Categories: CrimeLatest

ಭೀಮಾತೀರದಲ್ಲಿ ಭೀಕರ ಹತ್ಯಾಕಾಂಡ: 25 ಎಕರೆ ಜಮೀನು ಜಗಳಕ್ಕೆ ಒಂದೇ ಕುಟುಂಬದ 6 ಮಂದಿಯ ಹತ್ಯೆ

ಭೀಮಾತೀರ ಪ್ರದೇಶ ಮತ್ತೆ ರಕ್ತದ ಮಡುವಾಗಿ ಮಾರ್ಪಟ್ಟಿದೆ. ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ನಡೆದ ಭೀಕರ ಹತ್ಯಾಕಾಂಡ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಜಮೀನು ವಿವಾದದ ಹಿನ್ನೆಲೆ ಒಂದೇ ಕುಟುಂಬದ ಆರು ಮಂದಿಯನ್ನು ಅಮಾನುಷವಾಗಿ ಕೊಲೆ ಮಾಡಲಾಗಿದೆ.

ಸಂಜೆ ವೇಳೆಯಲ್ಲಿ ನಡೆದ ಈ ದಾಳಿಯಲ್ಲಿ ಹಂತಕರು ಮೊದಲು ಗುಂಡಿನ ದಾಳಿ ನಡೆಸಿ, ಬಳಿಕ ಲಾಂಗು ಮತ್ತು ಮಚ್ಚುಗಳಿಂದ ಮನಬಂದಂತೆ ಹಲ್ಲೆ ನಡೆಸಿದ್ದಾರೆ. ಘಟನಾ ಸ್ಥಳದಲ್ಲಿ ರಕ್ತದೋಕುಳಿ ಹರಿದಿದ್ದು, ಮೃತದೇಹಗಳ ಸ್ಥಿತಿ ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಕೆಲವರ ದೇಹಗಳು ಛಿದ್ರಗೊಂಡಿದ್ದು, ಇನ್ನೂ ಕೆಲವರ ಕೈಕಾಲುಗಳು ಕತ್ತರಿಸಲ್ಪಟ್ಟಿರುವ ಸ್ಥಿತಿಯಲ್ಲಿ ಪತ್ತೆಯಾಗಿವೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ನಿರಾಳೆ ಮತ್ತು ಗೊಳಗಿ ಕುಟುಂಬಗಳ ನಡುವೆ ಸುಮಾರು 25 ಎಕರೆ ಜಮೀನಿನ ವಿಚಾರವಾಗಿ ಹಲವು ವರ್ಷಗಳಿಂದ ತೀವ್ರ ವೈಷಮ್ಯ ನಡೆಯುತ್ತಿತ್ತು. ವಿವಾದಿತ ಜಮೀನಿನಲ್ಲಿ ಕೃಷಿ ಕಾರ್ಯ ಆರಂಭಿಸಲು ನಿರಾಳೆ ಕುಟುಂಬದವರು ತೆರಳಿದ್ದ ವೇಳೆ ದಾಳಿ ನಡೆದಿದೆ ಎನ್ನಲಾಗಿದೆ.

ಪಟ್ಟಣ ಪಂಚಾಯ್ತಿ ಸದಸ್ಯ ಚೇತನ ನಿರಾಳೆ ಕುಟುಂಬದವರ ಮೇಲೆ ಅಪ್ಪುಗೌಡ ಮತ್ತು ಆತನ ಸಹಚರರು ಪೂರ್ವಯೋಜಿತವಾಗಿ ದಾಳಿ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಬಂದೂಕು, ಲಾಂಗು ಹಾಗೂ ಮಚ್ಚುಗಳನ್ನು ಹಿಡಿದು ಬಂದಿದ್ದ ತಂಡ ಹೊಲದಲ್ಲಿದ್ದವರನ್ನು ಅಟ್ಟಾಡಿಸಿಕೊಂಡು ಹತ್ಯೆ ಮಾಡಿದೆ. ಈ ವೇಳೆ ಕೂಲಿ ಕೆಲಸಕ್ಕೆ ಬಂದಿದ್ದ ಶಬ್ಬೀರ್ ಎಂಬಾತ ಕೂಡ ದಾಳಿಯಲ್ಲಿ ಸಾವನ್ನಪ್ಪಿದ್ದಾನೆ.

