Categories: CrimeLatest

ಭೀಕರ ರಸ್ತೆ ಅಪಘಾತ: ಗೂಡ್ಸ್ ಆಟೋ ಡಿಕ್ಕಿಗೆ ಬೈಕ್ ಸವಾರರಿಬ್ಬರ ದುರ್ಮರಣ, ಇಬ್ಬರಿಗೆ ಗಂಭೀರ ಗಾಯ

ನಂಜನಗೂಡು ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿ ಬೈಕ್ ಸವಾರರಿಬ್ಬರು ಮೃತಪಟ್ಟಿದ್ದು, ಗೂಡ್ಸ್ ಆಟೋದಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಂಜನಗೂಡು–ಹುಲ್ಲಹಳ್ಳಿ ರಸ್ತೆಯ ಕೊಂಗಳ್ಳಿ ಗೇಟ್ ಬಳಿ ನಡೆದಿದೆ.

ಮೃತರನ್ನು ಹುಲ್ಲಹಳ್ಳಿ ನಿವಾಸಿಗಳಾದ ಹಾಲಿನ ಬಸವಣ್ಣ ಹಾಗೂ ಪರ್ವೀಜ್ ಎಂದು ಗುರುತಿಸಲಾಗಿದೆ. ಇವರು ಬೈಕ್‌ನಲ್ಲಿ ನಂಜನಗೂಡಿನಿಂದ ಹುಲ್ಲಹಳ್ಳಿ ಕಡೆಗೆ ತೆರಳುತ್ತಿದ್ದ ವೇಳೆ, ಎದುರಿನಿಂದ ಅತಿವೇಗ ಹಾಗೂ ಅಜಾಗರೂಕತೆಯಿಂದ ಬಂದ ಗೂಡ್ಸ್ ಆಟೋ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಡಿಕ್ಕಿಯ ರಭಸಕ್ಕೆ ಬಸವಣ್ಣ ಸ್ಥಳದಲ್ಲೇ ಮೃತಪಟ್ಟರೆ, ಗಂಭೀರವಾಗಿ ಗಾಯಗೊಂಡಿದ್ದ ಪರ್ವೀಜ್ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ. ಅಪಘಾತದ ತೀವ್ರತೆಗೆ ಗೂಡ್ಸ್ ಆಟೋ ಕೂಡ ಪಲ್ಟಿಯಾಗಿದ್ದು, ಅದರಲ್ಲಿದ್ದ ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ನಂಜನಗೂಡಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನಾ ಸ್ಥಳಕ್ಕೆ ನಂಜನಗೂಡು ಸಂಚಾರಿ ಪೊಲೀಸ್ ಠಾಣೆಯ ಸಬ್‌ ಇನ್ಸ್‌ಪೆಕ್ಟರ್ ಕೃಷ್ಣಕಾಂತ ಕೋಳಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡಿನ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ಅಪಘಾತದ ನಿಖರ ಕಾರಣದ ಕುರಿತು ತನಿಖೆ ಮುಂದುವರಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಪತಿಯನ್ನೇ ಕೊಲ್ಲಲು ಪತ್ನಿಯ ಸ್ಕೆಚ್‌! ಪ್ರಿಯಕರನ ಮೊಬೈಲ್‌ನಲ್ಲಿ ಸಿಕ್ತು ಶಾಕಿಂಗ್ ಸಾಕ್ಷಿ..!

ಸೂರ್ಯಾಪೇಟೆ: ಅನೈತಿಕ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದಾನೆ ಎಂಬ ಕಾರಣಕ್ಕೆ ಪತಿಯನ್ನೇ ಕೊಲೆ ಮಾಡಲು ಪತ್ನಿ ಹಾಗೂ ಆಕೆಯ ಕುಟುಂಬಸ್ಥರು ಸಂಚು…

15 hours ago

ಗಂಡ ನೈಟ್ ಡ್ಯೂಟಿಗೆ ಹೋದಾಗ ಮಕ್ಕಳಿಗೆ ನಿದ್ರೆ ಗುಳಿಗೆ; ಲವ್ವರ್ ಜೊತೆ ಪತ್ನಿಯ ಚಕ್ಕಂದ.. ಮಧ್ಯರಾತ್ರಿ ಮನೆಗೆ ಬಂದ ಗಂಡನಿಗೆ ಕಾದಿತ್ತು ಘೋರ ದುರಂತ!

ಸೋನ್‌ಭದ್ರ: ಗಂಡ ನೈಟ್ ಡ್ಯೂಟಿಗೆ ಹೋದ ಬಳಿಕ ಮಕ್ಕಳಿಗೆ ನಿದ್ರೆ ಮಾತ್ರೆ ನೀಡಿ, ಪ್ರಿಯಕರನನ್ನು ಮನೆಗೆ ಕರೆಸಿಕೊಳ್ಳುತ್ತಿದ್ದ ಪತ್ನಿ, ಕೊನೆಗೆ…

15 hours ago

ರೈಲ್ವೆ ಕಾಮಗಾರಿ ಕಾರ್ಮಿಕರಿದ್ದ ಬೊಲೆರೋ ಪಲ್ಟಿ: ಎಂಟು ಮಂದಿಗೆ ಗಂಭೀರ ಗಾಯ

ಗೌರಿಬಿದನೂರು: ರೈಲ್ವೆ ಇಲಾಖೆಯ ಕಾಮಗಾರಿ ಕೆಲಸಕ್ಕೆ ತೆರಳುತ್ತಿದ್ದ ಕೂಲಿ ಕಾರ್ಮಿಕರಿದ್ದ ಬೊಲೆರೋ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ…

15 hours ago

ಹುಬ್ಬಳ್ಳಿ–ಧಾರವಾಡದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ: 1,339 ಮಂದಿ ವಿರುದ್ಧ ಪ್ರಕರಣ

ಹುಬ್ಬಳ್ಳಿ–ಧಾರವಾಡ: ಅವಳಿ ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತುಹಾಕಲು ಹುಬ್ಬಳ್ಳಿ–ಧಾರವಾಡ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು, ಕಳೆದ ಮೂರು…

2 days ago

ವಿದ್ಯುತ್ ತಂತಿ ಅಳವಡಿಸಿ ಎರಡು ಜಿಂಕೆಗಳ ಬಲಿ: ಜಮೀನಿನಲ್ಲೇ ಮಾಂಸ ಬೇಯಿಸುತ್ತಿದ್ದ ಆರೋಪಿಗಳು!

ಸಾಗರ: ಜಮೀನಿಗೆ ಅಕ್ರಮವಾಗಿ ವಿದ್ಯುತ್ ತಂತಿ ಅಳವಡಿಸಿ ಎರಡು ಗಂಡು ಜಿಂಕೆಗಳನ್ನು ವಿದ್ಯುತ್ ಸ್ಪರ್ಶದಿಂದ ಸಾಯಿಸಿ, ಅವುಗಳ ಮಾಂಸವನ್ನು ಜಮೀನಿನಲ್ಲೇ…

2 days ago

ಅರ್ಚಕ ವಿಶ್ವೇಶ್ವರ ಭಟ್ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಕುಮಟಾ: ನಗರದ ಪ್ರಸಿದ್ಧ ಕುಂಭೇಶ್ವರ ದೇವಸ್ಥಾನದ ಅರ್ಚಕ ವಿಶ್ವೇಶ್ವರ ಭಟ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರ ಜಿಲ್ಲಾ ಮತ್ತು…

2 days ago