Categories: CrimeLatest

ಮುರ್ಡೇಶ್ವರ ಬಳಿ ಭೀಕರ ರಸ್ತೆ ದುರಂತ: ಲಾರಿ ಹರಿದು ಸ್ಕೂಟರ್ ಸವಾರ ಸಾವು, ಹೆದ್ದಾರಿಯಲ್ಲಿ ಸ್ಥಳೀಯರ ಪ್ರತಿಭಟನೆ

ಉತ್ತರ ಕನ್ನಡ ಜಿಲ್ಲೆಯ ಮುರ್ಡೇಶ್ವರ ಸಮೀಪದ ರಾಷ್ಟ್ರೀಯ ಹೆದ್ದಾರಿ–66ರಲ್ಲಿ ಬುಧವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತಕ್ಕೆ ಹೆದ್ದಾರಿ ಕಾಮಗಾರಿಯ ಅವೈಜ್ಞಾನಿಕ ನಿರ್ವಹಣೆಯೇ ಕಾರಣ ಎಂದು ಆರೋಪಿಸಿದ ಸ್ಥಳೀಯರು ಮೃತದೇಹವನ್ನು ಸ್ಥಳಾಂತರಿಸಲು ಅವಕಾಶ ನೀಡದೆ ಕೆಲಕಾಲ ರಾಷ್ಟ್ರೀಯ ಹೆದ್ದಾರಿಯಲ್ಲೇ ಪ್ರತಿಭಟನೆ ನಡೆಸಿದರು.

ಮೃತರನ್ನು ಕಾಯ್ಕಿಣಿ ಸಭಾತೀಯದ ನಿವಾಸಿ ಕೃಷ್ಣ ಶನಿಯಾರ ನಾಯ್ಕ (53) ಎಂದು ಗುರುತಿಸಲಾಗಿದೆ. ಅವರು ಸಾರದೊಳೆ ಹಳೆಕೋಟೆ ಹನುಮಂತ ದೇವಾಲಯದ ಆಡಳಿತ ಮಂಡಳಿಯ ಟ್ರಸ್ಟಿಯಾಗಿ ಸೇವೆ ಸಲ್ಲಿಸುತ್ತಿದ್ದರು.

ಪ್ರಾಥಮಿಕ ಮಾಹಿತಿ ಪ್ರಕಾರ, ಮಂಗಳೂರಿನಿಂದ ಬೆಳಗಾವಿ ಕಡೆಗೆ ಸಾಗುತ್ತಿದ್ದ ಲಾರಿಯು ಬಸ್ತಿ–ಕಾಯ್ಕಿಣಿ ಭಾಗದ ತಿರುವಿನಲ್ಲಿ ನಿಂತಿದ್ದ ಕಾರನ್ನು ತಪ್ಪಿಸಲು ಯತ್ನಿಸಿದ ವೇಳೆ ನಿಯಂತ್ರಣ ಕಳೆದುಕೊಂಡಿದೆ. ಬಳಿಕ ಡಿವೈಡರ್‌ಗೆ ಡಿಕ್ಕಿ ಹೊಡೆದ ಲಾರಿ ರಸ್ತೆ ಬದಿಯಲ್ಲಿ ನಿಂತಿದ್ದ ಸ್ಕೂಟರ್‌ಗೆ ಅಪ್ಪಳಿಸಿ, ಕೃಷ್ಣ ನಾಯ್ಕ ಅವರ ಮೇಲೆ ಹರಿದಿದೆ. ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತದ ಬಳಿಕ ಲಾರಿಯ ಮುಂಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದರು.

ಘಟನೆಯಿಂದ ಆಕ್ರೋಶಗೊಂಡ ಸ್ಥಳೀಯರು, ಹೆದ್ದಾರಿ ಕಾಮಗಾರಿ ಕಳಪೆ ಗುಣಮಟ್ಟದಲ್ಲಿದ್ದು ರಸ್ತೆ ವಿನ್ಯಾಸದ ದೋಷಗಳಿಂದ ಈ ಭಾಗದಲ್ಲಿ ನಿರಂತರವಾಗಿ ಅಪಘಾತಗಳು ಸಂಭವಿಸುತ್ತಿವೆ ಎಂದು ಆರೋಪಿಸಿದರು. ಸಂಬಂಧಿತ ಅಧಿಕಾರಿಗಳು ಸ್ಥಳಕ್ಕೆ ಬರುವವರೆಗೆ ಮೃತದೇಹ ಹಾಗೂ ಅಪಘಾತಕ್ಕೀಡಾದ ವಾಹನವನ್ನು ತೆರವುಗೊಳಿಸಲು ಅವಕಾಶ ನೀಡುವುದಿಲ್ಲ ಎಂದು ಪಟ್ಟು ಹಿಡಿದು ಪ್ರತಿಭಟನೆ ನಡೆಸಿದರು. ಇದರಿಂದ ಕೆಲಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು.

ಮಾಹಿತಿ ತಿಳಿಯುತ್ತಿದ್ದಂತೆ ಮುರ್ಡೇಶ್ವರ ಮತ್ತು ಭಟ್ಕಳ ಪೊಲೀಸ್ ಠಾಣೆಗಳ ಸಿಬ್ಬಂದಿ, ಡಿವೈಎಸ್‌ಪಿ, ಸಹಾಯಕ ಆಯುಕ್ತರು ಹಾಗೂ ತಹಸೀಲ್ದಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿದರು.

