ಭಟ್ಕಳ ತಾಲ್ಲೂಕಿನ ತೆರ್ನಮಕ್ಕಿ ಸಭಾತಿ ಗ್ರಾಮದಲ್ಲಿ ಜೋಕಾಲಿಯಲ್ಲಿ ಆಟವಾಡುತ್ತಿದ್ದ ವೇಳೆ ಕುತ್ತಿಗೆಗೆ ಹಗ್ಗ ಸುತ್ತಿಕೊಂಡು 13 ವರ್ಷದ ಬಾಲಕಿ ದಾರುಣವಾಗಿ ಉಸಿರುಗಟ್ಟಿ ಸಾವನ್ನಪ್ಪಿದ ದುರ್ಘಟನೆ ಗುರುವಾರ (ಜುಲೈ 17) ನಡೆದಿದೆ.
ಮೃತ ಬಾಲಕಿ ಪ್ರಣೀತ ಜಗನ್ನಾಥ ನಾಯ್ಕ ಎಂದು ಗುರುತಿಸಲಾಗಿದ್ದು, ಈಕೆ 7ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು.
ಘಟನೆಯ ದಿನ ಶಾಲೆಗೆ ಮಳೆಯ ಕಾರಣದಿಂದ ರಜೆ ಇದ್ದ ಕಾರಣ, ಪ್ರಣೀತ ತನ್ನ ಸಹೋದರಿಯೊಂದಿಗೆ ಮನೆಯ ಬಳಿ ಜೋಕಾಲಿಯಲ್ಲಿ ಆಟವಾಡುತ್ತಿದ್ದಳು. ಈ ವೇಳೆ ಜೋಕಾಲಿಯ ಹಗ್ಗ ತಲೆ ಮತ್ತು ಕುತ್ತಿಗೆಗೆ ಸುತ್ತಿಕೊಂಡು ತೀವ್ರ ಗಂಭೀರ ಪರಿಸ್ಥಿತಿ ಉಂಟಾಗಿದೆ. ಸಹಾಯಕ್ಕಾಗಿ ಕೂಗುವಷ್ಟರಲ್ಲಿ ಉಸಿರುಗಟ್ಟಿ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.
ಘಟನೆಯ ಸಮಯದಲ್ಲಿ ತಾಯಿ ಕೆಲಸಕ್ಕೆ ಹೋಗಿದ್ದ ಕಾರಣ ತಕ್ಷಣ ಯಾವುದೇ ಸಹಾಯ ಲಭ್ಯವಾಗಿಲ್ಲ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಘಟನೆಯ ಬಗ್ಗೆ ಸ್ಥಳೀಯ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಗ್ರಾಮದ ಜನರಲ್ಲಿ ಈ ದುರ್ಘಟನೆ ಆಘಾತ ಮೂಡಿಸಿದ್ದು, ಎಲ್ಲಾ ಕಡೆ ದುಃಖದ ವಾತಾವರಣ ನಿರ್ಮಾಣವಾಗಿದೆ.
ಹುಬ್ಬಳ್ಳಿಯಲ್ಲಿ ರೀಲ್ಸ್ ಮಾಡುವ ಹುಚ್ಚಾಟದಿಂದ ಸಂಭವಿಸಿದ ಭೀಕರ ಅಪಘಾತದಲ್ಲಿ 15 ವರ್ಷದ ಬಾಲಕ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು…
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…
Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್‌ಗಳ…
ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…
ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…