Categories: CrimeLatest

ಗೌರಿಬಿದನೂರಿನಲ್ಲಿ ಭೀಕರ ದರೋಡೆ: ಕಿವಿಯ ಸಮೇತ ಬಂಗಾರದ ವಾಲೆ ಕಿತ್ತುಕೊಂಡ ಕಳ್ಳರು, ವೃದ್ಧೆ ಮೃತ್ಯು

ಗೌರಿಬಿದನೂರು ತಾಲೂಕಿನ ತೊಂಡೆಬಾವಿ ಹೋಬಳಿಯ ಬಸವನಹಳ್ಳಿ ಗ್ರಾಮದಲ್ಲಿ ನಡೆದ ಭೀಕರ ದರೋಡೆ ಹಾಗೂ ಹಲ್ಲೆ ಪ್ರಕರಣವು ವೃದ್ಧೆಯ ಸಾವಿನಲ್ಲಿ ಅಂತ್ಯಗೊಂಡಿದ್ದು, ಗ್ರಾಮಸ್ಥರಲ್ಲಿ ಭೀತಿ ಮೂಡಿಸಿದೆ. 60 ವರ್ಷದ ಸುಬ್ಬಮ್ಮ ಎಂಬ ವೃದ್ಧೆಯ ಮೇಲೆ ದುಷ್ಕರ್ಮಿಗಳು ಅಮಾನುಷವಾಗಿ ಹಲ್ಲೆ ನಡೆಸಿ, ಕಿವಿಯಲ್ಲಿದ್ದ ಬಂಗಾರದ ವಾಲೆಗಳನ್ನು ಕಿವಿಯ ಸಮೇತ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಸುಬ್ಬಮ್ಮ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮಾಹಿತಿಯ ಪ್ರಕಾರ, ಸುಬ್ಬಮ್ಮ ಅವರು ಮನೆಯಲ್ಲಿ ಒಬ್ಬರೇ ಇದ್ದ ವೇಳೆ ಕುಟುಂಬದ ಸದಸ್ಯರು ಜಮೀನಿನ ಕೆಲಸಕ್ಕೆ ತೆರಳಿದ್ದರು. ಈ ಸಂದರ್ಭವನ್ನು ಗಮನಿಸಿದ ಕಳ್ಳರು ಮನೆಗೆ ನುಗ್ಗಿ, ವೃದ್ಧೆಯ ಬಳಿ ಇದ್ದ ಬಂಗಾರದ ವಾಲೆಗಳನ್ನು ದೋಚಲು ಯತ್ನಿಸಿದ್ದಾರೆ.

ಆದರೆ ಸುಬ್ಬಮ್ಮ ಅವರು ಕೂಗಾಡುತ್ತ ಪ್ರತಿರೋಧ ವ್ಯಕ್ತಪಡಿಸಿದಾಗ, ಆರೋಪಿಗಳು ಬಲವಂತವಾಗಿ ವಾಲೆಗಳನ್ನು ಕಿತ್ತುಕೊಂಡಿದ್ದಾರೆ. ಈ ವೇಳೆ ಅವರ ಕಿವಿಗಳಿಗೆ ತೀವ್ರ ಗಾಯಗಳಾಗಿದ್ದು, ಹೆಚ್ಚಿನ ರಕ್ತಸ್ರಾವ ಉಂಟಾಗಿದೆ. ಅಲ್ಲದೆ, ವೃದ್ಧೆ ನಿರಂತರವಾಗಿ ಕೂಗಾಡುತ್ತಿದ್ದುದರಿಂದ ಕೋಪಗೊಂಡ ಕಳ್ಳರು ತಲೆಗೆ ಭಾರವಾದ ವಸ್ತುವಿನಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಹಲ್ಲೆಯ ನಂತರ ಸುಬ್ಬಮ್ಮ ಅವರು ಮನೆಯೊಳಗೆ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಘಟನೆ ನಡೆದ ಸಂದರ್ಭದಲ್ಲಿ ಅಕ್ಕಪಕ್ಕದಲ್ಲಿ ಯಾರೂ ಇಲ್ಲದ ಕಾರಣ ತಕ್ಷಣ ನೆರವು ದೊರಕಲಿಲ್ಲ. ಮಧ್ಯಾಹ್ನ ಸುಮಾರು 3.30ರ ವೇಳೆಗೆ ಮನೆಗೆ ಬಂದ ಸೊಸೆ, ವೃದ್ಧೆಯ ಸ್ಥಿತಿ ಕಂಡು ಬೆಚ್ಚಿಬಿದ್ದಿದ್ದಾರೆ. ಬಳಿಕ ಕುಟುಂಬಸ್ಥರು ಮತ್ತು ಗ್ರಾಮಸ್ಥರ ಸಹಾಯದಿಂದ ಅವರನ್ನು ಗೌರಿಬಿದನೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು.

ಪ್ರಾಥಮಿಕ ಚಿಕಿತ್ಸೆ ಬಳಿಕ ವೈದ್ಯರು ತಲೆಗೆ ಗಂಭೀರ ಪೆಟ್ಟಾಗಿರುವುದನ್ನು ಗಮನಿಸಿ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಆಸ್ಪತ್ರೆಗೆ ರವಾನಿಸಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸುಬ್ಬಮ್ಮ ಅವರು ಕೊನೆಯುಸಿರೆಳೆದಿದ್ದಾರೆ.

ಹಗಲು ಹೊತ್ತಿನಲ್ಲೇ ಮನೆಗೆ ನುಗ್ಗಿ ವೃದ್ಧೆಯ ಮೇಲೆ ದಾಳಿ ನಡೆಸಿದ ಈ ಘಟನೆ ಗ್ರಾಮಸ್ಥರಲ್ಲಿ ಆತಂಕ ಉಂಟುಮಾಡಿದೆ. ಆರೋಪಿಗಳನ್ನು ಶೀಘ್ರ ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ವರದಿ: ಅವಿನಾಶ್

ಭ್ರಷ್ಟರ ಬೇಟೆ

Recent Posts

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

39 minutes ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

6 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

21 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

1 day ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago