Latest

ತೋಟಗಾರಿಕೆ ಅಧಿಕಾರಿ ಫೋನ್ ಪೇ ಲಂಚ: ಲೋಕಾಯುಕ್ತ ದಾಳಿ, ಅಧಿಕಾರಿ ವಶಕ್ಕೆ”

ಯಾದಗಿರಿ ಜಿಲ್ಲೆಯ ತೋಟಗಾರಿಕೆ ಇಲಾಖೆಯಲ್ಲಿ ಭ್ರಷ್ಟಾಚಾರದ ಪ್ರಕರಣ ಬೆಳಕಿಗೆ ಬಂದಿದೆ. ಈರುಳ್ಳಿ ಶೇಡ್ ನಿರ್ಮಾಣಕ್ಕಾಗಿ ಸಬ್ಸಿಡಿ ಬಿಡುಗಡೆ ಸಂಬಂಧ ಹಣದ ಲಂಚ ಬೇಡಿಕೆ ಇಟ್ಟು, ಅದರಲ್ಲಿ ಭಾಗಶಃ ಹಣವನ್ನು ಫೋನ್ ಪೇ ಮೂಲಕ ಸ್ವೀಕರಿಸಿದ್ದ ಸಹಾಯಕ ನಿರ್ದೇಶಕ ಶಿವದತ್ತ, ಲೋಕಾಯುಕ್ತ ಪೊಲೀಸರ ಜಾಲಕ್ಕೆ ಬಿದ್ದಿದ್ದಾರೆ.

ಬದ್ದೆಪಲ್ಲಿ ಗ್ರಾಮದ ರೈತ ಶಂಕರಪ್ಪ ಅವರು ಈರುಳ್ಳಿ ಶೇಡ್ ನಿರ್ಮಿಸಿದ್ದಕ್ಕಾಗಿ ಸರ್ಕಾರದಿಂದ 80 ಸಾವಿರ ರೂಪಾಯಿ ಸಬ್ಸಿಡಿ ಮಂಜೂರಾಗಿತ್ತು. ಆದರೆ ಈ ಹಣ ಬಿಡುಗಡೆಗೆ ಸಂಬಂಧಿಸಿದಂತೆ ಅಧಿಕಾರಿಯಾದ ಶಿವದತ್ತ ಅವರು 20 ಸಾವಿರ ರೂಪಾಯಿ ಲಂಚದ ಬೇಡಿಕೆ ಇಟ್ಟಿದ್ದರು.

ಇಂದು (ಗುರುವಾರ) ಅಧಿಕಾರಿಯು ಶಂಕರೆಪ್ಪನಿಗೆ ಲಂಚ ಹಣ ಜಮೆ ಮಾಡಲು ಫೋನ್ ಪೇ ನಂಬರ್ ಒದಗಿಸಿದ್ದು, ರೈತ 5 ಸಾವಿರ ರೂಪಾಯಿ ಹಣವನ್ನು ಆನ್‌ಲೈನ್ ಮೂಲಕ ವರ್ಗಾಯಿಸಿದ್ದಾರೆ. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ರೈತ ಶಂಕರೆಪ್ಪ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.

ದೂರು ಸ್ವೀಕರಿಸಿದ ಲೋಕಾಯುಕ್ತ ಪೊಲೀಸರು ತಕ್ಷಣ ಕ್ರಮ ಕೈಗೊಂಡು, ಯಾದಗಿರಿಯ ಅಂಬೇಡ್ಕರ್ ನಗರದಲ್ಲಿರುವ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಕೆಲ ಡಾಕ್ಯುಮೆಂಟ್‌ಗಳ ಪರಿಶೀಲನೆ ನಡೆಸಿ ಮಹತ್ವದ ದಾಖಲೆಗಳನ್ನು ಸಹ ವಶಪಡಿಸಿಕೊಂಡಿದ್ದಾರೆ.