ಮೊದಲು ಗುಂಡಿನ ದಾಳಿ ನಡೆಸಿ, ಬಳಿಕ ನೆಲಕ್ಕುರುಳಿದವರ ಮೇಲೆ ಮಚ್ಚುಗಳಿಂದ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಒಂದೇ ಜಾಗದಲ್ಲಿ ಆರು ಮಂದಿಯ ಮೃತದೇಹಗಳು ಪತ್ತೆಯಾಗಿದ್ದು, ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಆರೋಪಿ ಅಪ್ಪುಗೌಡ ಭೀಮಾತೀರ ಪ್ರದೇಶದ ಹಳೆಯ ವೈಷಮ್ಯಗಳ ಹಿನ್ನೆಲೆಯಲ್ಲೇ ಈ ಕೃತ್ಯ ಎಸಗಿದ್ದಾನೆ ಎನ್ನಲಾಗುತ್ತಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದು, ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಬಾಗಲಕೋಟೆಯಲ್ಲಿ ರಾತ್ರಿ 11 ಗಂಟೆಯ ಬಳಿಕ ನಿಯಮ ಉಲ್ಲಂಘಿಸಿ ಮರಳು ಸಾಗಾಟ: ನಂಬರ್ ಪ್ಲೇಟ್ ಇಲ್ಲದ ಟಿಪ್ಪರ್‌ಗಳ ಸಂಚಾರ, ಅಧಿಕಾರಿಗಳು ಮೌನ!?

ಬಾಗಲಕೋಟೆ: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆಯೇ ಎಂಬ…

1 day ago

ಪಾಸ್‌ಪೋರ್ಟ್ ಶುಲ್ಕ ಹೆಚ್ಚಳ: ಮಕ್ಕಳ ಮಾನ್ಯತಾ ಅವಧಿಯಲ್ಲೂ ಬದಲಾವಣೆ, ಹೊಸ ನಿಯಮ ಜಾರಿ

ನವದೆಹಲಿ: ಪಾಸ್‌ಪೋರ್ಟ್ ಅರ್ಜಿ ಶುಲ್ಕವನ್ನು ಹೆಚ್ಚಿಸುವುದರ ಜೊತೆಗೆ ಮಕ್ಕಳ ಪಾಸ್‌ಪೋರ್ಟ್‌ನ ಮಾನ್ಯತಾ ಅವಧಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗಳನ್ನು…

1 day ago

ಗೌರಿಬಿದನೂರಿನಲ್ಲಿ ಅಪಘಾತಕ್ಕೆ ನಾಲ್ಕು ವರ್ಷದ ಬಾಲಕಿ ಬಲಿ

ತಾಯಿ-ತಂದೆಯಿಲ್ಲದ ವೇದಳನ್ನು ಕಳೆದುಕೊಂಡ ಅಜ್ಜಿ-ತಾತನ ಆಕ್ರಂದನ ಗೌರಿಬಿದನೂರು: ನಗರದಲ್ಲಿ ಅಪಘಾತಗಳ ಸರಣಿ ಮುಂದುವರಿದಿರುವ ನಡುವೆಯೇ ಮತ್ತೊಂದು ಮನಕಲಕುವ ರಸ್ತೆ ದುರಂತ…

5 days ago

ಸರ್ಕಾರಿ ಶಾಲಾ ಮಕ್ಕಳಿಗೆ ಅನ್ಯಾಯ: ನೂರು ರೂಪಾಯಿಗೂ ಬೆಲೆಬಾಳದ ಶೂಗಳನ್ನು ವಿತರಿಸಿರುವ ಸರ್ಕಾರ, ಒಂದೇ ತಿಂಗಳಿಗೆ ಹಾಳದ ಶೂಗಳು..!

ಕಳೆದ ವರ್ಷದ 265 ರೂ. ಬೆಲೆಯ ಶೂಗಳು ಇನ್ನೂ ಬಾಳಿಕೆ; ಪ್ರಸಕ್ತ ಸಾಲಿನಲ್ಲಿ ವಿತರಿಸಿದ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ…

5 days ago

50 ಲಕ್ಷ ರೂ. ಲಂಚ ಸ್ವೀಕರಿಸುವಾಗ ಧಾರವಾಡ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ: ಖರಾಬು ಜಮೀನು ದಾಖಲೆ ತಿದ್ದುಪಡಿಗೆ ಬೇಡಿಕೆ..!

ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ…

5 days ago

ಪಂಚಾಯಿತಿ ಕಚೇರಿಯಲ್ಲೇ ಆಸ್ತಿ ವಿವಾದಕ್ಕೆ ರಕ್ತದೊಕುಳಿ: ಅಣ್ಣ–ತಮ್ಮಂದಿರ ಜಗಳದಲ್ಲಿ ತಂದೆ–ಮಗಳು ಕೊಲೆ, ಮತ್ತೊಬ್ಬನಿಗೆ ಗಂಭೀರ ಗಾಯ

ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ…

5 days ago