ಕೊಡಗು: ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವ ಯೋಧನೊಬ್ಬ ದುರ್ಮರಣಕ್ಕೀಡಾಗಿರುವ ದುರಂತ ಘಟನೆ ನಡೆದಿದೆ. ರಜೆ ನಿಮಿತ್ತ ತಾಯ್ನಾಡಿಗೆ ಬಂದು, ಕುಟುಂಬದೊಂದಿಗೆ ಸಮಯ ಕಳೆಯುತ್ತಿದ್ದ ಯೋಧ, ವಿವಾಹ ಸಮಾರಂಭವೊಂದರ ಬಳಿಕ ಮನೆಗೆ ಮರಳುವ ವೇಳೆ ಈ ದುರ್ಘಟನೆ ಸಂಭವಿಸಿದೆ.
ಪೊನ್ನಂಪೇಟೆ ತಾಲ್ಲೂಕಿನ ಮಾಯಾಮುಡಿ ಗ್ರಾಮದಲ್ಲಿ ಸೋಮವಾರ ರಾತ್ರಿ ಘಟನೆ ನಡೆದಿದೆ. ಯೋಧ ಬಿಪಿನ್ ಭೀಮಯ್ಯ ಅವರು ಚಾಲನೆ ಮಾಡುತ್ತಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣ ನಾಶವಾಗಿದ್ದು, ಬಿಪಿನ್ ಭೀಕರವಾಗಿ ಗಾಯಗೊಂಡರು.
ತಕ್ಷಣ ಸ್ಥಳೀಯರು ಸಹಾಯಕ್ಕೆ ಧಾವಿಸಿ ಬಿಪಿನ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಯತ್ನಿಸಿದರೂ, ಮಧ್ಯೆಯಲ್ಲಿ ಅವರು ಪ್ರಾಣ ಬಿಟ್ಟರು.
ಈ ಕುರಿತು ಗೋಣಿಕೊಪ್ಪಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪ್ರಕರಣದ ತನಿಖೆ ಮುಂದುವರಿಸಿದ್ದಾರೆ. ಯೋಧನ ದುರ್ಮರಣದಿಂದ ಕುಟುಂಬ ಹಾಗೂ ಗ್ರಾಮದಲ್ಲಿ ಶೋಕದ ಛಾಯೆ ನೆಲೆಯಾಗಿದೆ.
ಸ್ಥಳೀಯ ಅಧಿಕಾರಿಗಳು ಹಾಗೂ ಸೇನಾ ಇಲಾಖೆಯವರು ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಸಂಪರ್ಕದಲ್ಲಿದ್ದಾರೆ.
ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…
ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…
ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…
ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…
ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…
ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…