ತುಮಕೂರು ತಾಲೂಕಿನ ಬೆಳಗುಂಬ ರಸ್ತೆಯಲ್ಲಿರುವ ಗರುಡ ಕೆಫೆ ಸಮೀಪ ರೌಡಿಶೀಟರ್‌ವೊಬ್ಬನನ್ನು ದುಷ್ಕರ್ಮಿಗಳು ಸಿನಿಮೀಯ ರೀತಿಯಲ್ಲಿ ಹತ್ಯೆಗೈದ ಘಟನೆ ಸೋಮವಾರ ಆತಂಕ ಸೃಷ್ಟಿಸಿದೆ. ಘಟನೆಯಿಂದ ಸ್ಥಳೀಯರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.
ಮೃತನನ್ನು ಬೆಳಗುಂಬ ನಿವಾಸಿ ಮಲ್ಲ (38) ಎಂದು ಗುರುತಿಸಲಾಗಿದೆ. ಬೈಕ್‌ನಲ್ಲಿ ತೆರಳುತ್ತಿದ್ದ ಮಲ್ಲನನ್ನು ಸ್ವಿಫ್ಟ್ ಕಾರಿನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಉದ್ದೇಶಪೂರ್ವಕವಾಗಿ ಡಿಕ್ಕಿ ಹೊಡೆದು ಕೆಳಗೆ ಬೀಳಿಸಿದ್ದಾರೆ. ಬಳಿಕ ಮಾರಕಾಸ್ತ್ರಗಳೊಂದಿಗೆ ದಾಳಿ ನಡೆಸಿ, ಮುಖ ಹಾಗೂ ದೇಹವನ್ನು ಗುರುತಿಸಲಾಗದಷ್ಟು ಭೀಕರವಾಗಿ ಕೊಚ್ಚಿ ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾರೆ.
ಮಲ್ಲ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯ ರೌಡಿಶೀಟರ್ ಪಟ್ಟಿಯಲ್ಲಿದ್ದನು. 2008ರಲ್ಲಿ ವಡ್ಡರಹಳ್ಳಿ ಕ್ರಾಸ್ ಬಳಿ ನಡೆದಿದ್ದ ಕುಖ್ಯಾತ ‘ಗಡ್ಡ ರಾಜು’ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಹಿನ್ನೆಲೆ, ಆತನ ವಿರುದ್ಧ ಪೊಲೀಸರು ರೌಡಿಪಟ್ಟಿ ತೆರೆದು ನಿರಂತರ ನಿಗಾ ವಹಿಸುತ್ತಿದ್ದರು.
ಪ್ರಾಥಮಿಕ ತನಿಖೆಯಲ್ಲಿ ಹಳೆಯ ವೈಷಮ್ಯ ಅಥವಾ ಗ್ಯಾಂಗ್‌ವಾರ್ ಈ ಹತ್ಯೆಗೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಘಟನೆ ಕುರಿತು ಮಾಹಿತಿ ದೊರೆಯುತ್ತಿದ್ದಂತೆಯೇ ಕ್ಯಾತ್ಸಂದ್ರ ಹಾಗೂ ತುಮಕೂರು ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಸ್ಥಳದಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಪರಾರಿಯಾಗಿರುವ ಆರೋಪಿಗಳ ಪತ್ತೆ ಮತ್ತು ಬಂಧನಕ್ಕೆ ಪೊಲೀಸರು ವ್ಯಾಪಕ ಶೋಧ ಕಾರ್ಯ ಆರಂಭಿಸಿದ್ದಾರೆ.
ಬಾಗಲಕೋಟೆ: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆಯೇ ಎಂಬ…
ನವದೆಹಲಿ: ಪಾಸ್‌ಪೋರ್ಟ್ ಅರ್ಜಿ ಶುಲ್ಕವನ್ನು ಹೆಚ್ಚಿಸುವುದರ ಜೊತೆಗೆ ಮಕ್ಕಳ ಪಾಸ್‌ಪೋರ್ಟ್‌ನ ಮಾನ್ಯತಾ ಅವಧಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗಳನ್ನು…
ತಾಯಿ-ತಂದೆಯಿಲ್ಲದ ವೇದಳನ್ನು ಕಳೆದುಕೊಂಡ ಅಜ್ಜಿ-ತಾತನ ಆಕ್ರಂದನ ಗೌರಿಬಿದನೂರು: ನಗರದಲ್ಲಿ ಅಪಘಾತಗಳ ಸರಣಿ ಮುಂದುವರಿದಿರುವ ನಡುವೆಯೇ ಮತ್ತೊಂದು ಮನಕಲಕುವ ರಸ್ತೆ ದುರಂತ…
ಕಳೆದ ವರ್ಷದ 265 ರೂ. ಬೆಲೆಯ ಶೂಗಳು ಇನ್ನೂ ಬಾಳಿಕೆ; ಪ್ರಸಕ್ತ ಸಾಲಿನಲ್ಲಿ ವಿತರಿಸಿದ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ…
ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ…
ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ…