಅನೈತಿಕ ಸಂಬಂಧವನ್ನು ಬಹಿರಂಗಪಡಿಸಿದ ಬಳಿಕ ನ್ಯಾಯಾಲಯದ ಮೆಟ್ಟಿಲೇರಿದ್ದ ಮಾಜಿ ಪತ್ನಿಗೆ ಬರೋಬ್ಬರಿ ₹6,245 ಕೋಟಿ (944 ಬಿಲಿಯನ್ ವೋನ್) ಜೀವನಾಂಶ ನೀಡುವಂತೆ ಸಿಯೋಲ್ ಹೈಕೋರ್ಟ್ ಆದೇಶಿಸಿದೆ. ಇದು ದಕ್ಷಿಣ ಕೊರಿಯಾದ ಇತಿಹಾಸದಲ್ಲೇ ಅತಿದೊಡ್ಡ ವಿಚ್ಛೇದನ ಪರಿಹಾರವೆಂದು ಪರಿಗಣಿಸಲಾಗಿದೆ.

ಈ ಪ್ರಕರಣದಲ್ಲಿ ದೇಶದ ಪ್ರಮುಖ ಕೈಗಾರಿಕಾ ಸಂಸ್ಥೆಯಾದ ಎಸ್‌ಕೆ ಗ್ರೂಪ್‌ನ ಅಧ್ಯಕ್ಷ ಚೆಯ್ ಟೇ-ವಾನ್ ತಮ್ಮ ಮಾಜಿ ಪತ್ನಿ ರೋ ಸೋ-ಯೊಂಗ್ ಅವರಿಗೆ 944 ಬಿಲಿಯನ್ ವೋನ್‌ (ಸುಮಾರು 640 ಮಿಲಿಯನ್ ಅಮೆರಿಕನ್ ಡಾಲರ್) ನಗದು ರೂಪದಲ್ಲಿ ಪಾವತಿಸಬೇಕೆಂದು ನ್ಯಾಯಾಲಯ ತೀರ್ಪು ನೀಡಿದೆ.

ರೋ ಸೋ-ಯೊಂಗ್ ಅವರು ದಕ್ಷಿಣ ಕೊರಿಯಾದ ಮಾಜಿ ಅಧ್ಯಕ್ಷ ರೋ ಟೇ-ವೂ ಅವರ ಪುತ್ರಿ. 1988ರಲ್ಲಿ ಚೆಯ್ ಟೇ-ವಾನ್ ಅವರನ್ನು ವಿವಾಹವಾಗಿದ್ದ ಅವರು, 2015ರಲ್ಲಿ ಪತಿ ಮತ್ತೊಬ್ಬ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿರುವುದು ಹಾಗೂ ಅವರಿಗೆ ಮಗುವಿರುವ ಸಂಗತಿ ಬಹಿರಂಗವಾದ ಬಳಿಕ ವಿಚ್ಛೇದನಕ್ಕಾಗಿ ನ್ಯಾಯಾಲಯದ ಮೊರೆ ಹೋಗಿದ್ದರು.

ಪ್ರಕರಣದ ವಿಚಾರಣೆ ವೇಳೆ ಚೆಯ್ ಟೇ-ವಾನ್ ಅವರ ಆಸ್ತಿ ಮತ್ತು ವ್ಯವಹಾರ ಸಾಮ್ರಾಜ್ಯದ ಬೆಳವಣಿಗೆಯಲ್ಲಿ ರೋ ಸೋ-ಯೊಂಗ್ ಅವರ ಪರೋಕ್ಷ ಕೊಡುಗೆ ಮಹತ್ವದ್ದಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಕುಟುಂಬ ನಿರ್ವಹಣೆ, ಸಾಮಾಜಿಕ ಜವಾಬ್ದಾರಿಗಳು ಹಾಗೂ ವ್ಯವಹಾರಿಕ ಚಟುವಟಿಕೆಗಳಿಗೆ ಅವರು ನೀಡಿದ ಬೆಂಬಲವನ್ನು ಪರಿಗಣಿಸಿ ಈ ಪ್ರಮಾಣದ ಪರಿಹಾರವನ್ನು ನಿಗದಿಪಡಿಸಲಾಗಿದೆ ಎಂದು ತೀರ್ಪಿನಲ್ಲಿ ಉಲ್ಲೇಖಿಸಲಾಗಿದೆ.

