Categories: CrimeLatest

ಭೀಕರ ರಸ್ತೆ ಅಪಘಾತ: BMW ಕಾರಿನ ಮೇಲೆ ಲಾರಿ ಪಲ್ಟಿ, ಹೈಕೋರ್ಟ್ ವಕೀಲರ ದುರ್ಮರಣ

ಆಂಧ್ರಪ್ರದೇಶದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಹಿರಿಯ ಹೈಕೋರ್ಟ್ ವಕೀಲರು ದಾರುಣವಾಗಿ ಮೃತಪಟ್ಟಿದ್ದಾರೆ. ಸಿಮೆಂಟ್ ತುಂಬಿದ ಟ್ಯಾಂಕರ್ ಲಾರಿ ಚಲಿಸುತ್ತಿದ್ದ BMW ಕಾರಿನ ಮೇಲೆ ಪಲ್ಟಿಯಾಗಿ ಬಿದ್ದ ಪರಿಣಾಮ ಈ ದುರ್ಘಟನೆ ನಡೆದಿದೆ.

ಮೃತರನ್ನು ಬಿ. ಶ್ರೀನಿವಾಸ ರಾವ್ ಎಂದು ಗುರುತಿಸಲಾಗಿದೆ. ಅವರು ಅಮರಾವತಿಯಲ್ಲಿ ನಡೆದ ಬಾರ್ ಕೌನ್ಸಿಲ್ ಚುನಾವಣೆಯಲ್ಲಿ ಭಾಗವಹಿಸಿ, ಬಳಿಕ ತಮ್ಮ BMW ಕಾರಿನಲ್ಲಿ ಹೈದರಾಬಾದ್ ಕಡೆಗೆ ಮರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ಕೀಸರ ಟೋಲ್ ಗೇಟ್ ದಾಟುತ್ತಿದ್ದ ವೇಳೆ, ಅತಿವೇಗದಲ್ಲಿ ಬಂದ ಸಿಮೆಂಟ್ ಟ್ಯಾಂಕರ್ ಲಾರಿ ನಿಯಂತ್ರಣ ತಪ್ಪಿ ಕಾರಿನ ಮೇಲೆ ಬಿದ್ದಿದೆ. ಲಾರಿ ಬಿದ್ದ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಗುರುತಿಸಲು ಕಷ್ಟವಾಗುವಷ್ಟು ಹಾನಿಗೊಂಡಿದೆ.

ಘಟನೆಯ ಮಾಹಿತಿ ತಿಳಿದ ತಕ್ಷಣ ಪೊಲೀಸರು ಹಾಗೂ ಟೋಲ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಜೆಸಿಬಿ ಮತ್ತು ಕ್ರೇನ್ ಸಹಾಯದಿಂದ ಹಲವು ಗಂಟೆಗಳ ಕಾರ್ಯಾಚರಣೆ ನಡೆಸಿ ಲಾರಿಯನ್ನು ತೆರವುಗೊಳಿಸಿ, ವಕೀಲರ ಮೃತದೇಹವನ್ನು ಹೊರತೆಗೆದಿದ್ದಾರೆ.

ಈ ಕುರಿತು ವಿಜಯವಾಡ ಪೊಲೀಸ್ ಆಯುಕ್ತ ಎಸ್.ವಿ. ರಾಜಶೇಖರ ಬಾಬು ಪ್ರತಿಕ್ರಿಯಿಸಿ, “ಟ್ಯಾಂಕರ್‌ನ ಬ್ರೇಕ್ ವೈಫಲ್ಯದಿಂದ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿರಬಹುದು” ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಹೇಳಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದ್ದು, ಲಾರಿಯಲ್ಲಿ ಅತಿಯಾದ ಭಾರವಿತ್ತೇ ಅಥವಾ ಚಾಲಕನ ನಿರ್ಲಕ್ಷ್ಯವೇ ಎಂಬುದರ ಬಗ್ಗೆ ತನಿಖೆ ಮುಂದುವರಿದಿದೆ.

ಅಪಘಾತದ ಪರಿಣಾಮವಾಗಿ ಹೈದರಾಬಾದ್–ವಿಜಯವಾಡ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ದಟ್ಟಣೆ ಉಂಟಾಗಿತ್ತು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಕಂಚಿಕಚರ್ಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಭ್ರಷ್ಟರ ಬೇಟೆ

Recent Posts

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

3 hours ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

8 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

23 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

1 day ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago