Categories: CrimeLatest

ಬೆಂಗಳೂರಿನಲ್ಲಿ ಭೀಕರ ಹತ್ಯಾಕಾಂಡ: ಪತ್ನಿ ಸೇರಿ ಒಂದೇ ಕುಟುಂಬದ 7 ಮಂದಿಯನ್ನು ಕೊಂದ ಪತಿ!

ಕೌಟುಂಬಿಕ ಕಲಹಕ್ಕೆ ಏಳು ಜೀವಗಳ ಬಲಿ; ಕ್ಯಾಬ್ ಚಾಲಕ ಇಂದುಶೇಖರ್ ಬಂಧನ, ವಿಚಾರಣೆಯಲ್ಲಿ ಬಯಲಾಯ್ತು ನರಮೇಧದ ರಹಸ್ಯ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸುವ ಭೀಕರ ಸಾಮೂಹಿಕ ಹತ್ಯೆ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದಿದೆ. ಕೌಟುಂಬಿಕ ಕಲಹ ಹಾಗೂ ಪತ್ನಿಯ ಮೇಲಿನ ದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿ ಸೇರಿದಂತೆ ಒಂದೇ ಕುಟುಂಬದ ಏಳು ಮಂದಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ರಾಜಾಜಿನಗರದ ಭಾಷ್ಯಂ ಸರ್ಕಲ್ ಸಮೀಪ ನಡೆದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಯಾಬ್ ಚಾಲಕ ಇಂದುಶೇಖರ್ ಎಂಬಾತನನ್ನು ರಾಜಾಜಿನಗರ ಪೊಲೀಸರು ಬಂಧಿಸಿದ್ದು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಹತ್ಯೆಯಾದವರನ್ನು ಆರೋಪಿ ಪತ್ನಿ ಸುನಿತಾ, ಅತ್ತೆ ರೂಪವತಿ, ಬಾಮೈದರಾದ ಶಿವಕುಮಾರ್ ಮತ್ತು ಶಂಕರ್, ಸೊಸೆಯಂದಿರಾದ ದಿವ್ಯ ಹಾಗೂ ನಳಿನಿ ಮತ್ತು ಏಳು ವರ್ಷದ ಬಾಲಕ ಪುನೀತ್ ಎಂದು ಗುರುತಿಸಲಾಗಿದೆ. ಪುನೀತ್, ಶಿವಕುಮಾರ್ ಅವರ ಪುತ್ರನಾಗಿದ್ದಾನೆ.

20 ವರ್ಷಗಳ ದಾಂಪತ್ಯದಲ್ಲಿ ಬಿರುಕು: ಕುಟುಂಬದ ಮೇಲೆಯೇ ದ್ವೇಷ

ಸುಮಾರು 20 ವರ್ಷಗಳ ಹಿಂದೆ ಸುನಿತಾಳನ್ನು ವಿವಾಹವಾಗಿದ್ದ ಇಂದುಶೇಖರ್, ದಂಪತಿ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಪ್ರತಿಬಾರಿಯೂ ಸುನಿತಾಳ ತವರು ಮನೆಯವರು ಆಕೆಯ ಪರವಾಗಿ ನಿಂತು ಸಮಸ್ಯೆ ಬಗೆಹರಿಸಲು ಪ್ರಯತ್ನಿಸುತ್ತಿದ್ದರು. ಇದರಿಂದ ಆಕ್ರೋಶಗೊಂಡಿದ್ದ ಇಂದುಶೇಖರ್, ಪತ್ನಿಯ ತವರು ಮನೆಯವರ ಮೇಲೆಯೇ ದ್ವೇಷ ಬೆಳೆಸಿಕೊಂಡಿದ್ದ ಎನ್ನಲಾಗಿದೆ.

