Categories: CrimeLatest

ಧಾರವಾಡ ಅರಣ್ಯದಲ್ಲಿ ದಾರುಣ ಘಟನೆ: ಕಾರಿನಲ್ಲೇ ಸುಟ್ಟ ಸ್ಥಿತಿಯಲ್ಲಿ ಮಾಜಿ ಶಾಸಕನ ಪುತ್ರ

ಧಾರವಾಡ ಜಿಲ್ಲೆಯ ರಾಮಾಪುರ ಅರಣ್ಯ ವ್ಯಾಪ್ತಿಯ ನಿರ್ಜನ ಪ್ರದೇಶದಲ್ಲಿ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಕ್ಷೇತ್ರದ ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ (53) ಅವರ ಶವವು ಕಾರಿನೊಳಗೆ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಧಾರವಾಡ ತಾಲೂಕಿನ ರಾಮಾಪುರ ಗ್ರಾಮದ ರೈಲ್ವೆ ಹಳಿ ಸಮೀಪದ ದಟ್ಟ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಕಾರಿಗೆ ಉದ್ದೇಶಪೂರ್ವಕವಾಗಿ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಕಾರಿನೊಳಗಿದ್ದ ರಾಜು ಬೋಳಶೆಟ್ಟಿ ಅವರ ದೇಹವು ಗುರುತಿಸಲು ಅಸಾಧ್ಯವಾಗುವಷ್ಟು ಸುಟ್ಟು ಕರಕಲಾಗಿರುವುದು ಪ್ರಕರಣದ ಗಂಭೀರತೆಯನ್ನು ಹೆಚ್ಚಿಸಿದೆ.

ಈ ಘಟನೆ ಜಿಲ್ಲೆಯಲ್ಲಿ ಭಾರೀ ಸಂಚಲನ ಮೂಡಿಸಿದ್ದು, ಇದು ಪೂರ್ವನಿಯೋಜಿತ ಕೊಲೆ ಆಗಿರಬಹುದೆಂಬ ಅನುಮಾನ ಬಲವಾಗುತ್ತಿದೆ. ಸ್ಥಳಕ್ಕೆ ಭೇಟಿ ನೀಡಿದ ಧಾರವಾಡ ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ದುಷ್ಕರ್ಮಿಗಳು ನಿರ್ಜನ ಪ್ರದೇಶವನ್ನು ಆಯ್ಕೆ ಮಾಡಿಕೊಂಡು ಕೃತ್ಯ ಎಸಗಿ ಪರಾರಿಯಾಗಿರುವ ಸಾಧ್ಯತೆ ಇದೆ. ಪ್ರಕರಣದ ಸತ್ಯಾಂಶ ತಿಳಿಯಲು ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

1 day ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

2 days ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

2 days ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

2 days ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

3 days ago