Categories: CrimeLatest

ತಡರಾತ್ರಿ ಭೀಕರ ಅಪಘಾತ: ಸಹ ಕಲಾವಿದ ಹರೀಶ್ ಸ್ಥಳದಲ್ಲೇ ಸಾವು

ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಆನೆಕಾಡು ಅರಣ್ಯ ಪ್ರದೇಶದ ಬಳಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್ (40) ದಾರುಣವಾಗಿ ಮೃತಪಟ್ಟಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಆನೆಕಾಡು ಸಮೀಪ ಈ ದುರ್ಘಟನೆ ನಡೆದಿದೆ. ನಿನ್ನೆ ಕೆಲಸ ಮುಗಿಸಿಕೊಂಡು ಕುಶಾಲನಗರದಿಂದ ತಮ್ಮ ಸ್ವಗ್ರಾಮ ಹೊಸಕೋಟೆಗೆ ಕಾರಿನಲ್ಲಿ ತೆರಳುತ್ತಿದ್ದ ಹರೀಶ್ ಅವರು, ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಟ್ಯಾಂಕರ್‌ಗೆ ವೇಗವಾಗಿ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಹರೀಶ್ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತ ಹರೀಶ್ ಅವರು ಹಲವು ಕನ್ನಡ ಸಿನಿಮಾಗಳಲ್ಲಿ ಸಹ ಕಲಾವಿದನಾಗಿ ಅಭಿನಯಿಸಿದ್ದು, ಜೊತೆಗೆ ಹಲವು ಜನಪ್ರಿಯ ಕಿರುತೆರೆ ಧಾರಾವಾಹಿಗಳಲ್ಲಿಯೂ ಕಾಣಿಸಿಕೊಂಡು ತಮ್ಮದೇ ಆದ ಗುರುತು ಮೂಡಿಸಿದ್ದರು.

ಅಪಘಾತದ ಮಾಹಿತಿ ತಿಳಿದ ತಕ್ಷಣ ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಮುಂದುವರೆಸಲಾಗಿದೆ.

ಭ್ರಷ್ಟರ ಬೇಟೆ

Recent Posts

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

2 minutes ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

5 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

20 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

1 day ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago