ಛತ್ತೀಸ್‌ಗಢ: ಮೋಹಕ ರೂಪದ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರ ಪ್ರೀತಿಯ ಬಲೆಗೆ ಬಿದ್ದ ಹೋಟೆಲ್ ಉದ್ಯಮಿಯೊಬ್ಬರು ಕೋಟ್ಯಂತರ ರೂಪಾಯಿ ಕಳೆದುಕೊಂಡಿರುವ ಆರೋಪ ಛತ್ತೀಸ್‌ಗಢದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ಮದುವೆಯಾಗುವುದಾಗಿ ನಂಬಿಸಿ ಉದ್ಯಮಿಯಿಂದ ಸುಮಾರು ₹2 ಕೋಟಿಯಿಂದ ₹5 ಕೋಟಿ ಮೌಲ್ಯದ ಹಣ, ಚಿನ್ನಾಭರಣ, ದುಬಾರಿ ಕಾರು ಹಾಗೂ ಆಸ್ತಿಯನ್ನು ಪಡೆದುಕೊಂಡ ಆರೋಪದ ಮೇಲೆ ದಂತೇವಾಡದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಡಿಎಸ್‌ಪಿ ಕಲ್ಪನಾ ವರ್ಮಾ ಅವರನ್ನು ಪೊಲೀಸ್ ಇಲಾಖೆ ಅಮಾನತುಗೊಳಿಸಿದೆ.
2021ರಲ್ಲಿ ಶುರುವಾದ ಪರಿಚಯ, ಪ್ರೀತಿಯ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ವಹಿವಾಟು!
ರಾಯ್‌ಪುರದ ಹೋಟೆಲ್ ಉದ್ಯಮಿ ದೀಪಕ್ ಟಂಡನ್ ಅವರಿಗೆ ಈಗಾಗಲೇ ವಿವಾಹವಾಗಿದ್ದರೂ, 2021ರಲ್ಲಿ ಡಿಎಸ್‌ಪಿ ಕಲ್ಪನಾ ವರ್ಮಾ ಅವರ ಪರಿಚಯವಾಗಿತ್ತು ಎನ್ನಲಾಗಿದೆ. ಪರಿಚಯ ಕ್ರಮೇಣ ಆತ್ಮೀಯತೆಗೆ ತಿರುಗಿದ್ದು, ಮದುವೆಯಾಗುವುದಾಗಿ ನಂಬಿಸಿ ಉದ್ಯಮಿಯಿಂದ ಹಣ ಹಾಗೂ ದುಬಾರಿ ಉಡುಗೊರೆಗಳನ್ನು ಪಡೆಯಲು ಆರಂಭಿಸಿದ್ದರು ಎಂಬ ಆರೋಪ ಕೇಳಿಬಂದಿದೆ.
ಉದ್ಯಮಿಯಿಂದ ಕೋಟ್ಯಂತರ ರೂಪಾಯಿ ನಗದು, ಐಷಾರಾಮಿ ಕಾರು, ವಜ್ರದ ಉಂಗುರ, ಚಿನ್ನದ ಸರ ಸೇರಿದಂತೆ ಹಲವು ಬೆಲೆಬಾಳುವ ವಸ್ತುಗಳನ್ನು ಪಡೆದಿದ್ದಾರೆ ಎನ್ನಲಾಗಿದೆ. ಅಷ್ಟೇ ಅಲ್ಲದೆ, ಉದ್ಯಮಿಗೆ ಸೇರಿದ ಹೋಟೆಲ್‌ವೊಂದನ್ನು ತಮ್ಮ ಸಹೋದರನ ಹೆಸರಿಗೆ ನೋಂದಣಿ ಮಾಡಿಸಿಕೊಂಡಿದ್ದಾರೆ ಎಂಬ ಗಂಭೀರ ಆರೋಪವೂ ಇದೆ.
