ಗೌರಿಬಿದನೂರು: ನಗರದ ಅಂಬೇಡ್ಕರ್ ವೃತ್ತದ ಸಮೀಪ ಇಂದು ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 8 ವರ್ಷದ ಬಾಲಕನೊಬ್ಬ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಮೃತ ಬಾಲಕನನ್ನು ಆಜಾದ್ ನಗರದ ಶರೀಫ್ ಹಾಗೂ ರೋಹಿಣಿ ದಂಪತಿಯ ಪುತ್ರ ರಯಾನ್ ಎಂದು ಗುರುತಿಸಲಾಗಿದೆ.
ಬೆಂಗಳೂರು ಸರ್ಕಲ್‌ನ ಹಳೆಯ ಆಸ್ಪತ್ರೆ ಮುಂಭಾಗದಲ್ಲಿ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್‌ನಲ್ಲಿದ್ದ ಬಾಲಕ ಕೆಳಗೆ ಬಿದ್ದಿದ್ದು, ಇದೇ ವೇಳೆ ಕಾರಿನ ಚಕ್ರ ಬಾಲಕನ ಮೇಲೆ ಹರಿದ ಪರಿಣಾಮ ಗಂಭೀರವಾಗಿ ಗಾಯಗೊಂಡ ರಯಾನ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ರಯಾನ್ ಕುಟುಂಬವು ಗೌರಿಬಿದನೂರು ತಾಲೂಕಿನ ಹೊಸಪೇಟೆ ನಿವಾಸಿಗಳಾಗಿದ್ದು, ಬಾಲಕನ ಸಾವಿನ ಸುದ್ದಿ ಕುಟುಂಬಸ್ಥರು ಹಾಗೂ ಸಂಬಂಧಿಕರಲ್ಲಿ ತೀವ್ರ ದುಃಖಕ್ಕೆ ಕಾರಣವಾಗಿದೆ. ಘಟನೆ ನಡೆದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಅಪಘಾತದ ಸುದ್ದಿ ತಿಳಿದು ತಾಲೂಕಿನ ಮಾಜಿ ಕೃಷಿ ಸಚಿವ ಎನ್.ಎಚ್. ಶಿವಶಂಕರ್ ರೆಡ್ಡಿ ಅವರು ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಭೇಟಿ ನೀಡಿ ಮೃತ ಬಾಲಕನ ಅಂತಿಮ ದರ್ಶನ ಪಡೆದರು. ಬಳಿಕ ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವನ ಹೇಳಿ, ದುಃಖದ ಸಂದರ್ಭದಲ್ಲಿ ಧೈರ್ಯ ತುಂಬಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಗರದಲ್ಲಿ ಇಂತಹ ಅಪಘಾತಗಳು ಮರುಕಳಿಸದಂತೆ ಪೊಲೀಸ್ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ನಗರದ ಪ್ರಮುಖ ವೃತ್ತಗಳು, ಜನನಿಬಿಡ ಪ್ರದೇಶಗಳು ಹಾಗೂ ಅಪಘಾತ ಸಂಭವಿಸುವ ಸಾಧ್ಯತೆ ಇರುವ ಸೂಕ್ಷ್ಮ ಸ್ಥಳಗಳಲ್ಲಿ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಅಗತ್ಯವಿದೆ. ವಾಹನಗಳ ವೇಗ ನಿಯಂತ್ರಣ, ಸೂಕ್ತ ಎಚ್ಚರಿಕೆ ಫಲಕಗಳ ಅಳವಡಿಕೆ ಹಾಗೂ ಪ್ರಮುಖ ಸ್ಥಳಗಳಲ್ಲಿ ನಿರಂತರ ಪೊಲೀಸ್ ನಿಗಾ ವ್ಯವಸ್ಥೆ ಕಲ್ಪಿಸಬೇಕು ಎಂದು ಅವರು ಒತ್ತಾಯಿಸಿದರು.
“ಅಪಘಾತ ಸಂಭವಿಸಿದ ಬಳಿಕ ಕ್ರಮ ಕೈಗೊಳ್ಳುವುದಕ್ಕಿಂತ, ಮತ್ತೊಂದು ಅಮಾಯಕ ಜೀವ ಬಲಿಯಾಗುವ ಮುನ್ನವೇ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವುದು ಅತ್ಯಂತ ಮುಖ್ಯ. ಸಾರ್ವಜನಿಕರ ಜೀವ ರಕ್ಷಣೆ ಪೊಲೀಸ್ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಮೊದಲ ಆದ್ಯತೆಯಾಗಬೇಕು” ಎಂದು ಎನ್.ಎಚ್. ಶಿವಶಂಕರ್ ರೆಡ್ಡಿ ಹೇಳಿದರು.
ಈ ಸಂಬಂಧ ಪೊಲೀಸರು ಘಟನೆ ಕುರಿತು ಪರಿಶೀಲನೆ ನಡೆಸುತ್ತಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬುದು ತನಿಖೆಯ ಬಳಿಕ ತಿಳಿದುಬರಬೇಕಿದೆ.
ವರದಿ: ಅವಿನಾಶ್
ಕಳೆದ ವರ್ಷದ 265 ರೂ. ಬೆಲೆಯ ಶೂಗಳು ಇನ್ನೂ ಬಾಳಿಕೆ; ಪ್ರಸಕ್ತ ಸಾಲಿನಲ್ಲಿ ವಿತರಿಸಿದ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ…
ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ…
ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ…
ಪಾವಗಡ: ಕರ್ನಾಟಕ ಮತ್ತು ಆಂಧ್ರಪ್ರದೇಶದ ವಿವಿಧ ದೇವಸ್ಥಾನಗಳನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಆಂಧ್ರಪ್ರದೇಶ ಪೊಲೀಸರು ಬಂಧಿಸಿದ್ದು, ಅವರಿಂದ 21…
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳಿಗೆ 2026–27ನೇ ಸಾಲಿನಲ್ಲಿ ಸರ್ಕಾರದಿಂದ ವಿತರಿಸಲಾಗಿರುವ ಶೂ ಮತ್ತು ಸ್ಯಾಂಡಲ್‌ಗಳ…
ಬಂಗಾರಪೇಟೆ: ಗಣೇಶ ಮೂರ್ತಿ ವಿಸರ್ಜನೆಗೆ ಸಿದ್ಧತೆ ನಡೆಸುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ 18 ವರ್ಷದ ಯುವಕನೊಬ್ಬ ಮೃತಪಟ್ಟಿರುವ ದಾರುಣ ಘಟನೆ…