ಈ ದ್ವೇಷದ ಹಿನ್ನೆಲೆಯಲ್ಲಿ ಇಡೀ ಕುಟುಂಬವನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದ ಆರೋಪಿ, ಎರಡು ದಿನಗಳ ಅವಧಿಯಲ್ಲಿ ಕುಟುಂಬದ ಸದಸ್ಯರನ್ನು ಪಾರ್ಟಿಯ ನೆಪದಲ್ಲಿ ಮನೆಗೆ ಕರೆಸಿಕೊಂಡಿದ್ದಾನೆ. ಬಳಿಕ ಒಬ್ಬೊಬ್ಬರನ್ನಾಗಿ ಒರಳಕಲ್ಲಿನಿಂದ ತಲೆಗೆ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ನಳಿನಿ ನಾಪತ್ತೆ ಪ್ರಕರಣದಿಂದ ಬಯಲಾದ ನರಮೇಧ

ಈ ಭೀಕರ ಪ್ರಕರಣ ಬೆಳಕಿಗೆ ಬರಲು ನಳಿನಿ ನಾಪತ್ತೆಯಾಗಿರುವುದೇ ಪ್ರಮುಖ ಕಾರಣವಾಗಿದೆ. ನಳಿನಿ ಕಾಣೆಯಾಗಿರುವ ಬಗ್ಗೆ ಆಕೆಯ ತಾಯಿ ಶ್ರೀರಾಮಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣದ ತನಿಖೆ ಆರಂಭಿಸಿದ ಪೊಲೀಸರು ವಿವಿಧ ಆಯಾಮಗಳಲ್ಲಿ ಪರಿಶೀಲನೆ ನಡೆಸಿದಾಗ ಇಂದುಶೇಖರ್‌ನ ಚಲನವಲನಗಳ ಮೇಲೆ ಅನುಮಾನ ವ್ಯಕ್ತವಾಗಿದೆ.

ಬಳಿಕ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಒಂದೊಂದೇ ಹತ್ಯೆಗಳ ಭಯಾನಕ ಸಂಗತಿಗಳು ಹೊರಬಂದಿವೆ. ಏಳು ಮಂದಿಯನ್ನು ಹತ್ಯೆ ಮಾಡಿ ಮೃತದೇಹಗಳನ್ನು ವಿಲೇವಾರಿ ಮಾಡಿರುವುದಾಗಿ ಆರೋಪಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ.

ಪೊಲೀಸ್ ತನಿಖೆ ಚುರುಕು

ಒಂದೇ ಕುಟುಂಬದ ಏಳು ಮಂದಿಯ ಹತ್ಯೆ ಪ್ರಕರಣ ಬೆಂಗಳೂರಿನಲ್ಲಿ ತೀವ್ರ ಆತಂಕ ಮೂಡಿಸಿದೆ. ಕೌಟುಂಬಿಕ ಕಲಹ ಹೇಗೆ ಭೀಕರ ಸಾಮೂಹಿಕ ಹತ್ಯೆಗೆ ಕಾರಣವಾಯಿತು ಎಂಬುದು ಸಾರ್ವಜನಿಕರನ್ನು ಬೆಚ್ಚಿಬೀಳಿಸಿದೆ. ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು ಹತ್ಯೆಗಳ ಹಿಂದಿನ ಸಂಪೂರ್ಣ ಸಂಚು, ಮೃತದೇಹಗಳ ವಿಲೇವಾರಿ ಹಾಗೂ ಘಟನೆಗೆ ಸಂಬಂಧಿಸಿದ ಇತರ ಸಂಗತಿಗಳ ಕುರಿತು ತನಿಖೆ ಮುಂದುವರಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಮಾದನಬಾವಿ ಗೋಶಾಲೆಯ ದುಸ್ಥಿತಿಗೆ ಆಕ್ರೋಶ: ಗೋವುಗಳಿಗೆ ಮೇವು, ನೀರು ಹಾಗೂ ಚಿಕಿತ್ಸೆ ಒದಗಿಸಲು ಆಗ್ರಹ

ಧಾರವಾಡ: ತಾಲೂಕಿನ ಮಾದನಬಾವಿ ಗ್ರಾಮದ ಗೋಶಾಲೆಯಲ್ಲಿ ಗೋವುಗಳ ನಿರ್ವಹಣೆ ಸಮರ್ಪಕವಾಗಿ ನಡೆಯುತ್ತಿಲ್ಲ ಎಂಬ ಆರೋಪ ಕೇಳಿಬಂದಿದ್ದು, ಗೋಶಾಲೆಯ ಅವ್ಯವಸ್ಥೆ ಸರಿಪಡಿಸಿ…