ಈ ವೇಳೆ ಹೆದ್ದಾರಿ ಕಾಮಗಾರಿ ನಿರ್ವಹಿಸುತ್ತಿರುವ ಸಂಸ್ಥೆಯ ಎಂಜಿನಿಯರ್ ಸ್ಥಳಕ್ಕೆ ಭೇಟಿ ನೀಡಿ, ರಸ್ತೆ ಸುರಕ್ಷತೆಯನ್ನು ಹೆಚ್ಚಿಸಲು ಹಾಗೂ ಮುಂದಿನ ದಿನಗಳಲ್ಲಿ ಇಂತಹ ಅಪಘಾತಗಳನ್ನು ತಡೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವುದಾಗಿ ಭರವಸೆ ನೀಡಿದರು. ಬಳಿಕ ಸ್ಥಳೀಯರು ಪ್ರತಿಭಟನೆ ಹಿಂಪಡೆದರು.

ನಂತರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಯಿತು. ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ನಿಖರ ಕಾರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಪತಿಯನ್ನೇ ಕೊಲ್ಲಲು ಪತ್ನಿಯ ಸ್ಕೆಚ್‌! ಪ್ರಿಯಕರನ ಮೊಬೈಲ್‌ನಲ್ಲಿ ಸಿಕ್ತು ಶಾಕಿಂಗ್ ಸಾಕ್ಷಿ..!

ಸೂರ್ಯಾಪೇಟೆ: ಅನೈತಿಕ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದಾನೆ ಎಂಬ ಕಾರಣಕ್ಕೆ ಪತಿಯನ್ನೇ ಕೊಲೆ ಮಾಡಲು ಪತ್ನಿ ಹಾಗೂ ಆಕೆಯ ಕುಟುಂಬಸ್ಥರು ಸಂಚು…

2 days ago

ಗಂಡ ನೈಟ್ ಡ್ಯೂಟಿಗೆ ಹೋದಾಗ ಮಕ್ಕಳಿಗೆ ನಿದ್ರೆ ಗುಳಿಗೆ; ಲವ್ವರ್ ಜೊತೆ ಪತ್ನಿಯ ಚಕ್ಕಂದ.. ಮಧ್ಯರಾತ್ರಿ ಮನೆಗೆ ಬಂದ ಗಂಡನಿಗೆ ಕಾದಿತ್ತು ಘೋರ ದುರಂತ!

ಸೋನ್‌ಭದ್ರ: ಗಂಡ ನೈಟ್ ಡ್ಯೂಟಿಗೆ ಹೋದ ಬಳಿಕ ಮಕ್ಕಳಿಗೆ ನಿದ್ರೆ ಮಾತ್ರೆ ನೀಡಿ, ಪ್ರಿಯಕರನನ್ನು ಮನೆಗೆ ಕರೆಸಿಕೊಳ್ಳುತ್ತಿದ್ದ ಪತ್ನಿ, ಕೊನೆಗೆ…

2 days ago

ರೈಲ್ವೆ ಕಾಮಗಾರಿ ಕಾರ್ಮಿಕರಿದ್ದ ಬೊಲೆರೋ ಪಲ್ಟಿ: ಎಂಟು ಮಂದಿಗೆ ಗಂಭೀರ ಗಾಯ

ಗೌರಿಬಿದನೂರು: ರೈಲ್ವೆ ಇಲಾಖೆಯ ಕಾಮಗಾರಿ ಕೆಲಸಕ್ಕೆ ತೆರಳುತ್ತಿದ್ದ ಕೂಲಿ ಕಾರ್ಮಿಕರಿದ್ದ ಬೊಲೆರೋ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ…

2 days ago

ಹುಬ್ಬಳ್ಳಿ–ಧಾರವಾಡದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ: 1,339 ಮಂದಿ ವಿರುದ್ಧ ಪ್ರಕರಣ

ಹುಬ್ಬಳ್ಳಿ–ಧಾರವಾಡ: ಅವಳಿ ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತುಹಾಕಲು ಹುಬ್ಬಳ್ಳಿ–ಧಾರವಾಡ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು, ಕಳೆದ ಮೂರು…

3 days ago

ವಿದ್ಯುತ್ ತಂತಿ ಅಳವಡಿಸಿ ಎರಡು ಜಿಂಕೆಗಳ ಬಲಿ: ಜಮೀನಿನಲ್ಲೇ ಮಾಂಸ ಬೇಯಿಸುತ್ತಿದ್ದ ಆರೋಪಿಗಳು!

ಸಾಗರ: ಜಮೀನಿಗೆ ಅಕ್ರಮವಾಗಿ ವಿದ್ಯುತ್ ತಂತಿ ಅಳವಡಿಸಿ ಎರಡು ಗಂಡು ಜಿಂಕೆಗಳನ್ನು ವಿದ್ಯುತ್ ಸ್ಪರ್ಶದಿಂದ ಸಾಯಿಸಿ, ಅವುಗಳ ಮಾಂಸವನ್ನು ಜಮೀನಿನಲ್ಲೇ…

3 days ago

ಅರ್ಚಕ ವಿಶ್ವೇಶ್ವರ ಭಟ್ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಕುಮಟಾ: ನಗರದ ಪ್ರಸಿದ್ಧ ಕುಂಭೇಶ್ವರ ದೇವಸ್ಥಾನದ ಅರ್ಚಕ ವಿಶ್ವೇಶ್ವರ ಭಟ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರ ಜಿಲ್ಲಾ ಮತ್ತು…

3 days ago