ಆದರೆ, ಎಸ್‌ಕೆ ಗ್ರೂಪ್‌ನ ಬೆಳವಣಿಗೆಗೆ ರೋ ಸೋ-ಯೊಂಗ್ ಅವರ ತಂದೆಯ ರಾಜಕೀಯ ಅಥವಾ ಆರ್ಥಿಕ ಪ್ರಭಾವವೇ ಕಾರಣ ಎಂಬ ವಾದವನ್ನು ನ್ಯಾಯಾಲಯ ತಳ್ಳಿಹಾಕಿದೆ. ಹೈಕೋರ್ಟ್ ತೀರ್ಪಿನಿಂದ ಹಿನ್ನಡೆಯಾಗಿರುವ ಚೆಯ್ ಟೇ-ವಾನ್, ಈ ಆದೇಶವನ್ನು ಪ್ರಶ್ನಿಸಿ ದಕ್ಷಿಣ ಕೊರಿಯಾದ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವ ಸಾಧ್ಯತೆ ಇದೆ. ಹೀಗಾಗಿ, ಜಾಗತಿಕ ಗಮನ ಸೆಳೆದಿರುವ ಈ ಹೈಪ್ರೊಫೈಲ್ ವಿಚ್ಛೇದನ ಪ್ರಕರಣ ಇನ್ನಷ್ಟು ಚರ್ಚೆಗೆ ಕಾರಣವಾಗುವ ನಿರೀಕ್ಷೆಯಿದೆ.

ಭ್ರಷ್ಟರ ಬೇಟೆ

Recent Posts

ಬಾಗಲಕೋಟೆಯಲ್ಲಿ ರಾತ್ರಿ 11 ಗಂಟೆಯ ಬಳಿಕ ನಿಯಮ ಉಲ್ಲಂಘಿಸಿ ಮರಳು ಸಾಗಾಟ: ನಂಬರ್ ಪ್ಲೇಟ್ ಇಲ್ಲದ ಟಿಪ್ಪರ್‌ಗಳ ಸಂಚಾರ, ಅಧಿಕಾರಿಗಳು ಮೌನ!?

ಬಾಗಲಕೋಟೆ: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆಯೇ ಎಂಬ…

10 hours ago

ಪಾಸ್‌ಪೋರ್ಟ್ ಶುಲ್ಕ ಹೆಚ್ಚಳ: ಮಕ್ಕಳ ಮಾನ್ಯತಾ ಅವಧಿಯಲ್ಲೂ ಬದಲಾವಣೆ, ಹೊಸ ನಿಯಮ ಜಾರಿ

ನವದೆಹಲಿ: ಪಾಸ್‌ಪೋರ್ಟ್ ಅರ್ಜಿ ಶುಲ್ಕವನ್ನು ಹೆಚ್ಚಿಸುವುದರ ಜೊತೆಗೆ ಮಕ್ಕಳ ಪಾಸ್‌ಪೋರ್ಟ್‌ನ ಮಾನ್ಯತಾ ಅವಧಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗಳನ್ನು…

10 hours ago

ಗೌರಿಬಿದನೂರಿನಲ್ಲಿ ಅಪಘಾತಕ್ಕೆ ನಾಲ್ಕು ವರ್ಷದ ಬಾಲಕಿ ಬಲಿ

ತಾಯಿ-ತಂದೆಯಿಲ್ಲದ ವೇದಳನ್ನು ಕಳೆದುಕೊಂಡ ಅಜ್ಜಿ-ತಾತನ ಆಕ್ರಂದನ ಗೌರಿಬಿದನೂರು: ನಗರದಲ್ಲಿ ಅಪಘಾತಗಳ ಸರಣಿ ಮುಂದುವರಿದಿರುವ ನಡುವೆಯೇ ಮತ್ತೊಂದು ಮನಕಲಕುವ ರಸ್ತೆ ದುರಂತ…

4 days ago

ಸರ್ಕಾರಿ ಶಾಲಾ ಮಕ್ಕಳಿಗೆ ಅನ್ಯಾಯ: ನೂರು ರೂಪಾಯಿಗೂ ಬೆಲೆಬಾಳದ ಶೂಗಳನ್ನು ವಿತರಿಸಿರುವ ಸರ್ಕಾರ, ಒಂದೇ ತಿಂಗಳಿಗೆ ಹಾಳದ ಶೂಗಳು..!

ಕಳೆದ ವರ್ಷದ 265 ರೂ. ಬೆಲೆಯ ಶೂಗಳು ಇನ್ನೂ ಬಾಳಿಕೆ; ಪ್ರಸಕ್ತ ಸಾಲಿನಲ್ಲಿ ವಿತರಿಸಿದ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ…

4 days ago

50 ಲಕ್ಷ ರೂ. ಲಂಚ ಸ್ವೀಕರಿಸುವಾಗ ಧಾರವಾಡ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ: ಖರಾಬು ಜಮೀನು ದಾಖಲೆ ತಿದ್ದುಪಡಿಗೆ ಬೇಡಿಕೆ..!

ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ…

4 days ago

ಪಂಚಾಯಿತಿ ಕಚೇರಿಯಲ್ಲೇ ಆಸ್ತಿ ವಿವಾದಕ್ಕೆ ರಕ್ತದೊಕುಳಿ: ಅಣ್ಣ–ತಮ್ಮಂದಿರ ಜಗಳದಲ್ಲಿ ತಂದೆ–ಮಗಳು ಕೊಲೆ, ಮತ್ತೊಬ್ಬನಿಗೆ ಗಂಭೀರ ಗಾಯ

ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ…

4 days ago