ಉದ್ಯಮಿಯ ಬೇಡಿಕೆಗಳನ್ನು ಈಡೇರಿಸುವವರೆಗೂ ಮದುವೆಯ ಭರವಸೆ ನೀಡುತ್ತಿದ್ದ ಅಧಿಕಾರಿ, ಹಣ ಮತ್ತು ಆಸ್ತಿ ಪಡೆದ ಬಳಿಕ ಉದ್ಯಮಿಯಿಂದ ಅಂತರ ಕಾಯ್ದುಕೊಳ್ಳಲು ಆರಂಭಿಸಿದ್ದರು. ಬಳಿಕ ಬ್ಲ್ಯಾಕ್‌ಮೇಲ್ ಮಾಡಿರುವ ಆರೋಪವೂ ಕೇಳಿಬಂದಿದೆ.
ಪತ್ನಿಗೆ ಸತ್ಯ ತಿಳಿಸಿ ಪೊಲೀಸ್ ಠಾಣೆ ಮೆಟ್ಟಿಲೇರಿದ ಉದ್ಯಮಿ!
ತಾನು ಮೋಸ ಹೋಗಿರುವುದನ್ನು ಅರಿತ ದೀಪಕ್ ಟಂಡನ್ ಕೊನೆಗೆ ಪತ್ನಿಗೆ ಸಂಪೂರ್ಣ ವಿಚಾರವನ್ನು ತಿಳಿಸಿದ್ದಾರೆ. ಬಳಿಕ ಪೊಲೀಸ್ ಠಾಣೆಗೆ ತೆರಳಿ ಡಿಎಸ್‌ಪಿ ವಿರುದ್ಧ ದೂರು ದಾಖಲಿಸಿದ್ದಾರೆ. ತಮ್ಮ ಆರೋಪಗಳಿಗೆ ಪೂರಕವಾಗಿ ಇಬ್ಬರ ನಡುವಿನ ಫೋಟೋಗಳು, ವಾಟ್ಸ್‌ಆ್ಯಪ್ ಚಾಟ್‌ಗಳು ಹಾಗೂ ಬ್ಯಾಂಕ್ ವಹಿವಾಟಿನ ದಾಖಲೆಗಳನ್ನು ಪೊಲೀಸರಿಗೆ ಸಲ್ಲಿಸಿದ್ದಾರೆ ಎನ್ನಲಾಗಿದೆ.
ಆರೋಪ ನಿರಾಕರಿಸಿದ ಡಿಎಸ್‌ಪಿ; ಇಲಾಖೆಯಿಂದ ಅಮಾನತು!
ಇತ್ತ ತಮ್ಮ ಮೇಲಿನ ಆರೋಪಗಳನ್ನು ಡಿಎಸ್‌ಪಿ ಕಲ್ಪನಾ ವರ್ಮಾ ಸಂಪೂರ್ಣವಾಗಿ ತಳ್ಳಿಹಾಕಿದ್ದಾರೆ. ಉದ್ಯಮಿ ಸಲ್ಲಿಸಿರುವ ಫೋಟೋಗಳು ಮತ್ತು ವಾಟ್ಸ್‌ಆ್ಯಪ್ ಸಂದೇಶಗಳು ಎಡಿಟ್ ಮಾಡಲ್ಪಟ್ಟಿದ್ದು, ಆರೋಪಗಳಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.
ಆದರೆ ಪ್ರಕರಣದ ಪ್ರಾಥಮಿಕ ತನಿಖೆಯಲ್ಲಿ ಹಣಕಾಸಿನ ವಹಿವಾಟಿಗೆ ಸಂಬಂಧಿಸಿದ ಸಾಕ್ಷ್ಯಗಳು ದೊರೆತ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಅವರನ್ನು ಅಮಾನತುಗೊಳಿಸಿದೆ ಎಂದು ವರದಿಯಾಗಿದೆ.
ಉದ್ಯಮಿ ವಿರುದ್ಧವೂ ವಾರಂಟ್!
ಈ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದ್ದು, ₹28 ಲಕ್ಷ ರೂಪಾಯಿ ವಂಚನೆಗೆ ಸಂಬಂಧಿಸಿದ ಪ್ರತ್ಯೇಕ ಪ್ರಕರಣದಲ್ಲಿ ದೀಪಕ್ ಟಂಡನ್ ವಿರುದ್ಧವೂ ವಾರಂಟ್ ಜಾರಿಯಾಗಿದೆ ಎನ್ನಲಾಗಿದೆ.