ಲೋಕಾಯುಕ್ತ ಎಸ್ಪಿ ಬಿ.ಕೆ. ಉಮೇಶ್ ಹಾಗೂ ಡಿವೈಎಸ್ಪಿ ಜೆ.ಎಚ್. ಇನಾಂದಾರ್ ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಾಚರಣೆಗೆ ಪಿಐಗಳಾದ ಸಿದ್ದರಾಯ ಹಾಗೂ ಸಂಗಮೇಶ ನೇತೃತ್ವ ವಹಿಸಿದ್ದರು. ಜೊತೆಗೆ ಸಿಬ್ಬಂದಿಗಳಾದ ಸತೀಶ್, ಅಮರನಾಥ, ರಾಮುನಾಯಕ, ಮಲ್ಲಮ್ಮ, ನವೀನ್, ಗಂಗಾಧರ, ಸುಮತಿ, ಮಲ್ಲಪ್ಪ, ಖಾಸಿಂ, ಮಲ್ಲಿನಾಥ ಹಾಗೂ ಮಲ್ಲಿಕಾರ್ಜುನ ಮಡಿವಾಳ ಸಹ ಭಾಗವಹಿಸಿದ್ದರು.

ಪ್ರಸ್ತುತ ಅಧಿಕಾರಿ ಶಿವದತ್ತನನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.

nazeer ahamad

Recent Posts

ಮನೆ ಬಳಕೆಗೆ ಸಿಗದ ಗೃಹಬಳಕೆಯ ಸಿಲಿಂಡರ್‌ಗಳು ಹೋಟೆಲ್‌ಗಳಲ್ಲಿ , ಅಧಿಕಾರಿಗಳ ನಿರ್ಲಕ್ಷ್ಯ

ಮುಂಡಗೋಡ: ಪ್ರಸ್ತುತ ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಇರಾನ್–ಅಮೇರಿಕಾ ಉದ್ವಿಗ್ನತೆ (ಯುದ್ಧ) ಪರಿಣಾಮವಾಗಿ ಇಂಧನ ಕ್ಷೇತ್ರದಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ. ಈ ಪರಿಸ್ಥಿತಿಯ…

3 hours ago

ಕರ್ನಾಟಕ ಹೈಕೋರ್ಟ್‌ನಲ್ಲಿ 70 ಹುದ್ದೆಗಳು: ಆಸಕ್ತರಿಗೆ ಉದ್ಯೋಗದ ಸುವರ್ಣಾವಕಾಶ

ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…

8 hours ago

ಕೋರ್ಟ್ ಉದ್ಯೋಗದ ಹೆಸರಿನಲ್ಲಿ ಕೋಟಿ ಕೋಟಿ ಮೋಸ: ಬೆಂಗಳೂರಿನಲ್ಲಿ ಫ್ರಾಡ್ ದಂಪತಿ ಬಂಧನ

ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…

8 hours ago

ಗಂಡ ಬಿಟ್ಟ ಮಹಿಳೆಯರೇ ಇವನ ಟಾರ್ಗೆಟ್; 5 ಮಹಿಳೆಯರ ಜೊತೆ ದೈಹಿಕ ಸಂಪರ್ಕ ಬೆಳೆಸಿ ವಂಚನೆ..!

ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…

8 hours ago

ಗಂಡನಿಲ್ಲದ ವೇಳೆ ಬಾಡಿಗೆಗೆ ಇದ್ದ ಯುವಕನ ಜೊತೆ ಸರಸ; ಅಡ್ಡಿಯಾದ ಅತ್ತೆಯನ್ನು ಕೊಂದ ಸೊಸೆ

ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…

9 hours ago

ಗೌರಿಬಿದನೂರಿನಲ್ಲಿ ಭೀಕರ ರಸ್ತೆ ಅಪಘಾತ – ಮಹಿಳೆ ಸಾವು, ಪುತ್ರನಿಗೆ ಗಾಯ

ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…

9 hours ago