ಧಾರವಾಡ: ಧಾರವಾಡ ಜಿಲ್ಲೆ ಆದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿರುವದರಿಂದ ನಾಳೆ ಜುಲೈ 24 ರಂದು ಜಿಲ್ಲೆಯ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಒಂದು ದಿನದ ರಜೆ ಘೋಷಿಸಿ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಇಂದು ಸಂಜೆ ಆದೇಶಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಕಳೆದ ಎರಡಮೂರು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಮಕ್ಕಳ ರಕ್ಷಣೆ ಹಿತದೃಷ್ಟಿಯಿಂದ ನಾಳೆ ಒಂದು ದಿನ ಮಾತ್ರ ಜಿಲ್ಲೆಯ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ.
ಈ ರಜಾ ದಿನವನ್ನು ಮುಂದಿನ ಆಗಸ್ಟ್ 5ರ ಶನಿವಾರದಂದು ಪೂರ್ಣ ದಿನ ಶಾಲೆ ನಡೆಸುವ ಮೂಲಕ ಜುಲೈ 24 ರ ರಜೆ ಹೊಂದಾಣಿಕೆ ಮಾಡಿಕೋಳ್ಳಬೇಕು. ಈ ಕುರಿತು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಜಿಲ್ಲೆಯ ಎಲ್ಲ ಶಾಲಾ ಮುಖ್ಯಸ್ಥರಿಗೆ ಮಾಹಿತಿ ನೀಡಿ, ಸೂಕ್ತ ಕ್ರಮವಹಿಸಬೇಕೆಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…