5 hours ago

ಮುಂಡಗೋಡದ ರಾಜಲಕ್ಷ್ಮಿ ಜ್ಯುವೆಲ್ಲರ್ಸ್‌ನಲ್ಲಿ ಬೆಳ್ಳಿ ಆಭರಣ ಕಳವು ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಮಹಿಳೆಯರ ಬಂಧನ

ಮುಂಡಗೋಡ: ಪಟ್ಟಣದ ಬಸ್ ನಿಲ್ದಾಣದ ಎದುರಿನ ರಾಜಲಕ್ಷ್ಮಿ ಜ್ಯುವೆಲ್ಲರ್ಸ್ ಅಂಗಡಿಯಲ್ಲಿ ನಡೆದಿದ್ದ ಬೆಳ್ಳಿ ಆಭರಣ ಕಳವು ಪ್ರಕರಣವನ್ನು ಮುಂಡಗೋಡ ಪೊಲೀಸರು…

5 hours ago

ಫೋನ್‌ಪೇ ಹಣ ಪಾವತಿ ನಕಲಿ ಸಂದೇಶ ತೋರಿಸಿ ಮೊಬೈಲ್ ವಂಚನೆ: ಬೆಂಗಳೂರಿನಲ್ಲಿ ಆರೋಪಿಯ ಬಂಧನ

ಕುಮಟಾ: ಮೊಬೈಲ್ ಖರೀದಿಸಿ ಫೋನ್‌ಪೇ ಮೂಲಕ ಹಣ ಪಾವತಿಸಿರುವುದಾಗಿ ನಕಲಿ ಸಂದೇಶ ತೋರಿಸಿ ಅಂಗಡಿ ಮಾಲೀಕರಿಗೆ ವಂಚಿಸಿ ಪರಾರಿಯಾಗಿದ್ದ ಆರೋಪಿಯನ್ನು…

5 hours ago

ಮಾರ್ಚ್ ಅಂತ್ಯದೊಳಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಪೂರ್ಣಗೊಳಿಸಿ: ಸಿಇಒ ಡಾ. ದಿಲೀಷ್ ಶಶಿ ಕಟ್ಟುನಿಟ್ಟಿನ ಸೂಚನೆ

ಮುಂಡಗೋಡ: ತಾಲೂಕಿನ ಬಾಚಣಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅನುಷ್ಠಾನಗೊಳ್ಳುತ್ತಿರುವ ಬಹುಗ್ರಾಮ ಕುಡಿಯುವ ನೀರು ಸರಬರಾಜು (MVS) ಯೋಜನೆಯ ಕಾಮಗಾರಿಯನ್ನು ಉತ್ತರ…

5 hours ago

ಟೈಗರ್ ಶ್ರಾಫ್‌ಗೆ ಸಂಬಂಧಿಸಿದ ಗುಂಡಿನ ದಾಳಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹರಿಯಾಣದ 22 ವರ್ಷದ ಯುವತಿ ಅರೆಸ್ಟ್!

ಪ್ರಕರಣದಲ್ಲಿ ಬಂಧಿತರ ಸಂಖ್ಯೆ 13ಕ್ಕೆ ಏರಿಕೆ; ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಕೈವಾಡದ ಶಂಕೆ ಮುಂಬೈ: ಬಾಲಿವುಡ್ ನಟ ಟೈಗರ್ ಶ್ರಾಫ್‌ಗೆ…

2 days ago

ಗೌರಿಬಿದನೂರಿನ ಪ್ರಶಾಂತ್ ನಗರದಲ್ಲಿ ಸರಣಿ ಕಳ್ಳತನ: ವ್ಯಾಪಾರಸ್ಥರಲ್ಲಿ ಆತಂಕ!

ಅಂಗಡಿಗಳು, ನಂದಿನಿ ಬೂತ್‌, ಪಾರ್ಲರ್‌ಗಳೇ ಕಳ್ಳರ ಟಾರ್ಗೆಟ್ – ರಾತ್ರಿ ಗಸ್ತು ಹೆಚ್ಚಿಸಲು ಸ್ಥಳೀಯರ ಆಗ್ರಹ ಗೌರಿಬಿದನೂರು: ನಗರದ ಪ್ರಶಾಂತ್…

2 days ago