ಬೆಂಗಳೂರು, ಜೂನ್ 24: ನಗರದಲ್ಲಿ ಭಾನುವಾರ ಸಂಜೆ ಸಂಭವಿಸಿದ ಭೀಕರ ಘಟನೆ ಒಂದು ಯುವತಿಯ ಬದುಕಿಗೆ ಮುಕ್ತಾಯ ತಂದಿದೆ. ಚೂಡಸಂದ್ರದ ನಿರ್ಮಾಣ ಹಂತದಲ್ಲಿದ್ದ ಕಟ್ಟಡದಿಂದ ಬಿದ್ದು 23 ವರ್ಷದ ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತಳನ್ನು ನಂದಿನಿ (23) ಎಂದು ಗುರುತಿಸಲಾಗಿದ್ದು, ಆಂಧ್ರಪ್ರದೇಶ ಮೂಲದವರಾಗಿದ್ದಾರೆ. ನಂದಿನಿ ತನ್ನ ಸ್ನೇಹಿತರೊಂದಿಗೆ ಚೂಡಸಂದ್ರದಲ್ಲಿರುವ ಕಟ್ಟಡವೊಂದರ ಮೇಲಕ್ಕೆ ಭೇಟಿ ನೀಡಿದ್ದ ವೇಳೆ ಘಟನೆ ಸಂಭವಿಸಿದೆ. ಸಂಜೆ ಸುಮಾರು 5 ಗಂಟೆಯ ಸುಮಾರಿಗೆ ಆಯತಪ್ಪಿ ಕಟ್ಟಡದಿಂದ ಕೆಳಗೆ ಬಿದ್ದಿದ್ದಾರೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.
ಘಟನೆ ನಡೆದ ತಕ್ಷಣವೇ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದರು. ಗಂಭೀರವಾಗಿ ಗಾಯಗೊಂಡಿದ್ದ ನಂದಿನಿಯನ್ನು ತಕ್ಷಣವೇ ಆಸ್ಪತ್ರೆಗೆ ಸೇರಿಸಲಾಯಿತಾದರೂ, ತೀವ್ರ ರಕ್ತಸ್ರಾವದಿಂದಾಗಿ ಜೀವ ಉಳಿಸಿಕೊಳ್ಳಲಾಗಲಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸೂಕ್ತ ತನಿಖೆ ಕೈಗೊಂಡಿದ್ದಾರೆ. ದುರ್ಘಟನೆಯ ಸಂಪೂರ್ಣ ಮಾಹಿತಿ ಗೊತ್ತಾಗಬೇಕಾದರೆ ಸ್ನೇಹಿತರು ಹಾಗೂ ಸ್ಥಳದ ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆಯೂ ಮಾಡಲಾಗುತ್ತಿದೆ.
ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…
ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…
ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…
ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…
ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…
ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…