ಚಿಕ್ಕಬಳ್ಳಾಪುರದ ಬಿಬಿ ರಸ್ತೆಯ ಎಸ್‌ಬಿಐ ಬ್ಯಾಂಕ್ ಬಳಿಯಲ್ಲಿಂದು ಮುಂಜಾನೆ ಹೃದಯವಿದ್ರಾವಕ ಘಟನೆ ನಡೆಯಿದ್ದು, ದುಷ್ಕರ್ಮಿಗಳು ಕಲ್ಲಿನಿಂದ ಹೊಡೆದು ಯುವಕನನ್ನು ಹತ್ಯೆಗೈದಿದ್ದಾರೆ. ಹತ್ಯೆಗೀಡಾದ ವ್ಯಕ್ತಿಯನ್ನು ಚಾಮರಾಜಪೇಟೆ ಕಾಲೋನಿಯ ನಿವಾಸಿ ಶ್ರೀಕಾಂತ್ (29) ಎಂದು ಗುರುತಿಸಲಾಗಿದೆ.
ವೆಲ್ಡಿಂಗ್ ಕೆಲಸ ಮಾಡಿಕೊಂಡಿದ್ದ ಶ್ರೀಕಾಂತ್ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಚಿಕ್ಕಬಳ್ಳಾಪುರದಲ್ಲಿ ವಾಸಿಸುತ್ತಿದ್ದರು. ಬುಧವಾರ ಬೆಳಗಿನ ಜಾವ ನಡೆದ ಈ ಕ್ರೂರ ಹತ್ಯೆಯ ಹಿನ್ನೆಲೆಯಲ್ಲಿ ಸ್ಥಳೀಯರು ಬೆಚ್ಚಿಬಿದ್ದರು.
ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಶವದ ಪಕ್ಕದಲ್ಲಿಯೇ ರಕ್ತಸಿಕ್ತ ಕಲ್ಲು ಪತ್ತೆಯಾಗಿದೆ. ಇದುವರೆಗೆ ಹತ್ಯೆಗೆ ಸ್ಪಷ್ಟ ಕಾರಣ ಬೆಳಕಿಗೆ ಬಂದಿಲ್ಲ. ಆದರೆ ವೈಯಕ್ತಿಕ ದ್ವೇಷವೇ ಈ ಕೃತ್ಯದ ಹಿಂದೆ ಇರಬಹುದೆಂದು ಪ್ರಾಥಮಿಕ ತನಿಖೆಯಲ್ಲಿ ಶಂಕೆ ವ್ಯಕ್ತವಾಗಿದೆ.
ಚಿಕ್ಕಬಳ್ಳಾಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ದುಷ್ಕರ್ಮಿಗಳ ಪತ್ತೆಗಾಗಿ ತನಿಖೆ ಪ್ರಗತಿಯಲ್ಲಿದೆ.
ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…
ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…
ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…
ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…
ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…
ಪ್ರೇಯಸಿ ಫೋನ್ ಕರೆ ಸ್ವೀಕರಿಸದೇ, ಆಕೆ ಮೊಬೈಲ್‌ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…