ಒಂದೆಡೆ ಮಹಿಳಾ ಡಿಎಸ್‌ಪಿ ವಿರುದ್ಧ ಕೋಟ್ಯಂತರ ರೂಪಾಯಿ ವಂಚನೆ ಆರೋಪ, ಮತ್ತೊಂದೆಡೆ ಉದ್ಯಮಿ ವಿರುದ್ಧವೂ ವಾರಂಟ್ ಜಾರಿಯಾಗಿರುವುದು ಪ್ರಕರಣವನ್ನು ಮತ್ತಷ್ಟು ಕುತೂಹಲಕಾರಿ ಹಂತಕ್ಕೆ ತಲುಪಿಸಿದೆ. ಸದ್ಯ ಈ ಹೈಪ್ರೊಫೈಲ್ ಪ್ರಕರಣದ ತನಿಖೆ ಹಾಗೂ ನ್ಯಾಯಾಲಯದ ವಿಚಾರಣೆ ಮುಂದುವರಿದಿದೆ.
ರಾಂಚಿ: ಜೈಲಿನೊಳಗೆ ಮಹಿಳಾ ಕೈದಿಯೊಬ್ಬರು ಗರ್ಭಿಣಿಯಾಗಿರುವ ಆಘಾತಕಾರಿ ಘಟನೆ ಜಾರ್ಖಂಡ್‌ನ ಹೋಟ್‌ವಾರ್ ಕೇಂದ್ರ ಕಾರಾಗೃಹದಲ್ಲಿ ಬೆಳಕಿಗೆ ಬಂದಿದೆ. ಶಿಕ್ಷೆ ಅನುಭವಿಸುತ್ತಿದ್ದ…
ತಮಿಳುನಾಡು: ಮೂವರು ಮಕ್ಕಳ ತಾಯಿಯಾಗಿದ್ದ 24 ವರ್ಷದ ಮಹಿಳೆಯೊಬ್ಬರನ್ನು ಪ್ರಿಯಕರನೇ ಹ*ತ್ಯೆ ಮಾಡಿರುವ ಆಘಾತಕಾರಿ ಘಟನೆ ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯಲ್ಲಿ…
ಕೊಪ್ಪಳ: ಸಾರಿಗೆ ಬಸ್‌ನ ಮುಂಭಾಗದ ಚಕ್ರದ ಕಮಾನ್ ಸ್ಪ್ರಿಂಗ್ ಪಟ್ಟಿಯ ನಟ್ ಕಳಚಿದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಬಸ್…
ಲಿಂಗಸುಗೂರು: ಅರಣ್ಯ ಸಂಪತ್ತಾದ ಸಾಗುವಾನಿ ಮರವನ್ನು ಅಕ್ರಮವಾಗಿ ಕಡಿದು ಸಾಗಿಸುತ್ತಿದ್ದ ಜಾಲವನ್ನು ಪೊಲೀಸರು ಪತ್ತೆಹಚ್ಚಿದ್ದು, ಮೂರು ಬೊಲೆರೋ ಗೂಡ್ಸ್ ವಾಹನಗಳ…
ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ ಮುಂಡಗೋಡ: 12 ವರ್ಷದ ಬಾಲಕಿಯ ಮೇಲೆ ನಡೆದಿರುವ ಅಮಾನವೀಯ…
ರಾಜಸ್ಥಾನ: ಜಿಮ್‌ನಲ್ಲಿ ಕಟ್ಟುಮಸ್ತಾದ ದೇಹದಂಡನೆ ಪ್ರದರ್ಶಿಸುವ ವಿಡಿಯೋ ಹಾಗೂ ಫೋಟೋಗಳನ್ನು ತೋರಿಸಿ 82 ವರ್ಷದ ಉದ್ಯಮಿಯೊಬ್ಬರನ್ನು ಹನಿಟ್ರ್ಯಾಪ್ ಬಲೆಗೆ ಬೀಳಿಸಿ…